ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ, ಬೆಂಗಳೂರು-ತುಮಕೂರು ಮೆಟ್ರೋ ಯೋಜನೆ ಬಗ್ಗೆ ಮಹತ್ವದ ಅಪ್ಡೇಟ್
Indian Railways: ರಾಜ್ಯದಲ್ಲಿ ರೈಲ್ವೆ ಜಾಲ ವಿಸ್ತರಣೆ ಆಗುತ್ತಲಿದೆ. ಇದೀಗ ಬಹುನಿರೀಕ್ಷಿತ ದಾವಣಗದೆರೆ-ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗ ಕಾಮಗಾರಿ ಹಾಗೂ ಬೆಂಗಳೂರು-ತುಮಕೂರು ಮೆಟ್ರೋ ಯೋಜನೆ ಬಗ್ಗೆ ಮಹತ್ವದ ಅಪ್ಡೇಟ್‌ವೊಂದನ್ನು ನೀಡಿದ್ದಾರೆ. ಹಾಗಾದ್ರೆ, ಏನೆಲ್ಲಾ ಹೇಳಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ವಿ.ಸೋಮಣ್ಣ ಅವರು ಕೇಂದ್ರ ಸಚಿವರಾಗಿನಿಂದ ರಾಜ್ಯದಲ್ಲಿ ರೈಲ್ವೆ ವಿಭಾಗದಲ್ಲಿ ದೊಡ್ಡ ಮಟ್ಟದ ಅಭಿವೃದ್ಧಿ ಕಾಮಗಾರಿಗಳು ಆಗುತ್ತಲಿವೆ. ಇದೀಗ ಇಂದು (ಡಿಸೆಂಬರ್ 13) ತುಮಕೂರಿನ ಹೆಗ್ಗೆರೆಯಲ್ಲಿ ರೇಲ್ವೆ ಮೇಲ್ಸೆತುವೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಈ ವೇಳೆ ದಾವಣಗದೆರೆ-ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗ ಕಾಮಗಾರಿ ಹಾಗೂ ಬೆಂಗಳೂರು-ತುಮಕೂರು ಮೆಟ್ರೋ ಯೋಜನೆ ಬಗ್ಗೆ ಮಹತ್ವದ ಮಾಹಿತಿ ನೀಡಿದರು.

ನಾನು ಸಚಿವನಾದ ನಂತರ ದಾವಣಗೆರೆ-ಚಿತ್ರದುರ್ಗ-ತುಮಕೂರು, ತುಮಕೂರು-ರಾಯದುರ್ಗ ರೈಲು ಮಾರ್ಗ ಕಾಮಗಾರಿಗೆ ಚಾಲನೆ ಕೊಟ್ಟಿದ್ದೆನೆ. 20ಕ್ಕೂ ಹೆಚ್ಚು ಮೇಲ್ಸೆತುವೆ ಮಾಡಿದ್ದೇನೆ ಎಂದು ಹೇಳಿದರು. ಇದೇ ವೇಳೆ ಬೆಂಗಳೂರು-ತುಮಕೂರು ಮೆಟ್ರೊ ಯೋಜನೆಗೆ ಕಾಂಗ್ರೆಸ್ ನಾಯಕರು ವಿರೋಧ ಮಾಡುತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ ಮಾಡಿದ್ದಾರೆ.
ತುಮಕೂರಿನ ಪಂಡಿತನಹಳ್ಳಿಯಲ್ಲಿ ರೇಲ್ವೆ ಮೇಲ್ಸೆತುವೆ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿ ಮಾತನಾಡಿದ ಅವರು, ನಿನ್ನೆ ಒಬ್ಬ ಕಾಂಗ್ರೆಸ್ ನಾಯಕರು ನನ್ನ ಬಳಿ ಬಂದು ತುಮಕೂರು ಮೆಟ್ರೋಗೆ ವಿರೋಧ ವ್ಯಕ್ತಪಡಿಸಿದರು. ಪರಮೇಶ್ವರ್ ಯಾಕೆ ತುಮಕೂರಿಗೆ ಮೆಟ್ರೋ ತೆಗೆದುಕೊಂಡು ಹೋಗುತ್ತಾರೆ ಎಂದು ಕೇಳಿದರು. ಅದಕ್ಕೆ ನಾನು ಜಿ.ಪರಮೇಶ್ವರ್ ಒಳ್ಳೆ ಕೆಲಸ ಮಾಡುತಿದ್ದಾರೆ. ನಾನು ಅದಕ್ಕೆ ಸಹಮಹತ ವ್ಯಕ್ತಪಡಿಸುತ್ತೇನೆ ಎಂದು ಹೇಳಿದೆ. ಆಗ ಕಾಂಗ್ರೆಸ್ ನಾಯಕರು ಸುಮ್ಮನೆ ಆದರು ಎಂದು ಹೇಳಿದರು.
ಇನ್ನೂ ರೈಲ್ವೆಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕೆಲಸ ಮಾಡಿದ್ದೇನೆ. ರೈಲ್ವೆ ಗೇಟ್ ಸಮಸ್ಯೆಗೆ ಪರಿಹಾರ ನೀಡಿದ್ದೇನೆ. 13 ಆರ್‌ಒಬಿ (ROB), 12 ಆರ್‌ಯುಬಿ (RUB), 3 ಎಫ್‌ಒಬಿ (FOB)
ಈ ಎಲ್ಲಾ ಯೋಜನೆಗಳು ಮುಂದಿನ ಪೀಳಿಗೆಗೆ ರೈಲ್ವೆ ಇಲಾಖೆಯ ದೊಡ್ಡ ಕೊಡುಗೆ ಎಂದು ಹೇಳಿದರು. ಈ ಯೋಜನೆಗಳಿಗೆ ಸಾವಿರ ಕೋಟಿ ರೂಪಾಯಿಗೂ ಅಧಿಕ ವೆಚ್ಚಾ ಆಗಿದೆ. ಇದರಲ್ಲಿ ರಾಜ್ಯ ಸರ್ಕಾರ ಒಂದು ರೂಪಾಯಿ ನೀಡಿಲ್ಲ ಎಂದು ಸ್ಪಷ್ಟನೆ ನೀಡಿಸಿದರು.
ಎಂ.ಬಿ.ಪಾಟೀಲ್ ಹೇಳಿದ್ದೇನು?: ಇನ್ನೂ ಇತ್ತೀಚೆಗಷ್ಟೇ ಸಚಿವ ಎಂ.ಬಿ.ಪಾಟೀಲ್ ಅವರು ಮಾತನಾಡಿ, ತುಮಕೂರು-ರಾಯದುರ್ಗ ನಡುವೆ ರೈಲು ಹಳಿ ಜೋಡಣೆ ಕಾರ್ಯ ಮುಂದುವರೆದಿದೆ. ತುಮಕೂರು-ಊರುಕೆರೆ ಮತ್ತು ದೊಡ್ಡಹಳ್ಳಿ-ಪಾವಗಡ ನಡುವೆ ಇದೇ ವರ್ಷ 27 ಕಿಲೋ ಮೀಟರ್ ಕಾಮಗಾರಿ ಮುಕ್ತಾಯ ಆಗಲಿದೆ. ತುಮಕೂರು-ಊರುಕೆರೆ ನಡುವೆ ತುಂಬಾ ಕೈಗಾರಿಕೆಗಳು ಇವೆ. ಈ ಹಿನ್ನೆಲೆ ಈ ಮಾರ್ಗದಲ್ಲಿ ಪ್ರತಿನಿತ್ಯ ಸಾವಿರಾರು ಜನ ಓಡಾಡುತ್ತಾರೆ.
ಮತ್ತೊಂದೆಡೆ, ದೊಡ್ಡಹಳ್ಳಿ-ಪಾವಗಡ ನಡುವಿನ 20 ಕಿಲೋ ಮೀಟರ್ ಮಾರ್ಗದಲ್ಲಿ 2026ರ ಜನವರಿಯಿಂದ ರೈಲು ಸಂಚಾರ ಮಾಡಲಿದೆ. ಮಡಕಶಿರಾ-ಪಾವಗಡ ನಡುವಿನ ಕಾಮಗಾರಿ 2026ರ ಡಿಸೆಂಬರ್ ವೇಳೆಗೆ, ಮಧುಗಿರಿ-ಪಾವಗಡ ಮಾರ್ಗದಲ್ಲಿ ಹಳಿ ಜೋಡಣೆಯು 2028ರ ಫೆಬ್ರವರಿ ವೇಳೆಗೆ ಮುಕ್ತಾಯ ಆಗಲಿದೆ ಎಂದು ಎಂಬಿ ಪಾಟೀಲ್ ಅವರು ಹೇಳಿದರು.
ತುಮಕೂರು-ಚಿತ್ರದುರ್ಗ-ದಾವಣಗೆರೆ ಮಾರ್ಗದ ಊರುಕೆರೆ-ತಿಮ್ಮರಾಯನಹಳ್ಳಿ ನಡುವೆ 13 ಕಿಲೋ ಮೀಟರ್ ಹಳಿ ಜೋಡಣೆ ಇದೇ ತಿಂಗಳು ಮುಕ್ತಾಯ ಆಗಲಿದೆ. ಭರಮಸಾಗರ-ಹೆಬ್ಬಾಳು, ಹೆಬ್ಬಾಳು-ತೋಳಹುಣಸೆ ನಡುವೆ 2026ರ ಫೆಬ್ರವರಿ ಅಂತ್ಯದೊಳಗೆ ಹಳಿ ಜೋಡಣೆ ಆಗಲಿದೆ ಎಂದು ಹೇಳಿದರು.
ಈ ರೈಲ್ವೆ ಮಾರ್ಗ ಯೋಜನೆಗೆ ಈ ಬಾರಿ ಬಜೆಟ್‌ನಲ್ಲಿ 549.45 ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ. ಈ ಮಾರ್ಗದ ಉದ್ದ ಒಟ್ಟು 191 ಕಿಲೋ ಮೀಟರ್ ಆಗಿದೆ. ಹಳೇ ಮಾರ್ಗದಲ್ಲಿ ತುಮಕೂರು-ದಾವಣಗೆರೆ ಹಾಗೂ ದಾವಣಗೆರೆ-ತುಮಕೂರಿಗೆ ಅರಸಿಕೆರೆ ಜಂಕ್ಷನ್ ಮೇಲೆ ಸುತ್ತುವರಿದುಕೊಂಡು ಹೋಗಬೇಕಿತ್ತು. ಇದರಿಂದ ತುಂಬಾ ಸಮಯ ಬೇಕಾಗುತ್ತಿತ್ತು. ಆದರೆ, ಹೊಸ ಮಾರ್ಗದಿಂದ ಅಂತರ ಹಾಗೂ ಸಮಯ ಎರಡು ಕಡಿಮೆ ಆದಂತಾಗಲಿದೆ.
-
ಹಿರಿಯ ನಾಗರಿಕರಿಗೆ ರೈಲ್ವೇ ನಿಯಮಗಳು 2026: ರಿಯಾಯಿತಿ ಇಲ್ಲದಿದ್ದರೂ ಸೌಲಭ್ಯಗಳು ಮುಂದುವರಿಕೆ -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications