ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಡಿಯೋ: ಕೇರಳದಲ್ಲಿ ರಾಹುಲ್ ಗಾಂಧಿ ಕಚೇರಿ ಧ್ವಂಸ, ಎಸ್‌ಎಫ್‌ಐ ಮೇಲೆ ಆರೋಪ

|
Google Oneindia Kannada News

ನವದೆಹಲಿ ಜೂನ್ 24: ಕೇರಳದ ವಯನಾಡ್ ಜಿಲ್ಲೆಯ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಕಚೇರಿಯಲ್ಲಿ ವಿಧ್ವಂಸಕ ಕೃತ್ಯ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ರಾಹುಲ್ ಗಾಂಧಿ ಅವರ ವಯನಾಡ್ ಕಚೇರಿಯ ಗೋಡೆಯನ್ನು ಹತ್ತಿದ ಗೂಂಡಾಗಳು ಎಸ್‌ಎಫ್‌ಐ ಧ್ವಜಗಳನ್ನು ಧ್ವಂಸಗೊಳಿಸಿದ್ದಾರೆ ಎಂದು ಭಾರತೀಯ ಯುವ ಕಾಂಗ್ರೆಸ್ ಟ್ವೀಟ್‌ನಲ್ಲಿ ಆರೋಪಿಸಿದೆ.

ವಯನಾಡಿನಲ್ಲಿ ರಾಹುಲ್ ಗಾಂಧಿಯವರ ಕಚೇರಿಯನ್ನು ಧ್ವಂಸಗೊಳಿಸಿದ ಆರೋಪವನ್ನು ಭಾರತೀಯ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಎದುರಿಸುತ್ತಿದೆ. ಕಚೇರಿಗೆ ನುಗ್ಗಿದ ಜನರು ಕುರ್ಚಿಗಳನ್ನು ಒಡೆದುಹಾಕಿದ್ದಾರೆ ಎನ್ನಲಾಗುತ್ತಿದೆ. ಕಚೇರಿ ಸಿಬ್ಬಂದಿ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಕೇರಳದ ವಯನಾಡ್ ಜಿಲ್ಲೆಯ ಕಲ್ಪೆಟ್ಟಾ ಬಳಿಯ ಕೈನಾಟಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕಚೇರಿ ಮೇಲೆ ದಾಳಿ ನಡೆದಿದೆ. ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ಟಿ ಸಿದ್ದಿಕಿ ಅವರು ಈ ದಾಳಿ ಪೂರ್ವಯೋಜಿತ ದಾಳಿಯಾಗಿದ್ದು, ಎಸ್‌ಎಫ್‌ಐ ಅನ್ನು 'ಗೂಂಡಾ' ಎಂದು ಕರೆದಿದ್ದಾರೆ. ಘಟನೆಯ ಬಳಿಕ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

Video: Rahul Gandhi office wreck in Kerala

ಮತ್ತೊಂದೆಡೆ, ಸಿಪಿಎಂ ಆಡಳಿತದ ವಿರುದ್ಧ ಕಾಂಗ್ರೆಸ್ ಮುಖಂಡ ಕೆಸಿ ವೇಣುಗೋಪಾಲ್ ಆರೋಪಿಸಿದ್ದಾರೆ. "ಪೊಲೀಸರ ಸಮ್ಮುಖದಲ್ಲಿಯೇ ಈ ಘಟನೆ ನಡೆದಿದೆ. ಇದು ಸಿಪಿಎಂ ನಾಯಕತ್ವದ ಸ್ಪಷ್ಟ ಷಡ್ಯಂತ್ರ. ಕಳೆದ 5 ದಿನಗಳಿಂದ ಇಡಿ ಅವರನ್ನು ವಿಚಾರಣೆ ನಡೆಸುತ್ತಿದ್ದು, ನರೇಂದ್ರ ಮೋದಿ ವಿರುದ್ಧ ಕೇರಳ ಸಿಪಿಎಂ ಏಕೆ ಅಡ್ಡಗಾಲು ಹಾಕುತ್ತಿದೆ ಎಂದು ನನಗೆ ತಿಳಿದಿಲ್ಲ. ಸೀತಾರಾಮ್ ಯೆಚೂರಿ ಅವರು ಅಗತ್ಯ ಕ್ರಮ ಕೈಗೊಳ್ಳುತ್ತಾರೆ," ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

English summary
A case of vandalism has come to light in the office of Congress MP Rahul Gandhi in Wayanad district of Kerala.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X