ತುಮಕೂರು: ಸಿದ್ಧಗಂಗಾ ಮಠದ ಜಾತ್ರೆಗೆ ಬಂದಿದ್ದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಮೂವರ ಬಂಧನ
ತುಮಕೂರು, ಮಾರ್ಚ್ 07: ಕಲಪತರು ನಾಡಿನ ಪ್ರಸಿದ್ಧ ಸಿದ್ದಗಂಗಾ ಮಠದ ಜಾತ್ರೆಗೆ ಬಂದಿಂದ 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ಜಾತ್ರೆಗೆ ಬಂದಿದ್ದ ಬಾಲಕಿಯನ್ನು ಕರೆದೊಯ್ದು ಮಠದ ಸಮೀಪದ ಬಂಡೆಪಾಳ್ಯದ ಮನೆಯೊಂದರಲ್ಲಿ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ.
ಪ್ರಕರಣ ಸಂಬಂಧ ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಬಂಡೆಪಾಳ್ಯದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಅಮೋಘ, ಹನುಮಂತ, ಪ್ರತಾಪ್ ಎಂದು ಗುರುತಿಸಲಾಗಿದೆ. ಪೊಲೀಸರು ಪೋಕ್ಸೋ ಕಾಯ್ದೆ ಪ್ರಕಾರ ಎಫ್‌ಐಆರ್ ದಾಖಲಿಸಿ, ತನಿಖೆ ಮುಂದುವರಿಸಿದ್ದಾರೆ.

ಬೆದರಿಕೆ ಹಾಕಿ ಅತ್ಯಾಚಾರ ಮಾಡಿದ ಆರೋಪಿಗಳು
ಸಿದ್ದಗಂಗಾ ಮಠದಲ್ಲಿ ಪ್ರಸಿದ್ದ ಜಾತ್ರೆ ನಡೆಯುತ್ತಿದ್ದು, ಬಾಲಕಿ ತನ್ನ ಸ್ನೇಹಿತನ ಜೊತೆಗೆ ಜಾತ್ರೆಗೆ ಬಂದಿದ್ದಾರೆ. ಈ ವೇಳೆ ಪಕ್ಕದ ಬೆಟ್ಟದ ಹತ್ತಿರ ಮಾತನಾಡುತ್ತಾ ಕುಳಿತಿದ್ದಾರೆ. ಇಬ್ಬರು ಜೊತೆಗಿರುವ ದೃಶ್ಯಗಳನ್ನು ವಿಡಿಯೋ ಮಾಡಿಕೊಂಡ ಆರೋಪಿಗಳು ಅದನ್ನು ಬಾಲಕಿಗೆ ತೋರಿಸಿ ಬೆದರಿಕೆ ಹಾಕಿದ್ದಾರೆ.
ಜೊತೆಗಿದ್ದ ಸ್ನೇಹಿತನ ಮೇಲೆ ಹಲ್ಲೆ ಮಾಡಿ ಬಾಲಕಿಯನ್ನು ಬೆದರಿಸಿದ್ದಾರೆ. ತಾವು ಹೇಳಿದಂತೆ ಕೇಳದಿದ್ದರೇ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಸಿದ್ದು, ಬಲವಂತವಾಗಿ ಬಂಡೆಪಾಳ್ಯದ ಮನೆಯೊಂದಕ್ಕೆ ಕರೆದೊಯ್ದು ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದಾರೆ. ಘಟನೆ ಬಳಿಕ ಮಠದ ಬಳಿಯಲ್ಲಿ ಬಿಟ್ಟು ಹೋಗಿದ್ದಾರೆ. ಬಾಲಕಿ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಮನೆಯವರು ದೂರು ದಾಖಲಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಾಲಕಿಗೆ ಚಿಕಿತ್ಸೆ ನೀಡಲಾಗಿದೆ.












Click it and Unblock the Notifications