Breaking: ತುಮಕೂರು: ಕಾರು- ಟಿಟಿ ಮಧ್ಯೆ ಡಿಕ್ಕಿ- 2 ಸಾವು
ತುಮಕೂರು, ಜೂ.4: ಕಾರು ಹಾಗೂ ಟಿಟಿ ವಾಹನದ ನಡುವೆ ಭೀಕರ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಬೇಗೂರು ಬ್ರಿಡ್ಜ್ ಬಳಿ ನಡೆದಿದೆ.
ಬೆಂಗಳೂರಿನಿಂದ ಹಾಸನ ಕಡೆಗೆ ತೆರಳುತ್ತಿದ್ದ ಇನೋವಾ ಕಾರು ಡಿವೈಡರ್ ದಾಟಿ ಹಾಸನದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟಿಟಿ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗ್ತಿದೆ. ಸ್ಥಳದಲ್ಲಿ ಮತ್ತೊಂದು ಬುಲೆಟ್ ದ್ವಿಚಕ್ರ ಪತ್ತೆಯಾಗಿದ್ದು, ಬೈಕ್ ಸವಾರನ ಸ್ಥಿತಿ ಕೂಡ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

Recommended Video
ರಾಜ್ಯಸಭಾ ಚುನಾವಣೆ:ಸಿದ್ದರಾಮಯ್ಯ ತಮ್ಮ ತಲೆಯ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆ | OneIndia Kannada
ಇನ್ನು ಟಿಟಿ ವಾಹನದಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.












Click it and Unblock the Notifications