ವಿಡಿಯೋ: ರಸ್ತೆಯಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ, ಗಂಭೀರ ಗಾಯ
ತಿರುವನಂತಪುರಂ, ಮಾರ್ಚ್ 11: ರಸ್ತೆಯಲ್ಲಿ ಸಾಗುತ್ತಿದ್ದ ಪಾದಾಚಾರಿಗಳಿಗೆ ಕಾರು ಡಿಕ್ಕಿ ಹೊಡೆದಿರುವ ಘಟನೆ ಕೇರಳದ ಪೂಚಕ್ಕಲ್ ನಗರದಲ್ಲಿ ನಡೆದಿದೆ. ಈ ಅಪಘಾತದಲ್ಲಿ ಒಟ್ಟು 8 ಜನರು ಗಾಯಗೊಂಡಿದ್ದು, ಅದರಲ್ಲಿ ನಾಲ್ಕು ವಿದ್ಯಾರ್ಥಿಗಳು ಒಳಗೊಂಡಿದ್ದಾರೆ.
ಮಾರ್ಚ್ 10 ರಂದು ಮಧ್ಯಾಹ್ನ ಸುಮಾರು 2 ಗಂಟೆಗೆ ಈ ಅಪಘಾತ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಅಪಘಾತದ ವಿಡಿಯೋ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಕಾರಿನಲ್ಲಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮನೋಜ್ ಎಂಬ ವ್ಯಕ್ತಿ ಕಾರು ಚಾಲನೆ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಸದ್ಯಕ್ಕೆ ಚಾಲಕ ಮದ್ಯಪಾನ ಸೇವಿಸಿದ್ದನಾ ಎಂಬುದು ಖಚಿತವಾಗಿಲ್ಲ. ಆದರೆ, ಆತನ ರಕ್ತ ಪರೀಕ್ಷೆ ಮಾಡಲು ಪ್ರಕ್ರಿಯೆ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಮನೋಜ್ ಸ್ಥಳೀಯ ವ್ಯಕ್ತಿಯಾಗಿದ್ದು ಈತನೇ ಕಾರಿನ ಮಾಲೀಕ. ಈತನ ಜೊತೆ ಅಸ್ಸಾಂ ಮೂಲದ ಆನಂದ್ ಎಂಬ ವ್ಯಕ್ತಿಯೂ ಕಾರಿನಲ್ಲಿದ್ದರು. ಇಬ್ಬರಿಗೂ ಗಾಯಗಳಾಗಿದ್ದ ಸದ್ಯ ಆಸ್ಪತ್ರೆಯಲ್ಲಿದ್ದಾರೆ ಎಂದು ತಿಳಿದಿದೆ.
Car swerves suddenly, 3 school students tossed into the air in Kerala.
— Harry Dsouza, Mangaluru 🙏🇮🇳 💯 (@ds79131542) March 10, 2020
Student were going home after their exams.😢😢😢 pic.twitter.com/T29MmBU0PT
ಮೇಲ್ನೋಟಕ್ಕೆ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಇನ್ನು ಅಪಘಾತಕ್ಕೆ ಗುರಿಯಾದ ವಿದ್ಯಾರ್ಥಿಗಳನ್ನು ಅನಕಾ, ಅರ್ಚನಾ, ಚಂದನಾ ಹಾಗೂ ರಾಕಿ ಎಂದು ಗುರುತಿಸಲಾಗಿದೆ. ಈ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಆಗಿಲ್ಲ.












Click it and Unblock the Notifications