ತಿಪಟೂರು ಕೋರ್ಟ್‌ನಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಎಸಿಬಿ ಬಲೆಗೆ!
ತುಮಕೂರು, ಏಪ್ರಿಲ್ 30 : ಎಸಿಬಿ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಪ್ರಬ್ಲಿಕ್ ಪ್ರಾಸಿಕ್ಯೂಟರ್ ಸಿಕ್ಕಿಬಿದ್ದಿದ್ದಾರೆ. 20 ಸಾವಿರ ಲಂಚ ಸ್ವೀಕಾರ ಮಾಡುವಾಗ ರೆಡ್ ಹ್ಯಾಂಡ್ ಅಗಿ ಬಲೆಗೆ ಬಿದ್ದಿದ್ದಾರೆ.
ತುಮಕೂರು ಜಿಲ್ಲೆಯ ತಿಪಟೂರು ನ್ಯಾಯಾಲಯದಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಪೂರ್ಣಿಮಾ ಅವರು ಕಕ್ಷಿದಾರರಿಂದ ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಕೆಇಬಿಯ ಇಂಜಿನಿಯರ್ ಗುರುಸ್ವಾಮಿ ಅವರ ಬಳಿ ಪಬ್ಲಿಕ್ ಪ್ರಾಸಿಕ್ಯೂಟರ್ ಪೂರ್ಣಿಮಾ ಅವರು 40 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 20 ಸಾವಿರ ರೂ.ಗಳನ್ನು ಪಡೆಯುವಾಗ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ತಿಪಟೂರು ಟೌನ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಪಬ್ಲಿಕ್ ಪ್ರಾಸಿಕ್ಯೂಟರ್ ಪೂರ್ಣಿಮಾ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.












Click it and Unblock the Notifications