ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ, ಮೋದಿಗೆ ಕುಮಾರಸ್ವಾಮಿ ಪತ್ರ
Recommended Video
ಬೆಂಗಳೂರು, ಜೂನ್ 03 : ತುಮಕೂರಿನ ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಬೇಕು ಎಂದು ಕೋರಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಸೋಮವಾರ ಎಚ್.ಡಿ.ಕುಮಾರಸ್ವಾಮಿ ಅವರು ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿಗಳ ಕಚೇರಿ ಪತ್ರವನ್ನು ಬಿಡುಗಡೆ ಮಾಡಿದೆ. ಮುಖ್ಯಮಂತ್ರಿಗಳ ಅಧಿಕೃತ ಖಾತೆಯಿಂದ ಈ ಕುರಿತು ಟ್ವೀಟ್ ಮಾಡಲಾಗಿದೆ.
'ತುಮಕೂರಿನ ಸಿದ್ದಗಂಗಾ ಮಠಕ್ಕೆ 600 ವರ್ಷಗಳ ಪರಂಪರೆ ಇದೆ. 1941 ರಿಂದ 2019ರ ತನಕ ಶ್ರೀ ಶಿವಕುಮಾರಸ್ವಾಮೀಜಿ ಅವರ ಉಸ್ತುವಾರಿಯಲ್ಲಿದ್ದ ಮಠ ಸಾಮಾಜಿಕ ಸೇವೆಯಲ್ಲಿ ಮಾದರಿ ಎನಿಸುವ ಕಾರ್ಯಗಳನ್ನು ಮಾಡಿದೆ' ಎಂದು ಪತ್ರದಲ್ಲಿ ವಿವರಿಸಲಾಗಿದೆ.

'ನಾಡಿನ ಗ್ರಾಮೀಣ ಪ್ರದೇಶಗಳಲ್ಲಿ ಶ್ರೀಗಳು ಸ್ಥಾಪಿಸಿದ ವಿದ್ಯಾಕೇಂದ್ರಗಳು ಶಿಕ್ಷಣ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡಿವೆ. ತ್ರಿವಿಧ ದಾಸೋಹಕ್ಕಾಗಿ ಶ್ರೀಗಳು ತಮ್ಮ ಜೀವನವನ್ನೇ ಮುಡುಪಾಗಿಟ್ಟವರು' ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಸಿದ್ದಗಂಗಾ ಶ್ರೀಗಳು ಸಮಾಜಕ್ಕೆ ಸಲ್ಲಿಸಿರುವ ಸೇವೆಗೆ ಭಾರತದ ಅತ್ಯುನ್ನತ ನಾಗರಿಕ ಗೌರವ ಭಾರತ ರತ್ನ ಸಲ್ಲುವುದು ಉಚಿತ. ಎಲ್ಲಾ ನಾಗರಿಕರು, ಸಂಘ ಸಂಸ್ಥೆಗಳು, ರಾಜಕೀಯ ಪಕ್ಷಗಳ ಆಶಯವೂ ಅದೇ ಆಗಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ.
ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಗಳ ಹೆಸರನ್ನು ಭಾರತ ರತ್ನ ಪ್ರಶಸ್ತಿಗೆ ಪರಿಗಣಿಸಬೇಕು ಎಂದು ನಾನು ಮನವಿ ಮಾಡುತ್ತೇನೆ ಎಂದು ಕುಮಾರಸ್ವಾಮಿ ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಸಿದ್ಧಗಂಗಾ ಮಠದ ಶ್ರೀಗಳಾದ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಗಳಿಗೆ 'ಭಾರತ ರತ್ನ' ಘೋಷಿಸುವಂತೆ ಕೋರಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರ. pic.twitter.com/SipS8KMCu7
— CM of Karnataka (@CMofKarnataka) June 3, 2019
2019ರ ಜನವರಿ 21ರಂದು ಬೆಳಗ್ಗೆ 11.44ಕ್ಕೆ ಶಿವಕುಮಾರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದರು. ಸ್ವಾಮೀಜಿಗಳು ಅನಾರೋಗ್ಯಕ್ಕೆ ಒಳಗಾದ ಸಮಯದಿಂದ ಅವರಿಗೆ ಭಾರತ ರತ್ನ ನೀಡಬೇಕು ಎಂದು ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುತ್ತಿತ್ತು.
ಈಗ ಮರಣೋತ್ತರವಾಗಿಯಾದರೂ ಭಾರತ ರತ್ನವನ್ನು ನೀಡಲಿ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರಬರೆದಿದ್ದಾರೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ










Click it and Unblock the Notifications