Bengaluru-Pune Expressway: ತುಮಕೂರು ಜಿಲ್ಲೆಯ ಈ ಭಾಗದಲ್ಲಿ ಅಭಿವೃದ್ಧಿಗೆ ವೇಗ!

ಬೆಂಗಳೂರು-ಪುಣೆ ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್‌ವೇ ಯೋಜನೆಗೆ ವೇಗ ಸಿಕ್ಕಿದ್ದು ಈಗಾಗಲೇ ಮಹಾರಾಷ್ಟ್ರದಲ್ಲಿ ಸರ್ವೆ ಕಾರ್ಯವನ್ನು ಮುಗಿಸಲಾಗಿದೆ. ಎಕ್ಸ್‌ಪ್ರೆಸ್‌ವೇ ನಿರ್ಮಾಣಕ್ಕೆ ಕರ್ನಾಟಕ ಭಾಗದಲ್ಲಿ ಸರ್ವೆ ನಡೆಸಲಾಗುತ್ತಿದ್ದು ಕಾಮಗಾರಿ ಆರಂಭವಾದ ಬಳಿಕ ಕೆಲವು ವರ್ಷಗಳಲ್ಲೇ ಕಾಮಗಾರಿಯನ್ನು ಮುಗಿಸುವ ಗುರಿ ಹೊಂದಲಾಗಿದೆ.

ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಈ ಎಕ್ಸ್‌ಪ್ರೆಸ್‌ ವೇ ದೊಡ್ಡ ಕೊಡುಗೆ ನೀಡುತ್ತದೆ ಎಂದು ನಿರೀಕ್ಷೆ ಮಾಡಲಾಗಿದೆ. ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಈಗಾಗಲೇ ಇದ್ದರೂ, ಎಕ್ಸ್‌ಪ್ರೆಸ್‌ವೇ ಎರಡೂ ನಗರಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಜೊತೆಗೆ ಪ್ರಯಾಣದ ಸಮಯವನ್ನು ಉಳಿಸಲಿದೆ.

Bengaluru pune expressway helps development of these parts tumkur district

ಬೆಂಗಳೂರು ನಗರಕ್ಕೆ ಪರ್ಯಾಯವಾಗಿ ಬೆಳೆಯುತ್ತಿರುವ ತುಮಕೂರು ಭಾಗದ ಬೆಳವಣಿಗೆಗೆ ಈ ಎಕ್ಸ್‌ಪ್ರೆಸ್‌ವೇ ಮತ್ತಷ್ಟು ಸಹಕಾರಿಯಾಗುವುದು ಖಚಿತವಾಗಿದೆ. ಅದರಲ್ಲೂ ತುಮಕೂರು ಜಿಲ್ಲೆಯಲ್ಲಿ ಬೇರೆ ತಾಲೂಕುಗಳಿಗೆ ಹೋಲಿಕೆ ಮಾಡಿದರೆ ಹಿಂದುಳಿದ ತಾಲೂಕುಗಳು ಎನಿಸಿಕೊಂಡಿರುವ ಮಧುಗಿರಿ, ಕೊರಟಗೆರೆ ಮತ್ತು ಶಿರಾ ತಾಲೂಕುಗಳ ಚಿತ್ರಣವನ್ನೇ ಈ ಎಕ್ಸ್‌ಪ್ರೆಸ್‌ವೇ ಬದಲಿಸಲಿದೆ ಎಂದು ನಿರೀಕ್ಷೆ ಮಾಡಲಾಗಿದೆ.

ಎಲ್ಲೆಲ್ಲಿ ಹಾದುಹೋಗಲಿದೆ ಎಕ್ಸ್‌ಪ್ರೆಸ್‌ವೇ?

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬೊಮ್ಮನಾಳದಿಂದ ಕರ್ನಾಟಕದಲ್ಲಿ ಈ ಗ್ರೀನ್‌ಫೀಲ್ಟ್ ಎಕ್ಸ್‌ಪ್ರೆಸ್‌ವೇ ಆರಂಭವಾಗುತ್ತದೆ. ಬಳಿಕ ಅಥಣಿ, ಜಮಖಂಡಿ, ಬಾಗಲಕೋಟೆ, ಮುಧೋಳ, ನರಗುಂದ, ಗದಜ ಜಿಲ್ಲೆಯ ರೋಣ, ಯಲಬುರ್ಗಾ, ಕೂಡ್ಲಿಗಿ, ದಾವಣಗೆರೆ, ಚಿತ್ರದುರ್ಗ, ಶಿರಾ, ಮಧುಗಿರಿ, ಕೊರಟಗೆರೆ, ನೆಲಮಂಗಲ ತಾಲೂಕಿನಲ್ಲಿ ಹಾದುಹೋಗಲಿದ್ದು ಹೊರ ವರ್ತುಲ ರಸ್ತೆಯಲ್ಲಿ ಕೊನೆಗೊಳ್ಳಲಿದೆ.

ವಸಂತನರಸಾಪುರ ಕೈಗಾರಿಕಾ ಪ್ರದೇಶ ಅಭಿವೃದ್ಧಿಯಾಗುತ್ತಿರುವುದರಿಂದ ಈಗಾಗಲೇ ಶಿರಾ, ಕೊರಟಗೆರೆ, ಮಧುಗಿರಿ ತಾಲೂಕುಗಳ ಅಭಿವೃದ್ಧಿಗೆ ಸಹಾಯವಾಗುತ್ತಿದ್ದು, ಎಕ್ಸ್‌ಪ್ರೆಸ್‌ವೇ ನಿರ್ಮಾಣದಿಂದ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದೆ.

ಮೂರು ತಾಲೂಕುಗಳ ಅಭಿವೃದ್ಧಿ

ಚೆನ್ನೈ- ಬೆಂಗಳೂರು - ಚಿತ್ರದುರ್ಗ ಕೈಗಾರಿಕಾ ಕಾರಿಡಾರ್ ಯೋಜನೆಯಿಂದ ಈಗಾಗಲೇ ಶಿರಾ ತಾಲೂಕಿನಲ್ಲಿ ಹಲವು ಕೈಗಾರಿಕೆಗಳನ್ನು ಸ್ಥಾಪನೆ ಮಾಡಲಾಗಿದ್ದು, ಅಭಿವೃದ್ಧಿಗೆ ವೇಗ ಸಿಗುತ್ತಿದೆ. ಇದೀಗ ಪುಣೆ -ಬೆಂಗಳೂರು ಎಕ್ಸ್‌ಪ್ರೆಸ್‌ವೇ ನಿರ್ಮಾಣದಿಂದ ಮಧುಗಿರಿ ಮತ್ತು ಕೊರಟಗೆರೆ ತಾಲೂಕಿಗೂ ಕೈಗಾರಿಕೆಗಳು ಸ್ಥಾಪನೆಯಾದರೆ ಉದ್ಯೋಗಗಳು ಸೃಷ್ಟಿಯಾಗಲಿವೆ. ಎಕ್ಸ್‌ಪ್ರೆಸ್‌ವೇ ನಿರ್ಮಾಣದಿಂದ ಬೆಂಗಳೂರಿಗೆ ಸಂಪರ್ಕ ಮತ್ತಷ್ಟು ಸುಧಾರಣೆಯಾಗಲಿದ್ದು ರಿಯಲ್ ಎಸ್ಟೇಟ್ ಉದ್ಯಮ ಕೂಡ ಅಭಿವೃದ್ಧಿಯಾಗುವ ಸಾಧ್ಯತೆ ಇದೆ.

ಒಮ್ಮೆ ಯೋಜನೆ ಸರ್ವೆ ಕೆಲಸ ಮುಗಿದು ಕಾಮಗಾರಿಗೆ ಚಾಲನೆ ನೀಡಿದರೆ, ನಾಲ್ಕೈದು ವರ್ಷಗಳಲ್ಲಿ ಕಾಮಗಾರಿಯನ್ನು ಮುಗಿಸುವ ಗುರಿ ಹೊಂದಲಾಗಿದೆ. ಅಂದುಕೊಂಡಂತೆ ಆದರೆ 2030-31ರ ವೇಳೆಗೆ ಎಕ್ಸ್‌ಪ್ರೆಸ್‌ವೇ ನಿರ್ಮಾಣವಾಗುವ ಸಾಧ್ಯತೆ ಇದ್ದು, ಹಲವು ತಾಲೂಕುಗಳ ಅಭಿವೃದ್ಧಿಗೆ ಕೊಡುಗೆ ನೀಡುವ ವಿಶ್ವಾಸವಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+