ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭಜರಂಗದಳ ಜಿಲ್ಲಾ ಸಂಚಾಲಕನ ಮೇಲೆ ಹಲ್ಲೆ ಖಂಡಿಸಿ ಅ.22ರಂದು ತುಮಕೂರು ಬಂದ್

|
Google Oneindia Kannada News

ತುಮಕೂರು, ಅಕ್ಟೋಬರ್ 22: ಭಜರಂಗದಳ ತುಮಕೂರು ಜಿಲ್ಲಾ ಸಂಚಾಲಕನ ಮೇಲೆ‌ ಹಲ್ಲೆ ಪ್ರಕರಣ ಹಿನ್ನೆಲೆಯಲ್ಲಿ ಹಿಂದೂಪರ ಸಂಘಟನೆಗಳಿಂದ ಶುಕ್ರವಾರ (ಅ.22) ರಂದು ತುಮಕೂರು ಬಂದ್​ಗೆ ಕರೆ ನೀಡಲಾಗಿದೆ.

ಅಕ್ಟೋಬರ್ 22 ರಂದು ತುಮಕೂರು ಬಂದ್​​ಗೆ ಕರೆ ನೀಡಲು ಹಿಂದೂಪರ ಸಂಘಟನೆಗಳು ನಿರ್ಧಾರ ಮಾಡಿದ್ದು, ಬುಧವಾರ (ಅಕ್ಟೋಬರ್ 20) ನಡೆದ ಸಭೆಯಲ್ಲಿ ಬಂದ್​ಗೆ ಕರೆ ನೀಡಲು ನಿರ್ಧಾರ ಮಾಡಲಾಗಿತ್ತು. ಮಂಗಳವಾರದಂದು ಮಂಜು ಭಾರ್ಗವ್ ಎಂಬುವರ ಮೇಲೆ ಅಪರಿಚಿತ ಗುಂಪೊಂದು ಹಲ್ಲೆ ನಡೆಸಿತ್ತು.

ಅ.22ರಂದು ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಆಗ್ರಹಿಸಿ ಶೃಂಗೇರಿ ಬಂದ್ಅ.22ರಂದು ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಆಗ್ರಹಿಸಿ ಶೃಂಗೇರಿ ಬಂದ್

ಶುಕ್ರವಾರ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ತುಮಕೂರು ಬಂದ್​ಗೆ ಕರೆ ನೀಡಲಾಗಿದೆ. ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಶ್ರೀನಿವಾಸ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಶುಕ್ರವಾರ ಬೆಳಗ್ಗೆ 6ರಿಂದ ಸಂಜೆ 6 ಗಂಟೆ ವರೆಗೂ ಬಂದ್ ಮಾಡುವಂತೆ ಕಡೆ ನೀಡಲಾಗಿದೆ. ಟೌನ್‌ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತುಮಕೂರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲು ನಿರ್ಧಾರ ಮಾಡಿದ್ದಾರೆ.

Tumakuru Bandh On October 22nd For Condemning Assault On Bajrang Dal District Convener

ಈ ಕುರಿತು ಮಾತನಾಡಿರುವ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಕೆ. ಶ್ರೀನಿವಾಸ್, "ವಿಎಚ್‌ಪಿ, ಭಜರಂಗದಳ ಹಾಗೂ ಇತರೆ ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ಬಂದ್‌ಗೆ ಕರೆ ನೀಡಲಾಗಿದೆ," ಎಂದರು.

"ಹಿಂದೂಗಳ ಮೇಲೆ ಪದೇಪದೇ ಹಲ್ಲೆ ನಡೆಯುತ್ತಿದೆ. ಗೋ ಸಂರಕ್ಷಣೆಗೆ ಮುಂದಾದವರ ಮೇಲೆ ಹಲ್ಲೆ ಮಾಡುವುದು, ಬೆದರಿಕೆ ಹಾಕುವುದು ಮುಂದುವರೆದಿದೆ. ನಗರದಲ್ಲಿ ಕಸಾಯಿಖಾನೆ ನಡೆಯುತ್ತಿದ್ದರೂ, ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಎಲ್ಲಾ ವಿಚಾರವನ್ನು ಮುಂದಿಟ್ಟು ತುಮಕೂರು ನಗರ ಬಂದ್‌ಗೆ ಕರೆ ನೀಡಲಾಗಿದೆ," ಎಂದು ತಿಳಿಸಿದರು.

ಭಜರಂಗದಳ ತುಮಕೂರು ಜಿಲ್ಲಾ ಸಂಚಾಲಕ ಮಂಜು ಭಾರ್ಗವ ಹಾಗೂ ಕಾರ್ಯಕರ್ತ ಕಿರಣ್ ಮೇಲೆ ಹಲ್ಲೆ ಮಾಡಿದ ಐವರು ಆರೋಪಿಗಳನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಬಂಧಿತರ ಹೆಸರುಗಳನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಉಳಿದವರ ಬಂಧನಕ್ಕೆ ಕಾರ್ಯಾಚರಣೆ ಮುಂದುವರೆದಿದೆ. ಹಲ್ಲೆ ನಂತರ ತುಮಕೂರು ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಆರೋಪಿಗಳ ಬಂಧನಕ್ಕೆ ಎರಡು ತಂಡಗಳನ್ನು ರಚಿಸಲಾಗಿದೆ.

ತುಮಕೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯುವಕರು ಬೈಕ್‌ಗಳಲ್ಲಿ ವ್ಹೀಲಿಂಗ್ ಮಾಡುವುದು ಕಂಡು ಬಂದಿದೆ. ಇದಕ್ಕಾಗಿ ಪ್ರತ್ಯೇಕ ತಂಡ ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪೂರ್‌ವಾಡ್ ಹೇಳಿದರು.

ತುಮಕೂರು ಬಂದ್ ಹಿನ್ನೆಲೆ ಪೊಲೀಸ್ ಬಂದೋಬಸ್ತ್
ತುಮಕೂರು ನಗರದಲ್ಲಿ 500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದು, ತುಮಕೂರಿನಲ್ಲಿ ಭದ್ರತೆಗಾಗಿ ಡಿವೈಎಸ್​ಪಿಗಳು, ಸಿಪಿಐ, ಪಿಎಸ್‌ಐ, ಡಿಎಆರ್, ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ.

English summary
Tumakuru Bandh was called by the Hindu organizations on Friday (Oct.22) in the wake of the assault on Bajrang Dal Tumakuru district convener.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X