• search
  • Live TV
ತಿರುವನಂತಪುರಂ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಬರಿಮಲೆಗೆ ಹೊರಟ ಮಹಿಳೆಯರನ್ನು ತಡೆದ ಪ್ರತಿಭಟನಕಾರರು

|

ತಿರುವನಂತಪುರಂ, ಅಕ್ಟೋಬರ್ 17: ಕೇರಳದ ಶಬರಿಮಲೆಯ ಅಯ್ಯಪ್ಪ ದೇವಾಲಯವು ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಮೊದಲ ಬಾರಿಗೆ ತೆರೆದಿದ್ದು, ಮೊದಲ ದಿನವೇ ಪ್ರತಿಭಟನೆಯ ಕಾವು ತಾರಕಕ್ಕೇರಿದೆ.

ಅಯ್ಯಪ್ಪನ ದರ್ಶನಕ್ಕೆಂದು ಬರುತ್ತಿದ್ದ ಮಹಿಳೆಯರನ್ನು ಪ್ರತಿಭಟನಕಾರರು ತಡೆದ ಘಟನೆ ಇಲ್ಲಿನ ನಿಲಕ್ಕಳ್ ಶಿಬಿರದಲ್ಲಿ ನಡೆದಿದೆ. ಅಯ್ಯಪ್ಪ ದೇವಾಲಯದ ಸುತ್ತ ಬಿಗಿಬಂದೋಬಸ್ತ್ ನಿಯೋಜಿಸಲಾಗಿದ್ದು, 1000 ಕ್ಕೂ ಹೆಚ್ಚು ಪೊಲೀಸರು(ಮಹಿಳಾ ಪೊಲೀಸರೂ ಸೇರಿದಂತೆ) ದೇವಾಲಯದ ಆವರಣದಲ್ಲಿ ಬೀಡುಬಿಟ್ಟಿದ್ದಾರೆ.

ಸುಪ್ರೀಂ ತೀರ್ಪಿನ ನಂತರ ಮೊದಲ ಬಾರಿಗೆ ತೆರೆದ ಅಯ್ಯಪ್ಪ ದೇವಾಲಯ

ಪ್ರತಿಭಟನೆಯು ಹಿಂಸಾರೂಪ ಪಡೆಯುತ್ತಿದ್ದಂತೆಯೇ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ.

Women trying to enter Sabarimala Ayyappa temple, protest takes place:Live updates

ಶಬರಿಮಲೆ ದೇವಳಕ್ಕೆ ಮಹಿಳೆಯರ ಪ್ರವೇಶ ನಿಷೇಧಕ್ಕೆ ಕಾರಣ ಗೊತ್ತೆ?

ಶಬರಿಮಲೆಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ.

ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಹೊಸ ಕ್ರಾಂತಿಗೆ ನಾಂದಿ ಹಾಡಲಿರುವ ರೇಷ್ಮಾ

Newest First Oldest First
1:01 PM, 17 Oct
ಕೇರಳ ಕಾಂಗ್ರೆಸ್ ಮುಖಂಡರೂ ಸಹ ಮಹಿಳೆಯರ ಪ್ರವೇಶ ವಿರೋಧಿಸಿ ಶಾಂತಿಯುತ ಧರಣಿ ನಡೆಸುತ್ತಿದ್ದಾರೆ.
12:32 PM, 17 Oct
ಇಬ್ಬರು ಮಹಿಳೆಯರಿಗೆ ದೇವಾಲಯ ಪ್ರವೇಶಕ್ಕೆ ಅವಕಾಶ ನೀಡದೆ ವಾಪಸ್ ಕಳಿಸಿದ ಪ್ರತಿಭಟನಕಾರರು.
12:28 PM, 17 Oct
10 ರಿಂದ 50 ವರ್ಷ ವಯಸ್ಸಿನ ಮಹಿಳೆಯರು ಋತುಮತಿಯಾಗುವ ಕಾರಣ ಕೇರಳದ ಶಬರಿಮಲೆ ಅಯ್ಯಪ್ಪ ದೇವಾಲಯ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಈ ನಿರ್ಬಂಧವನ್ನು ಸೆ.28 ರಂದು ಸುಪ್ರೀಂ ಕೋರ್ಟ್ ತೆರವುಗೊಳಿಸಿ ಐತಿಹಾಸಿಕ ತೀರ್ಪು ನೀಡಿತ್ತು. ಆ ನಂತರ ಮೊದಲ ಬಾರಿಗೆ ದೇವಾಲಯ ತೆರೆಯಲಾಗಿದ್ದು ಪ್ರತಿಭಟನೆಯ ಕಾವು ಹೆಚ್ಚಾಗಿದೆ.
12:09 PM, 17 Oct
ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಕೇರಳ ಮತ್ತು ಭಾರತದ ಇತರ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಕೇರಳದಲ್ಲಿ ಶಿವಸೇನೆ ಮತ್ತು ಅಯ್ಯಪ್ಪ ದೇವಾಲಯದ ಆಡಳಿತ ಮಂಡಳಿ ಮಹಿಳೆಯರು ದೇವಾಲಯ ಪ್ರವೇಶಿಸುವುದನ್ನು ನಿಷೇಧಿಸಬೇಕು ಎಂದಿದೆ.
12:09 PM, 17 Oct
ಪತ್ರಕರ್ತರ ಮೇಲೆ ಹಲ್ಲೆ ಮಾಡಲು ಯತ್ನಿಸಿದ ಪ್ರತಿಭಟನಕಾರರ ವಿರುದ್ಧ ದೂರು ದಾಖಲು
12:05 PM, 17 Oct
ಕಲ್ಲು ತೂರಾಟದ ಘಟನೆಗಳೂ ಕೇಳಿಬರುತ್ತಿದ್ದು, ಪ್ರತಿಭಟನಕಾರರ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
12:03 PM, 17 Oct
ಪ್ರತಿಭಟನಕಾರರನ್ನು ಬಂಧಿಸಿದ ಪೊಲೀಸರು
12:00 PM, 17 Oct
ದೇವಾಲಯ ಪ್ರವೇಶಕ್ಕೆಂದು ಬಂದಿದ್ದ ಆಂಧ್ರ ಮಹಿಳೆಯೊಬ್ಬರಿಗೆ ಪೊಲೀಸರು ರಕ್ಷಣೆ ನೀದದ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಪ್ರವೇಶಿಸದೆ ವಾಪಸ್ಸಾದ ಮಹಿಳೆ
12:00 PM, 17 Oct
ರಿಪಬ್ಲಿಕ್ ಟಿವಿಯ ವಾಹನವನ್ನೇ ದ್ವಂಸ ಮಾಡಿದ ಪ್ರತಿಭಟನಕಾರರು.
11:58 AM, 17 Oct
ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಈಗಾಗಲೇ ಮೇಲ್ಮನವಿ ಸಲ್ಲಿಸಲಾಗಿದ್ದು, ಮಹಿಳೆಯರು ದೇವಾಲಯ ಪ್ರವೇಶಿಸುವುದಕ್ಕೆ ಬಿಡುವುದಿಲ್ಲ ಎಂದು ಪ್ರತಿಭಟನಕಾರರು ಆಗ್ರಹಿಸಿದ್ದಾರೆ. ಶಿವಸೇನೆ, ಬಿಜೆಪಿ ಸೇರಿದಮತೆ ಅಯ್ಯಪ್ಪ ದೇವಾಲಯದ ಆಡಳಿತ ಮಂಡಳಿ ಮತ್ತು ಸಾವಿರಾರು ಅಯ್ಯಪ್ಪ ಭಕ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಶಬರಿಮಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿದೆ.
11:57 AM, 17 Oct
ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶವನ್ನು ನಿರ್ಬಂಧಿಸಿ, ಯಾರಾದರೂ ಕಾನೂನನ್ನು ಕೈಗೆತ್ತಿಕೊಂಡರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
11:57 AM, 17 Oct
ಬಿಜೆಪಿ, ಶಿವಸೇನಾ, ಅಯ್ಯಪ್ಪ ದೇವಾಲಯದಾಡಳಿತ ಮಂಡಳಿ ಸೇರಿದಂತೆ ಹಲವು ಸಂಘಟನೆಗಳು ಮಹಿಳೆಯರಿಗೆ ದೇವಾಲಯ ಪ್ರವೇಶಕ್ಕೆ ಅನುಮತಿ ನೀಡಿರುವುದನ್ನು ವಿರೋಧಿಸಿವೆ
11:56 AM, 17 Oct
ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶವನ್ನು ನಿರ್ಬಂಧಿಸಿ, ಯಾರಾದರೂ ಕಾನೂನನ್ನು ಕೈಗೆತ್ತಿಕೊಂಡರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
11:56 AM, 17 Oct
ಬಿಜೆಪಿ, ಶಿವಸೇನಾ, ಅಯ್ಯಪ್ಪ ದೇವಾಲಯದಾಡಳಿತ ಮಂಡಳಿ ಸೇರಿದಂತೆ ಹಲವು ಸಂಘಟನೆಗಳು ಮಹಿಳೆಯರಿಗೆ ದೇವಾಲಯ ಪ್ರವೇಶಕ್ಕೆ ಅನುಮತಿ ನೀಡಿರುವುದನ್ನು ವಿರೋಧಿಸಿವೆ

English summary
After supreme court's verdict on Sabarimala which allows women devotees to enter the Ayyappa temple, for the first time temple is opening to public. Protesters stopped women who are trying to enter temple premise
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
X