ತುಮಕೂರು : ಭೀಕರ ರಸ್ತೆ ಅಪಘಾತ, 6 ಸಾವು

ತುಮಕೂರು, ಜೂನ್ 28 : ತುಮಕೂರು ಜಿಲ್ಲೆಯ ಕುಣಿಗಲ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ ಘಟನೆ ನಡೆದಿದೆ. ಅಮೃತೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕುಣಿಗಲ್ ತಾಲೂಕಿನ ಸಿದ್ದಾಪುರ ಬಳಿ ಕಾರು ಪಲ್ಟಿಯಾಗಿ 6 ಜನರು ಮೃತಪಟ್ಟಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. ಯಡಿಯೂರಿಂದ ಬೆಂಗಳೂರಿಗೆ ತೆರಳುವ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು, ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ.

6 killed in road accident at Kunigal

ಮೃತಪಟ್ಟವರನ್ನು ಬೆಂಗಳೂರಿನ ಸಂಜಯ ನಗರ ನಿವಾಸಿಗಳು ಎಂದು ಗುರುತಿಸಲಾಗಿದೆ. ಇಬ್ಬರು ಮಕ್ಕಳು ಸೇರಿ 11 ಮಂದಿ ಕಾರಿನಲ್ಲಿದ್ದರು. ಇವರಲ್ಲಿ 4 ಮಹಿಳೆಯರು ಸೇರಿ 6 ಜನರು ಮೃತಪಟ್ಟಿದ್ದಾರೆ.

ಯಡಿಯೂರು ಸಿದ್ದಲಿಂಗೇಶ್ವರ ದೇವಾಲಯಕ್ಕೆ ಹೋಗಿ ವಾಪಸ್ ಬರುವಾಗ ಈ ದುರ್ಘಟನೆ ನಡೆದಿದೆ. ಅಮೃತೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮೃತಪಟ್ಟವರ ಹೆಸರು ಇನ್ನೂ ತಿಳಿದುಬಂದಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+