ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೈರಲ್ ವಿಡಿಯೋ: ಕೊನೆಗೂ ಶಬರಿಮಲೆ ದೇವಾಲಯ ಪ್ರವೇಶಿಸಿದ ಇಬ್ಬರು ಮಹಿಳೆಯರು

|
Google Oneindia Kannada News

Recommended Video

Sabarimala Verdict : ಕೊನೆಗೂ ಶಬರಿಮಲೈ ಅಯ್ಯಪ್ಪ ದೇವಸ್ಥಾನ ಪ್ರವೇಶಿಸಿದ ಇಬ್ಬರು ಮಹಿಳೆಯರು | Oneindia Kannada

ತಿರುವನಂತಪುರಂ, ಜನವರಿ 02: ಶಬರಿಮಲೆಯ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕಿದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್ ತೆರವುಗೊಳಿಸಿದ ಮೇಲೆ ಮೊದಲ ಬಾರಿಗೆ ಇಬ್ಬರು ಮಹಿಳೆಯರು ದೇವಾಲಯ ಪ್ರವೇಶಿಸಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಬೆಳಗ್ಗಿನ ಜಾವ 3:45 ರ ಸುಮಾರಿಗೆ ಬಿಂದು ಮತ್ತು ಕನಕದುರ್ಗಾ ಎಂಬ 40 ವರ್ಷ ವಯಸ್ಸಿನ ಇಬ್ಬರು ಮಹಿಳೆಯರು ಓಡುತ್ತ ಹೋಗಿ ದೇವಾಲಯ ಪ್ರವೇಶಿಸುತ್ತಿರುವ ಮತ್ತು ಸುತ್ತ ಪೊಲೀಸ್ ರಕ್ಷಣೆ ಇರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Big Breaking: ಶಬರಿಮಲೆ ದೇವಾಲಯ ಪ್ರವೇಶಿಸಿದ ಇಬ್ಬರು ಮಹಿಳೆಯರುBig Breaking: ಶಬರಿಮಲೆ ದೇವಾಲಯ ಪ್ರವೇಶಿಸಿದ ಇಬ್ಬರು ಮಹಿಳೆಯರು

ಈ ಇಬ್ಬರು ಮಹಿಳೆಯರೂ ಡಿಸೆಂಬರ್ 18 ರಂದೇ ದೇವಾಲಯ ಪ್ರವೇಶಕ್ಕೆ ಯತ್ನಿಸಿದ್ದರು. ಆದರೆ ಆಗ ಸಾಧ್ಯವಾಗಿರಲಿಲ್ಲ. ಆದರೆ ಇದೀಗ ಪೊಲೀಸ್ ರಕ್ಷಣೆಯೊಂದಿಗೆ ದೇವಾಲಯ ಪ್ರವೇಶಿಸುವ ಮೂಲಕ ಎಂಟು ನೂರು ವರ್ಷಗಳ ಸಂಪ್ರದಾಯಕ್ಕೆ ಬ್ರೇಕ್ ಹಾಕಿದ್ದಾರೆ.

Viral Video: 2 women enter Ayyappa Sabarimala Temple

ಋತುಮತಿಯಾಗುವ 10 ರಿಂದ 60 ವರ್ಷ ವಯಸ್ಸಿನ ಮಹಿಳೆಯರು ದೇವಾಲಯ ಪ್ರವೇಶಿಸದಂತೆ ಕಳೆದ ಎಂಟು ನೂರು ವರ್ಷಗಳಿಂದ ನಿರ್ಬಂಧ ಹೇರಲಾಗಿತ್ತು.

ಅಯ್ಯಪ್ಪನ ದರ್ಶನ ಮಾಡದೆ ಹಿಂದಿರುಗಲ್ಲ : ಇಬ್ಬರು ಮಹಿಳೆಯರ ಸವಾಲುಅಯ್ಯಪ್ಪನ ದರ್ಶನ ಮಾಡದೆ ಹಿಂದಿರುಗಲ್ಲ : ಇಬ್ಬರು ಮಹಿಳೆಯರ ಸವಾಲು

ಆದರೆ ಕಳೆದ ಸೆಪ್ಟೆಂಬರ್ 28 ರಂದು ಅಂದಿನ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರಿದ್ದ ಪಂಚ ಸದಸ್ಯ ಪೀಠ ಮಹಿಳೆಯರ ಪ್ರವೇಶಕ್ಕಿದ್ದ ನಿರ್ಬಂಧವನ್ನು ತೆರವುಗೊಳಿಸಿ ಐತಿಹಾಸಿಕ ತೀರ್ಪು ನೀಡಿತ್ತು.

English summary
Bindu and Kanakdurga, 2 women enter Sabarimala Ayyappa temple in Kerala. Video becomes viral.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X