ಅವಹೇಳನಕಾರಿ ಹೇಳಿಕೆ ನೀಡುವ ಎಲ್ಲರ ವಿರುದ್ಧ ಕ್ರಮ: ಪರಮೇಶ್ವರ್‌

ತುಮಕೂರು, ನವೆಂಬರ್ 14: ಟಿಪ್ಪು ಜಯಂತಿ ವಿರುದ್ಧ ಮಾತನಾಡಿದ ಪತ್ರಕರ್ತ ಸಂತೋಶ್ ತಮ್ಮಯ್ಯ ಬಂಧನದ ಬಗ್ಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ನಾವು ಯಾರನ್ನೂ ಟಾರ್ಗೆಟ್ ಮಾಡಿಲ್ಲ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಪ್ಪು ಜಯಂತಿ ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮ ಅದರ ಬಗ್ಗೆ ಯಾರು ಬೇಕಾದರೂ ಟೀಕೆ ಟಿಪ್ಪಣಿ ಮಾಡಬಹುದು ಆದರೆ ಅವಹೇಳನಕಾರಿಯಾಗಿ ಮಾತನಾಡುವುದು ಸರಿ ಅಲ್ಲ ಎಂದಿದ್ದಾರೆ.

ಯಾರೇ ಅವಹೇಳನಕಾರಿಯಾಗಿ ಮಾತನಾಡಿದರೂ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ನಾವೇ ಸೂಚಿಸಿದ್ದೆವು, ಅದರಂತೆ ಪೊಲೀಸರು ಕಾರ್ಯ ನಿರ್ವಹಿಸುತ್ತಿದ್ದಾರೆ, ಆದರೆ ನಾವು ಯಾರನ್ನೂ ಉದ್ದೇಶಪೂರ್ವಕವಾಗಿ ಟಾರ್ಗೆಟ್ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.

Action against everyone who talk derogatory: Parameshwar

ಭಗವಾನ್‌ ಅವರು ಹಿಂದೂ ದೇವರುಗಳ ಬಗ್ಗೆ ಅವಮಾನಕರ ರೀತಿಯಲ್ಲಿ ಮಾತನಾಡುತ್ತಿರುವ ಬಗ್ಗೆ ಮಾತನಾಡಿದ ಅವರು, ಅವರು ಆ ರೀತಿ ಮಾತನಾಡಿದರೆ ಅವರ ಮೇಲೂ ಕ್ರಮ ಕೈಗೊಳ್ಳಲಾಗುವುದು ಎಂದು ಪರಮೇಶ್ವರ್ ಹೇಳಿದ್ದಾರೆ.

ಟಿಪ್ಪು ಜಯಂತಿ ಆಚರಣೆ ವಿರುದ್ಧ ಪತ್ರಕರ್ತ ಸಂತೋಶ್ ತಮ್ಮಯ್ಯ ಅವರು ಕೊಡಗಿನಲ್ಲಿ ಇತ್ತೀಚೆಗೆ ಸಭೆಯೊಂದರಲ್ಲಿ ಮಾತನಾಡಿದ್ದರು ನಂತರ ಅವರನ್ನು ಬಂಧಿಸಲಾಗಿತ್ತು. ಬಂಧನದ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ನಿನ್ನೆ ಅವರಿಗೆ ಜಾಮೀನು ದೊರೆತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+