ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

15 ವರ್ಷದ ಮಕ್ಕಳಿಗೆ ತಪ್ಪಾಗಿ ಕೋವಿಡ್ 19 ಲಸಿಕೆ, ಆಸ್ಪತ್ರೆಗೆ ದಾಖಲು

|
Google Oneindia Kannada News

ತಿರುವನಂತಪುರಂ, ಡಿಸೆಂಬರ್ 03: ಆರೋಗ್ಯ ಕೇಂದ್ರಕ್ಕೆ ಮುನ್ನೆಚ್ಚರಿಕಾ ಲಸಿಕೆ ಪಡೆಯಲು ಹೋಗಿದ್ದ 15 ವರ್ಷದ ಮಕ್ಕಳಿಗೆ ಕೋವಿಡ್ 19 ಲಸಿಕೆಯನ್ನು ನೀಡಿದ್ದು, ಇದೀಗ ಆಸ್ಪತ್ರೆಗೆ ದಾಖಲಿಸಲಾಗಿದೆ.

15 ವರ್ಷದ ಮಕ್ಕಳಿಬ್ಬರಿಗೆ ತಪ್ಪಾಗಿ ಕೋವಿಡ್-19 ಲಸಿಕೆ ನೀಡಲಾಗಿದ್ದು, ತತ್ಪರಿಣಾಮ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ತಿರುವನಂತಪುರಂನ ಗ್ರಾಮೀಣ ಭಾಗದಲ್ಲಿರುವ ಆರ್ಯನಾಡು ಎಂಬ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದೆ.

ಕೊರೊನಾ ಹಾಟ್‌ಸ್ಪಾಟ್ ಆದ ರಾಜ್ಯದ ಶಾಲಾ- ಕಾಲೇಜುಗಳು; ಮೂರನೇ ಅಲೆ ಆರಂಭವೇ?ಕೊರೊನಾ ಹಾಟ್‌ಸ್ಪಾಟ್ ಆದ ರಾಜ್ಯದ ಶಾಲಾ- ಕಾಲೇಜುಗಳು; ಮೂರನೇ ಅಲೆ ಆರಂಭವೇ?

10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರು ಆರ್ಯನಾಡು ಸಮುದಾಯ ಆರೋಗ್ಯ ಕೇಂದ್ರಕ್ಕೆ ಮುನ್ನೆಚ್ಚರಿಕಾ ಲಸಿಕೆ ತೆಗೆದುಕೊಳುವುದಕ್ಕೆ ತೆರಳಿದ್ದರು. ಆದರೆ ಮುನ್ನೆಚ್ಚರಿಕಾ ಲಸಿಕೆಯನ್ನು ನೀಡುವ ಬದಲಿಗೆ ವೈದ್ಯಕೀಯ ಸಿಬ್ಬಂದಿಗಳು ತಪ್ಪಾಗಿ ಕೋವಿಡ್-19 ಲಸಿಕೆಯನ್ನು ನೀಡಿದ್ದಾರೆ.

Two 15-year-olds Hospitalised In Kerala After Taken Covid Vaccines By Mistake

ಮಕ್ಕಳ ಆರೋಗ್ಯ ಈವರೆಗೂ ಸ್ಥಿರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ವಿದ್ಯಾರ್ಥಿನಿಯರ ಪೋಷಕರಿಂದ ಎರಡು ಪ್ರತ್ಯೇಕ ದೂರುಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಆರ್ಯನಾಡು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಬ್ಬಂದಿಗಳು ಇಬ್ಬರು ವಿದ್ಯಾರ್ಥಿನಿಯರ ಮೇಲೆ ನಿಗಾ ವಹಿಸಲು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಎಲ್ಲೆಡೆ ಓಮಿಕ್ರಾನ್ ಭಯ: ಸಾಕಷ್ಟು ಶಾಲೆ ಹಾಗೂ ಕಾಲೇಜುಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದೆ, ಜತೆಗೆ ಇದೀಗ ಓಮಿಕ್ರಾನ್ ಭಯವೂ ಸೇರಿಕೊಂಡಿದೆ.
ಕೋವಿಡ್ ಪ್ರಕರಣಗಳಲ್ಲಿ ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಿಂದ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದು, ಈ ಪ್ರಮಾಣ ಶೇಕಡ 55ರಷ್ಟಿದೆ.

ಕಳೆದ ವಾರ ಕೇರಳದಲ್ಲಿ ಶೇಕಡ 54ರಷ್ಟು ಪ್ರಕರಣಗಳು ವರದಿಯಾಗಿದ್ದವು. ದೇಶದ 18 ಜಿಲ್ಲೆಗಳಲ್ಲಿ ವಾರದ ಪಾಸಿಟಿವಿಟಿ ದರ ಶೇ. 5ರಿಂದ 10ರ ನಡುವೆ ವರದಿಯಾಗುತ್ತಿದ್ದು, 15 ಜಿಲ್ಲೆಗಳಲ್ಲಿ ಶೇ. 10ರಷ್ಟು ವರದಿಯಾಗುತ್ತಿದೆ ಎಂದು ಅಂಕಿ ಅಂಶ ನೀಡಿದರು.

ದೇಶದಲ್ಲಿ ಈವರೆಗೆ 79.16 ಕೋಟಿ ವಯಸ್ಕ ಜನಸಂಖ್ಯೆಗೆ ಮೊದಲ ಡೋಸ್ ಲಸಿಕೆ ನೀಡಲಾಗಿದೆ. 45.92 ಕೋಟಿ ಮಂದಿಗೆ ಎರಡೂ ಡೋಸ್ ಗಳನ್ನು ನೀಡಲಾಗಿದೆ. ಒಟ್ಟಾರೆ 125 ಕೋಟಿಗೂ ಹೆಚ್ಚು ಲಸಿಕೆಗಳನ್ನು ನೀಡಲಾಗಿದೆ ಎಂದು ವಿವರಿಸಿದರು.

ಇದರಿಂದ ಶೇ. 84.3ರಷ್ಟು ವಯಸ್ಕರಿಗೆ ಒಂದು ಡೋಸ್, ಶೇಕಡ 49ರಷ್ಟು ಮಂದಿಗೆ ಎರಡೂ ಡೋಸ್ ಲಸಿಕೆ ನೀಡಲಾಗಿದೆ. ಜಗತ್ತಿನಾದ್ಯಂತ ತಲ್ಲಣ ಸೃಷ್ಟಿಸಿರುವ ಓಮಿಕ್ರಾನ್ ಇದೀಗ ಭಾರತಕ್ಕೂ ಕಾಲಿಟ್ಟಿದೆ. ಅದರಲ್ಲೂ ಕರ್ನಾಟಕದಲ್ಲೇ ಎರಡು ಪ್ರಕರಣಗಳು ಪತ್ತೆಯಾಗಿವೆ.

66 ಮತ್ತು 46 ವರ್ಷದ ವ್ಯಕ್ತಿಗಳಲ್ಲಿ ಈ ಸೋಂಕು ಪತ್ತೆಯಾಗಿದೆ. ಅಲ್ಲದೇ ಇವರಿಬ್ಬರೂ ಬೆಂಗಳೂರಿನವರೇ ಎಂದು ಹೇಳಲಾಗುತ್ತಿದೆ. ಇದರಲ್ಲಿ ಓರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದ್ದು, ಮತ್ತೋರ್ವ ವ್ಯಕ್ತಿ ವಿದೇಶಕ್ಕೆ ಹೋಗಿದ್ದಾರೆ ಎಂಬ ಶಂಕೆ ಇದೆ.

ಸುಮಾರು 29 ದೇಶಗಳಲ್ಲಿ ಇಲ್ಲಿಯವರೆಗೆ ಓಮಿಕ್ರಾನ್​​ ರೂಪಾಂತರದ 373 ಪ್ರಕರಣಗಳು ವರದಿಯಾಗಿವೆ ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

ಭಾರತ ಮತ್ತು ಇತರ 11 ದೇಶಗಳನ್ನು ಒಳಗೊಂಡಿರುವ ಆಗ್ನೇಯ ಏಷ್ಯಾದ ದೇಶಗಳು ಕಳೆದ ಒಂದು ವಾರದಲ್ಲಿ ಕೇವಲ 1.2 ಲಕ್ಷ ಪ್ರಕರಣಗಳನ್ನು ವರದಿ ಮಾಡಿದೆ. ವಿಶ್ವದ ಪ್ರಕರಣಗಳಲ್ಲಿ ಕೇವಲ ಶೇ. 3.1ರಷ್ಟು ಮಾತ್ರ ಈ ದೇಶಗಳಲ್ಲಿ ಪತ್ತೆಯಾಗಿವೆ. ಆಗ್ನೇಯ ಏಷ್ಯಾದ ದೇಶಗಳಲ್ಲಿ ಪ್ರಕರಣಗಳು ಇಳಿಕೆಯಾಗುತ್ತಿವೆ ಎಂದರು.

ಒಟ್ಟಾರೆ ಪ್ರಪಂಚದಾದ್ಯಂತ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ ಒಂದು ವಾರದಲ್ಲಿ ಯುರೋಪ್ ವಿಶ್ವದ ಶೇ.70ರಷ್ಟು ಪ್ರಕರಣಗಳನ್ನು ವರದಿ ಮಾಡಿದೆ. ನವೆಂಬರ್ 28ಕ್ಕೆ ಕೊನೆಗೊಂಡ ವಾರದಲ್ಲಿ, ಯುರೋಪಿಯನ್ ದೇಶದಲ್ಲಿ ಸುಮಾರು 2.75 ಲಕ್ಷ ಹೊಸ ಪ್ರಕರಣಗಳು ಮತ್ತು 31,000ಕ್ಕೂ ಹೆಚ್ಚು ಸಾವುಗಳು ವರದಿಯಾಗಿವೆ ಎಂದು ಲವ್ ಅಗರ್ವಾಲ್ ಹೇಳಿದರು.

English summary
Two 15-year-old girl students from Aryanadu in the rural parts of Thiruvananthapuram district had to be hospitalized after the hospital staff administered them Covishield vaccine instead of preventive vaccine to be administered at the age of 15.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X