Shakuntala Nataraj: ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ನೇಣಿಗೆ ಶರಣು

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್‌ರ ಪುತ್ರ 7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ತ್ರಿಶಾನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಾರಿವಾಳ ಬೆಟ್ಟಿಂಗ್ ವಿಚಾರದಲ್ಲಿ ಗೆಳೆಯರ ನಡುವೆ ಗಲಾಟೆಯಾಗಿರುವುದೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದ್ದು ಇನ್ನಷ್ಟು ಮಾಹಿತಿ ತಿಳಿಯಬೇಕಿದೆ.

ಶಕುಂತಲಾ ನಟರಾಜ್ ತುಮಕೂರು ನಗರದ ವಿಜಯನಗರದ 2ನೇ ಮುಖ್ಯರಸ್ತೆಯಲ್ಲಿ ವಾಸವಿದ್ದರು. 13 ವರ್ಷದ ತ್ರಿಶಾಲ್ ತುಮಕೂರು ನಗರದ ಸರ್ವೋದಯ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿದ್ದ. ತಾಯಿ ಶಕುಂತಲಾ ಜೊತೆ ತುಮಕೂರಿನಲ್ಲೇ ವಾಸವಿದ್ದ ತ್ರಿಶಾಲ್, ಶುಕ್ರವಾರ ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಶಾಲಾ ಸಮವಸ್ತ್ರದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Bjp activist shakuntala nataraj son commits suicide

ವಿಷಯ ತಿಳಿಯುತ್ತಿದ್ದಂತೆ ಜಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೊತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಶಕುಂತಲಾ

ಶಕುಂತಲಾ ನಟರಾಜ್‌ ಬಿಜೆಪಿ ಕಾರ್ಯಕರ್ತೆಯಾಗಿ ಹೆಸರು ಮಾಡಿದವರು. ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಅವರು, ಪ್ರಧಾನಿ ನರೇಂದ್ರ ಮೋದಿಗೆ ದೊಡ್ಡ ಅಭಿಮಾನಿಯಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯವಾಗಿರುತ್ತಾರೆ. ಕಾಂಗ್ರೆಸ್‌ನ ಐಡಿಯಾಲಜಿಗಳನ್ನು ವಿರೋಧಿಸುತ್ತಲೇ ಬಂದಿದ್ದಾರೆ.

ಬೆಂಗಳೂರಿನ ಲುಲು ಮಾಲ್‌ನಲ್ಲಿ ಪಾಕಿಸ್ತಾನ ಬಾವುಟ ಹಾರಿಸಲಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡಿದ್ದರಿಂದ ಅವರ ಮೇಲೆ ಪ್ರಕರಣ ಕೂಡ ದಾಖಲಿಸಲಾಗಿತ್ತು. ಮುಡಾ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಸಿಎಂ ಸಿದ್ದರಾಮ್ಯ ಮತ್ತು ಅವರ ಕುಟುಂಬವನ್ನು ಟೀಕಿಸಿದ್ದರಿಂದ ಪೊಲೀಸರು ಅವರನ್ನು ಬಂಧಿಸಿದ್ದರು. ಮಂಡ್ಯದಲ್ಲಿ ನಡೆದ ಮಸೀದಿ ಮೇಲಿನ ಕಲ್ಲೆಸೆತ ಘಟನೆ ಬಗ್ಗೆ ಮಾಡಿದ್ದ ಟ್ವೀಟ್‌ ಆಧರಿಸಿ ಪೊಲೀಸರು ರೌಡಿ ಶೀಟ್ ತೆರೆಯುವ ಬಗ್ಗೆ ನೋಟಿಸ್ ಕೊಟ್ಟಿದ್ದರು.

Helplines: COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+