ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಏಪ್ರಿಲ್ 1ರಂದು ಸಿದ್ಧಗಂಗಾ ಮಠಕ್ಕೆ ಅಮಿತ್ ಶಾ ಭೇಟಿ

|
Google Oneindia Kannada News

ತುಮಕೂರು, ಮಾರ್ಚ್ 27; ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ. ಏಪ್ರಿಲ್ 1ರಂದು ಅವರು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ.

ಏಪ್ರಿಲ್ 1ರಂದು ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತಿ ಹಾಗೂ ಗುರುವಂದನಾ ಮಹೋತ್ಸವ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ.

 2023 ವಿಧಾನಸಭೆ ಚುನಾವಣೆಗೆ ಬಿಜೆಪಿ ರಣತಂತ್ರ: 40 ಮಂದಿಗೆ ಹೊಸಬರಿಗೆ ಆದ್ಯತೆ? 2023 ವಿಧಾನಸಭೆ ಚುನಾವಣೆಗೆ ಬಿಜೆಪಿ ರಣತಂತ್ರ: 40 ಮಂದಿಗೆ ಹೊಸಬರಿಗೆ ಆದ್ಯತೆ?

ಶ್ರೀ ಸಿದ್ಧಗಂಗಾ ಮಠದಲ್ಲಿ ಏಪ್ರಿಲ್ 1ರ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ. ಎಸ್.‌ ಯಡಿಯೂರಪ್ಪ ಸೇರಿದಂತೆ ಹಲವಾರು ಸಚಿವರು, ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಯುಪಿ ಭಯೋತ್ಪಾದಕರ ಸ್ವರ್ಗವಾಗಲು ಕಾಂಗ್ರೆಸ್ ಎಸ್‌ಪಿ ಕಾರಣ ಎಂದ ಅಮಿತ್ ಶಾ ಯುಪಿ ಭಯೋತ್ಪಾದಕರ ಸ್ವರ್ಗವಾಗಲು ಕಾಂಗ್ರೆಸ್ ಎಸ್‌ಪಿ ಕಾರಣ ಎಂದ ಅಮಿತ್ ಶಾ

Amit Shah To Visit Siddaganga Mutt On April 1st

ಶನಿವಾರ ಕರ್ನಾಟಕ ಬಿಜೆಪಿ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಶ್ರೀ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದರು. ಶ್ರೀ ಶಿವಕುಮಾರ ಮಹಾಸ್ವಾಮಿಗಳ ಗದ್ದುಗೆ ದರ್ಶನ ಪಡೆದರು. ಏಪ್ರಿಲ್ 1 ರಂದು ಅಮಿತ್ ಶಾ ಮಠಕ್ಕೆ ಭೇಟಿ ನೀಡುವುದರಿಂದ ಕಾರ್ಯಕ್ರಮಗಳ ಸಿದ್ಧತೆ ಪರಿಶೀಲನೆ ಮಾಡಿದರು.

 'ಕೂ' ಅಪ್ಲಿಕೇಶನ್ ಪ್ರವೇಶಿಸಿದ ಶ್ರೀ ಸಿದ್ದಗಂಗಾ ಮಠ 'ಕೂ' ಅಪ್ಲಿಕೇಶನ್ ಪ್ರವೇಶಿಸಿದ ಶ್ರೀ ಸಿದ್ದಗಂಗಾ ಮಠ

ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತಿ ಹಾಗೂ ಗುರುವಂದನಾ ಮಹೋತ್ಸವ ಕಾರ್ಯಕ್ರಮದ ಸಿದ್ಧತೆಗಳ ಪರಿಶೀಲನೆ ನಡೆಸಿದರು. ನಂತರ ಪತ್ರಿಕಾಗೋಷ್ಠಿ ನಡೆಸಿ ಸದರಿ ಕಾರ್ಯಕ್ರಮದ ಬಗ್ಗೆ ವಿವರಗಳನ್ನು ನೀಡಿದರು.

ಅಮಿತ್‌ ಶಾ ಭೇಟಿ ಹಿನ್ನಲೆಯಲ್ಲಿ ತುಮಕೂರು ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ ನೇತೃತ್ವದಲ್ಲಿ ಶುಕ್ರವಾರ ಅಧಿಕಾರಿಗಳ ಸಭೆ ನಡೆಯಿತು. ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಪೊಲೀಸ್ ಇಲಾಖೆಗೆ ಸಹ ಸೂಚನೆ ನೀಡಿದರು.

ವಿವಿಧ ಕಾರ್ಯಕ್ರಮ; ಕರ್ನಾಟಕಕ್ಕೆ ಆಗಮಿಸುವ ಅಮಿತ್ ಶಾ ಬೆಂಗಳೂರು, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಬೆಂಗಳೂರಿನಲ್ಲಿ ಪಕ್ಷದ ಹಿರಿಯ ನಾಯಕರ ಜೊತೆ ಸಮಾಲೋಚನೆ ನಡೆಸಲಿದ್ದಾರೆ.

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಒಂದು ವರ್ಷಗಳು ಬಾಕಿ ಉಳಿದಿದೆ. ಈ ಸಮಯದಲ್ಲಿ ಅಮಿತ್ ಶಾ ಭೇಟಿ ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲಿದೆ.

ಸಚಿವ ಸಂಪುಟ ವಿಸ್ತರಣೆ; ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಬೇಕು ಎಂದು ಹಲವು ಹಿರಿಯ ಶಾಸಕರು ಒತ್ತಾಯಿಸುತ್ತಿದ್ದಾರೆ. ಐದು ರಾಜ್ಯಗಳ ಚುನಾವಣೆ ಬಳಿಕ ಈ ಕುರಿತು ಚರ್ಚೆ ನಡೆಯುವ ನಿರೀಕ್ಷೆ ಇತ್ತು. ಈಗ ಚುನಾವಣೆ ಮುಕ್ತಾಯಗೊಂಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಸಂಪುಟ ವಿಸ್ತರಣೆಯಾಗಲಿದೆಯೇ ಕಾದು ನೋಡಬೇಕಿದೆ.

ಅಮಿತ್ ಶಾ ಕರ್ನಾಟಕ ಭೇಟಿ ವೇಳೆ ಬಿಜೆಪಿಯ ಶಾಸಕರು ಸಚಿವ ಸಂಪುಟ ವಿಸ್ತರಣೆ ಮಾಡಲು ಬೇಡಿಕೆ ಇಡಬಹುದು. ಹಿರಿಯ ನಾಯಕರ ಜೊತೆ ಅಮಿತ್ ಶಾ ಸಭೆ ನಡೆಸುವ ಸಂದರ್ಭದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆಯೂ ಮಾತುಕತೆ ನಡೆಸುವ ನಿರೀಕ್ಷೆ ಇದೆ.

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇದೆ. ರಾಜ್ಯದಲ್ಲಿ ಪುನಃ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು ಎಂದು ಪಕ್ಷದ ನಾಯಕರು ಪಣತೊಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ಪಕ್ಷ ಸಂಘಟನೆ ಕುರಿತು ಅಮಿತ್ ಶಾ ರಾಜ್ಯದ ನಾಯಕರಿಗೆ ಸೂಚನೆಗಳನ್ನು ನೀಡುವ ನಿರೀಕ್ಷೆ ಇದೆ.

ಮುಂದಿನ ವರ್ಷ ರಾಜ್ಯದಲ್ಲಿ ಚುನಾವಣೆ ನಡೆಯುವುದರಿಂದ ಬಿಜೆಪಿಯ ರಾಷ್ಟ್ರೀಯ ನಾಯಕರು ಪದೇ ಪದೇ ರಾಜ್ಯಕ್ಕೆ ಆಗಮಿಸುತ್ತಾರೆ. ಕಳೆದ ವಾರ ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ. ಪಿ. ನಡ್ಡಾ ಭೇಟಿ ಮಾಡಿದ್ದರು.

ರಾಜ್ಯದಲ್ಲಿ ಏಪ್ರಿಲ್ 16 ಮತ್ತು 17 ರಂದು ನಡೆಯುವ ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ ಜೆ. ಪಿ. ನಡ್ಡಾಗೆ ಆಹ್ವಾನ ನೀಡಿದ್ದರು ಹಾಗೂ ರಾಜ್ಯದಲ್ಲಿ ಪಕ್ಷ ಸಂಘಟನೆಯ ಮುಂದಿನ ಕಾರ್ಯರೂಪಗಳ ಬಗ್ಗೆ ಚರ್ಚೆ ನಡೆಸಿದ್ದರು.

English summary
Union home minister Amit Shah will visit Tumakuru Siddaganga mutt on April 1st.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X