ಕೇರಳದಲ್ಲಿ ಮತ್ತೆರಡು ಮಂದಿಗೆ ಕೊರೊನಾ ವೈರಸ್ ಸೋಂಕು ಪತ್ತೆ
ತಿರುವನಂತಪುರಂ, ಮಾರ್ಚ್.10: ಕೇರಳದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಲೇ ಸಾಗಿದೆ. ಮಂಗಳವಾರ ಒಂದೇ ದಿನ ರಾಜ್ಯದಲ್ಲಿ 8 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.
ಸೋಮವಾರವಷ್ಟೇ 3 ವರ್ಷದ ಮಗುವಿನೆ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಮಂಗಳವಾರ ಮಗುವಿನ ಪೋಷಕರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಯಿತು. ಈ ವೇಳೆ ಮಗುವಿನ ತಂದೆ ಹಾಗೂ ತಾಯಿಯಲ್ಲಿ ಸೋಂಕು ಪತ್ತೆಯಾಗಿದೆ.

ರಾಜ್ಯದಲ್ಲಿ ಇದುವರೆಗೂ 14 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇರಳ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಮಾಹಿತಿ ನೀಡಿದ್ದಾರೆ. ಇನ್ನು, ಸೋಂಕಿತರನ್ನು ಐಸೋಲೆಟೆಡ್ ವಾರ್ಡ್ ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.












Click it and Unblock the Notifications