ತುಮಕೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್-ಆಟೋ ಡಿಕ್ಕಿ:ಐವರ ದುರ್ಮರಣ

ತುಮಕೂರು, ಜುಲೈ 4: ಆಟೋ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.

ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಲ್ಲಸಂದ್ರದ ಬಳಿ ಘಟನೆ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ನಾಲ್ವರು ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ, ಡಿಕ್ಕಿಯ ರಸಭಕ್ಕೆ ನಜ್ಜುಗುಜ್ಜಾಗಿದ್ದ ಆಟೋದಲ್ಲಿ ಸಿಲುಕಿಕೊಂಡಿದ್ದ ಮೃತದೇಹಗಳನ್ನು ಸ್ಥಳೀಯರು ಮತ್ತು ಪೊಲೀಸರು ಹೊರತೆಗೆಯಲು ಹರಸಾಹಸಪಟ್ಟರು.

4 dead and 2 injured in KSRTC bus -auto collision at Tumakuru

ಮೃತರು ಗುಬ್ಬಿ ತಾಲೂಕಿನ ಮತ್ತಿಘಟ್ಟಿ ನಿವಾಸಿಗಳಾಗಿದ್ದು, ಅವರ ಹೆಸರು ಇನ್ನೂ ತಿಳಿದುಬಂದಿಲ್ಲ. ಗಾಯಗೊಂಡ ಇಬ್ಬರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗದಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಮಲ್ಲಸಂದ್ರದ ಬಳಿ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. . ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+