ಸಿದ್ಧಗಂಗಾ ಮಠದಿಂದ ಸಿಎಂ ಪರಿಹಾರ ನಿಧಿಗೆ 50 ಲಕ್ಷ ರೂ ದೇಣಿಗೆ
ತುಮಕೂರು, ಏಪ್ರಿಲ್ 4: ಕೊರೋನಾ ವೈರಸ್ (ಕೋವಿಡ್19) ಸೋಂಕು ನಿಯಂತ್ರಣಕ್ಕಾಗಿ ಸಿದ್ಧಗಂಗಾ ಮಠ ಹಾಗೂ ಸಿದ್ಧಗಂಗಾ ವಿದ್ಯಾಸಂಸ್ಥೆ ವತಿಯಿಂದ 50 ಲಕ್ಷ ರುಪಾಯಿಯನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಲಾಯಿತು.
ಸಿದ್ಧಗಂಗಾ ಮಠದಲ್ಲಿ ಶನಿವಾರ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿಗಳು ಸಿದ್ಧಗಂಗಾ ಮಠದಿಂದ 25 ಲಕ್ಷ ರೂ. ಹಾಗೂ ಸಿದ್ಧಗಂಗಾ ವಿದ್ಯಾಸಂಸ್ಥೆಯಿಂದ 25 ಲಕ್ಷ ರೂ.ಗಳು ಒಟ್ಟು 50 ಲಕ್ಷ ರೂ.ಗಳ ಡಿಡಿಯನ್ನು ಕಾನೂನು ಸಂಸದೀಯ ವ್ಯವಹಾರಗಳು ಹಾಗೂ ಸಣ್ಣ ನೀರಾವರಿ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರ ಮೂಲಕ ಸಿಎಂ ಪರಿಹಾರ ನಿಧಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್, ಸಿದ್ಧಗಂಗಾ ಮಠದ ವಿಶ್ವನಾಥಯ್ಯ, ಟಿ.ಕೆ. ನಂಜುಂಡಪ್ಪ, ಮತ್ತಿತರರು ಹಾಜರಿದ್ದರು.

ಇತ್ತ ಕರ್ನಾಟಕದಲ್ಲೂ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಅಲ್ಲದಿದ್ದರೂ ಹೆಚ್ಚಾಗುತ್ತಲಿದೆ. 130 ಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಕೊರೊನಾ ತಡೆಯಲು ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಣ ಹರಿದು ಬರುತ್ತಿದೆ.












Click it and Unblock the Notifications