ತುಮಕೂರು ಕಂದಾಯ ಇಲಾಖೆಯಲ್ಲಿ 70 ಹುದ್ದೆಗಳಿವೆ

ತುಮಕೂರು, ಏ. 22 : ತುಮಕೂರು ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ (Village Accountants) ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 70 ಹುದ್ದೆಗಳಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 20, 2015.

ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಅಂಚೆ ಅಥವ ಖುದ್ದಾಗಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. http://tumkur-va.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿಯನ್ನು ಭರ್ತಿ ಮಾಡಬೇಕು. [ಕನ್ನಡದಲ್ಲಿ ನೇಮಕಾತಿ ಆದೇಶ ಓದಿ]

Tumakuru

ಅರ್ಜಿ ಶುಲ್ಕ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದ ವಿವರಗಳು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ - 1/ಮಹಿಳಾ ಅಭ್ಯರ್ಥಿಗಳಿಗೆ 100 ರೂ., ಸಾಮಾನ್ಯ/2ಎ/2ಬಿ/3ಎ/3ಬಿ ವರ್ಗದ ಅಭ್ಯರ್ಥಿಗಳಿಗೆ 200 ರೂ.ಗಳು. [ಅರ್ಜಿ ಸಲ್ಲಿಸಲು ವಿಳಾಸ]

ವಿದ್ಯಾರ್ಹತೆ : ದ್ವಿತೀಯ ಪಿಯುಸಿ ಅಥವ ಸಿ.ಬಿ.ಎಸ್.ಸಿ/ಐ.ಸಿ.ಎಸ್‌.ಸಿ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಮುಂಚಿತವಾಗಿ ಅಂಕಪಟ್ಟಿಯನ್ನು ಪಡೆದುಕೊಂಡಿರಬೇಕು. ಈ ವಿದ್ಯಾರ್ಹತೆ ಹೊರತುಪಡಿಸಿ ಉಳಿದವುಗಳನ್ನು ಪರಿಗಣಿಸಲಾಗುವುದಿಲ್ಲ.

ವಯೋಮಿತಿ : ಅರ್ಜಿಗಳನ್ನು ಸಲ್ಲಿಕೆ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕೆಳಕಂಡ ವಯೋಮಿತಿ ಹೊಂದಿರಬೇಕು. ಸಾಮಾನ್ಯ ವರ್ಗ 35 ವರ್ಷ, 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷ. ಪ.ಜಾ/ಪ.ಪಂಗಡ/ಪ್ರವರ್ಗ 1 40 ವರ್ಷಗಳು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+