ಶಬರಿಮಲೆಗೆ ಬರುವ ಮಹಿಳೆಯರನ್ನು ಕತ್ತರಿಸಿ ಎಂದ ಮಲಯಾಳಂ ನಟ
ಕೊಲ್ಲಂ, ಅಕ್ಟೋಬರ್ 12: "ಕೇರಳದ ಶಬರಿಮಲೆಯ ಅಯ್ಯಪ್ಪ ದೇವಾಲಯಕ್ಕೆ ಬರುವ ಮಹಿಳೆಯರನ್ನು ಕತ್ತರಿಸಿ, ಒಂದು ಭಾಗವನ್ನು ದೆಹಲಿಗೆ, ಇನ್ನೊಂದು ಭಾಗವನ್ನು ಕೇರಳ ಮುಖ್ಯಮಂತ್ರಿ ಕಚೇರಿಗೆ ಕಳಿಸಿ" ಎಂಬ ವಿವಾದಾತ್ಮಕ ಹೇಳಿಕೆಯನ್ನು ಮಲಯಾಳಂ ನಟ ಕೊಲ್ಲಂ ತುಳಸಿ ನೀಡಿದ್ದಾರೆ.
ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ವಿರೋಧಿಸಿ ಅವರು ಮಾತನಾಡುತ್ತಿದ್ದರು.
ಶಬರಿಮಲೆಗೆ ಮಹಿಳೆಯರಿಗೆ ಪ್ರವೇಶ ನೀಡಬಾರದು, ಅದರಿಂದ ದೇವಾಳಯದ ಪಾವಿತ್ರ್ಯಕ್ಕೆ ಧಕ್ಕೆ ಬರುತ್ತದೆ ಎಂಬ ಕಾರಣಕ್ಕೆ ಈ ಪದ್ಧತಿಯನ್ನು ಎಷ್ಟೋ ಶತಮಾನಗಳಿಂದ ನಡೆಸಿಕೊಂಡು ಬಂದಿದ್ದೇವೆ. ಆದರೆ ಸುಪ್ರೀಂ ಕೋರ್ಟ್ ಇದ್ಯಾವುದನ್ನೂ ಪರಿಗಣಿಸದೆ, ಮಹಿಳೆಯರಿಗೆ ಪ್ರವೇಶ ನೀಡಲು ಅನುಮತಿ ನೀಡಿದೆ. ಇದು ಸರಿಯಲ್ಲ. ಸುಪ್ರೀಂ ಕೋರ್ಟ್ ತೀರ್ಪನ್ನು ಕೇಳಿ ಯಾವುದಾದರೂ ಮಹಿಳೆಯರು ಶಬರಿಮಲೆಯ ಅಯ್ಯಪ್ಪ ದೇವಾಲಯಕ್ಕೆ ಬಂದರೆ ಅವರನ್ನು ಎರಡು ಭಾಗವಾಗಿ ಸೀಳಿ ಎಂದು ಅವರು ಆಕ್ರೋಶದಿಂದ ನುಡಿದರು.

'ಎರಡು ಭಾಗವಾಗಿ ಸೀಳಿದ ಮಹಿಳೆಯರ ದೇಹದಲ್ಲಿ ಒಂದು ಭಾಗವನ್ನು ದೆಹಲಿಗೆ ಮತ್ತು ಇನ್ನೊಂದು ಭಾಗವನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಕಚೇರಿಗೆ ಕಳಿಸಿ' ಎಂದರು.
800 ವರ್ಷಗಳಿಂದ ಮಹಿಳೆಯರ ಪ್ರವೇಶಕ್ಕೆ ನಿರ್ಬಂಧ ಹೇರಿದ್ದ ದೇವಾಲಯದ ಆಡಳಿತ ಮಂಡಳಿಯ ನಿಯಮಕ್ಕೆ ಬದಲಾಗಿ, ಮಹಿಳೆಯರಿಗೆ ಪ್ರವೇಶಕ್ಕೆ ಅನುಮತಿ ನೀಡಿ ಸೆ.28 ರಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿತ್ತು. ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವುದಿಲ್ಲ ಎಂದು ಕೇರಳ ಸರ್ಕಾರ ಸ್ಪಷ್ಟಪಡಿಸಿದ ಮೇಲೆ ರಾಷ್ಟ್ರೀಯ ಅಯ್ಯಪ್ಪ ಭಕ್ತರ ಸಂಘಟನೆ(National Ayyappa Devotee association) ಯು ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸೋಮವಾರ ಮೇಲ್ಮನವಿ ಸಲ್ಲಿಸಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications