ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತಿಪಟೂರು ಕೋರ್ಟ್‌ನಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಎಸಿಬಿ ಬಲೆಗೆ!

|
Google Oneindia Kannada News

ತುಮಕೂರು, ಏಪ್ರಿಲ್ 30 : ಎಸಿಬಿ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಪ್ರಬ್ಲಿಕ್ ಪ್ರಾಸಿಕ್ಯೂಟರ್ ಸಿಕ್ಕಿಬಿದ್ದಿದ್ದಾರೆ. 20 ಸಾವಿರ ಲಂಚ ಸ್ವೀಕಾರ ಮಾಡುವಾಗ ರೆಡ್ ಹ್ಯಾಂಡ್ ಅಗಿ ಬಲೆಗೆ ಬಿದ್ದಿದ್ದಾರೆ.

ತುಮಕೂರು ಜಿಲ್ಲೆಯ ತಿಪಟೂರು ನ್ಯಾಯಾಲಯದಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಪೂರ್ಣಿಮಾ ಅವರು ಕಕ್ಷಿದಾರರಿಂದ ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಬೆಂಗಳೂರಲ್ಲಿ ಬಿಡಿಎ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿಬೆಂಗಳೂರಲ್ಲಿ ಬಿಡಿಎ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ

ACB traps public prosecutor in Tiptur court

ಕೆಇಬಿಯ ಇಂಜಿನಿಯರ್ ಗುರುಸ್ವಾಮಿ ಅವರ ಬಳಿ ಪಬ್ಲಿಕ್ ಪ್ರಾಸಿಕ್ಯೂಟರ್ ಪೂರ್ಣಿಮಾ ಅವರು 40 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 20 ಸಾವಿರ ರೂ.ಗಳನ್ನು ಪಡೆಯುವಾಗ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಆಪರೇಷನ್ ಕಮಲ ಕುರಿತು ಶ್ರೀನಿವಾಸ ಗೌಡ ಹೇಳಿಕೆ : ಎಸಿಬಿಗೆ ಪ್ರಶ್ನೆಗಳುಆಪರೇಷನ್ ಕಮಲ ಕುರಿತು ಶ್ರೀನಿವಾಸ ಗೌಡ ಹೇಳಿಕೆ : ಎಸಿಬಿಗೆ ಪ್ರಶ್ನೆಗಳು

ತಿಪಟೂರು ಟೌನ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಪಬ್ಲಿಕ್ ಪ್ರಾಸಿಕ್ಯೂಟರ್ ಪೂರ್ಣಿಮಾ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

English summary
A team of the Anti-Corruption Bureau (ACB) trapped the public prosecutor who demanded for 40 thousand bribe from KEB engineer. Public prosecutor working in Tiptur court of Tumakuru district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X