ವೈರಲ್ ವಿಡಿಯೋ: ಕೊನೆಗೂ ಶಬರಿಮಲೆ ದೇವಾಲಯ ಪ್ರವೇಶಿಸಿದ ಇಬ್ಬರು ಮಹಿಳೆಯರು

Recommended Video

      Sabarimala Verdict : ಕೊನೆಗೂ ಶಬರಿಮಲೈ ಅಯ್ಯಪ್ಪ ದೇವಸ್ಥಾನ ಪ್ರವೇಶಿಸಿದ ಇಬ್ಬರು ಮಹಿಳೆಯರು | Oneindia Kannada

      ತಿರುವನಂತಪುರಂ, ಜನವರಿ 02: ಶಬರಿಮಲೆಯ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕಿದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್ ತೆರವುಗೊಳಿಸಿದ ಮೇಲೆ ಮೊದಲ ಬಾರಿಗೆ ಇಬ್ಬರು ಮಹಿಳೆಯರು ದೇವಾಲಯ ಪ್ರವೇಶಿಸಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

      ಬೆಳಗ್ಗಿನ ಜಾವ 3:45 ರ ಸುಮಾರಿಗೆ ಬಿಂದು ಮತ್ತು ಕನಕದುರ್ಗಾ ಎಂಬ 40 ವರ್ಷ ವಯಸ್ಸಿನ ಇಬ್ಬರು ಮಹಿಳೆಯರು ಓಡುತ್ತ ಹೋಗಿ ದೇವಾಲಯ ಪ್ರವೇಶಿಸುತ್ತಿರುವ ಮತ್ತು ಸುತ್ತ ಪೊಲೀಸ್ ರಕ್ಷಣೆ ಇರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

      ಈ ಇಬ್ಬರು ಮಹಿಳೆಯರೂ ಡಿಸೆಂಬರ್ 18 ರಂದೇ ದೇವಾಲಯ ಪ್ರವೇಶಕ್ಕೆ ಯತ್ನಿಸಿದ್ದರು. ಆದರೆ ಆಗ ಸಾಧ್ಯವಾಗಿರಲಿಲ್ಲ. ಆದರೆ ಇದೀಗ ಪೊಲೀಸ್ ರಕ್ಷಣೆಯೊಂದಿಗೆ ದೇವಾಲಯ ಪ್ರವೇಶಿಸುವ ಮೂಲಕ ಎಂಟು ನೂರು ವರ್ಷಗಳ ಸಂಪ್ರದಾಯಕ್ಕೆ ಬ್ರೇಕ್ ಹಾಕಿದ್ದಾರೆ.

      Viral Video: 2 women enter Ayyappa Sabarimala Temple

      ಋತುಮತಿಯಾಗುವ 10 ರಿಂದ 60 ವರ್ಷ ವಯಸ್ಸಿನ ಮಹಿಳೆಯರು ದೇವಾಲಯ ಪ್ರವೇಶಿಸದಂತೆ ಕಳೆದ ಎಂಟು ನೂರು ವರ್ಷಗಳಿಂದ ನಿರ್ಬಂಧ ಹೇರಲಾಗಿತ್ತು.

      ಆದರೆ ಕಳೆದ ಸೆಪ್ಟೆಂಬರ್ 28 ರಂದು ಅಂದಿನ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರಿದ್ದ ಪಂಚ ಸದಸ್ಯ ಪೀಠ ಮಹಿಳೆಯರ ಪ್ರವೇಶಕ್ಕಿದ್ದ ನಿರ್ಬಂಧವನ್ನು ತೆರವುಗೊಳಿಸಿ ಐತಿಹಾಸಿಕ ತೀರ್ಪು ನೀಡಿತ್ತು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+