• search
  • Live TV
ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಿರಾ ಉಪ ಚುನಾವಣೆ: ಬಿಜೆಪಿಗೆ ಶುರುವಾಯ್ತು ಸೋಲಿನ ಭೀತಿ, ಕಾರಣ?

|

ಬೆಂಗಳೂರು, ಅ. 27: ಶಿರಾ ಉಪಚುಜಾವಣೆಯಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ, ಸಿಎಂ ಪುತ್ರ ಬಿ ವೈ ವಿಜಯೇಂದ್ರ ತೊಡಗಿಸಿಕೊಂಡಿದ್ದಾರೆ. ಕೆ.ಆರ್. ನಗರದಂತೆ ಬಿಜೆಪಿಗೆ ಅನಿರೀಕ್ಷಿತ ಫಲಿತಾಂಶ ತರಬಹುದು ಎಂದುಕೊಂಡಿದ್ದ ಬಿಜೆಪಿಗೆ ಇದೀಗ ಸೋಲಿನ ಆತಂಕ ಆವರಿಸಿದೆ. ಅದಕ್ಕೆ ಕಾರಣವಾಗಿರುವುದು ಪಕ್ಷ ವಿರೋಧಿ ಚಟುವಟಿಕೆಗೆ ಸಂಬಂಧಿಸಿದಂತೆ ಆಗುತ್ತಿರುವ ಬಿಜೆಪಿ ನಾಯಕರ ಸಾಲು ಸಾಲು ಉಚ್ಛಾಟನೆ.

ಪರೋಕ್ಷವಾಗಿ ಶಿರಾ ವಿಧಾನಸಭಾ ಕ್ಷೇತ್ರದೊಂದಿಗೆ ನಂಟು ಹೊಂದಿದ್ದವರನ್ನು ಕಳೆದ ಒಂದು ವಾರದ ಅವಧಿಯಲ್ಲಿ ಬಿಜೆಪಿ ಮುಂದಿನ ಆರು ವರ್ಷಗಳವರೆಗೆ ಉಚ್ಛಾಟನೆ ಮಾಡಿದೆ. ಇದು ಕ್ಷೇತ್ರದ ಚಿತ್ರಣವನ್ನೇ ಕಳೆದೆರಡು ದಿನಗಳಿಂದ ಬದಲಾಯಿಸಿದೆ. ಹೀಗಾಗಿಯೇ ಎಲ್ಲಿಯೂ ಚುನಾವಣಾ ಪ್ರಚಾರಕ್ಕೆ ಎಲ್ಲಗೂ ಹೋಗುವುದಿಲ್ಲ ಎಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಇದೇ ಅಕ್ಟೋಬರ್ 30 ರಂದು ಶಿರಾ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತೇನೆ ಎಂದಿದ್ದಾರೆ. ಪ್ರಚಾರಕ್ಕೆ ಬರಲೇ ಬೇಕು ಎಂದು ವಿಜಯೇಂದ್ರ ಅವರು ಒತ್ತಡ ಹಾಕುತ್ತಿದ್ದಾರೆ. ಹೀಗಾಗಿ ಸಿಎಂ ಯಡಿಯೂರಪ್ಪ ಅವರು ಪ್ರಚಾರಕ್ಕೆ ತೆರಳುತ್ತಿದ್ದಾರೆ ಎನ್ನಲಾಗುತ್ತಿದೆ.

ಶಿರಾ ಉಪಚುನಾವಣೆ: ಇದು ಬಿ.ವೈ.ವಿಜಯೇಂದ್ರ ಮತ್ತು ಟೀಂನ ವರ್ಕಿಂಗ್ ಸ್ಟೈಲ್!

ಕಳೆದ ಐದು ದಿನಗಳ ಅಂತರದಲ್ಲಿ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ಇಬ್ಬರು ಪ್ರಭಾವಿ ನಾಯಕರನ್ನು ಬಿಜೆಪಿ ಉಚ್ಚಾಟಿಸಿದೆ. ಇದು ಶಿರಾ ಕ್ಷೇತ್ರದಲ್ಲಿ ಹಿನ್ನಡೆಗೆ ಕಾರಣ. ಅವರಲ್ಲೊಬ್ಬರು ಹಾಲಿ ಬಿಜೆಪಿ ಶಾಸಕಿಯ ಪತಿ ಎಂಬುದು ಗಮನಿಸಬೇಕಾದ ಅಂಶ!

ಶಿರಾ ಉಪ ಚುನಾವಣೆ

ಶಿರಾ ಉಪ ಚುನಾವಣೆ

ಜೆಡಿಎಸ್ ಶಾಸಕ ಬಿ. ಸತ್ಯನಾರಾಯಣ ಅವರ ಅಕಾಲಿನ ನಿಧನದಿಂದ ಶಿರಾ ಕ್ಷೇತ್ರದಲ್ಲಿ ಇದೀಗ ಉಪ ಚುನಾವಣೆ ಬಂದಿದೆ. ಕಳೆದ ಮೂರು ಚುನಾವಣೆಗಳಲ್ಲಿಯೂ ಬಿಜೆಪಿ ಈ ಕ್ಷೇತ್ರದಲ್ಲಿ ಮೂರನೇ ಸ್ಥಾನದಲ್ಲಿದೆ. ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್ ಆರ್ ಗೌಡ ಅವರು 13 ಸಾವಿರ ಮತಗಳನ್ನು ತಡಗೆದುಕೊಂಡಿದ್ದರೆ, ಪಕ್ಷೇತರರಾಗಿ ಸ್ಪರ್ಧಿಸಿದ್ದ ಸಿ.ಎಂ. ನಾಗರಾಜ್ ಅವರು 12 ಸಾವಿರ ಮತಗಳನ್ನು ಪಡೆದುಕೊಂಡಿದ್ದರು.

ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರನ್ನು ಸೋಲಿಸಿ ಜೆಡಿಎಸ್ ಅಭ್ಯರ್ಥಿಯಾಗಿದ್ದ ಬಿ. ಸತ್ಯನಾರಾಯಣ ಅವರು ಜಯಚಂದ್ರ ಅವರಿಗಿಂತ 10 ಸಾವಿರಕ್ಕಿಂತ ಹೆಚ್ಚು ಮತಗಳ ಅಂತರದಲ್ಲಿ ಗೆಲವು ಸಾಧಿಸಿದ್ದರು. ಹೀಗಾಗಿ ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಬಲವಾಗಿವೆ. ಆದರೂ ಅನಿರೀಕ್ಷಿತ ಫಲಿತಾಂಶ ಕೊಡುವ ನಿಟ್ಟಿನಲ್ಲಿ ಕೆಲಸ ಆರಂಭಿಸಿದ್ದ ಬಿ.ವೈ. ವಿಜಯೇಂದ್ರ ಅವರಿಗೆ ಸೋಲಿನ ಭೀತಿ ಶುರುವಾಗಿದೆ. ಅದಕ್ಕೆ ಕಾರಣ ಉಚ್ಛಾಟನೆ.

ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಪತಿ ಉಚ್ಛಾಟನೆ

ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಪತಿ ಉಚ್ಛಾಟನೆ

ಹಿರಿಯೂರು ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ಪತಿ ಡಿ.ಟಿ. ಶ್ರೀನಿವಾಸ್ ಅವರನ್ನು ವಿಧಾನ ಪರಿಷತ್ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರಿಂದ ಪಕ್ಷ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ವಿಶೇಷ ಎಂದರೆ ಗೊಲ್ಲ ಸಮುದಾಯಕ್ಕೆ ಸೇರಿರುವ ಡಿ.ಟಿ. ಶ್ರೀನಿವಾಸ್ ಅವರು ಇದೇ ಕಾರಣದಿಂದ ಶಿರಾ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಜೊತೆಗೆ ಇದೀಗ ಪಕ್ಷದಿಂದ ಉಚ್ಛಾಟನೆ ಮಾಡುರುವುದರಿಂದ ಅದರ ಪರಿಣಾಮ ಶಿರಾ ಉಪ ಚನಾವಣೆ ಮೇ ಆಗಲಿದೆ.

ಸಿಎಂ ಯಡಿಯೂರಪ್ಪ ಅವರ ಆಪ್ತ ಉಚ್ಛಾಟನೆ

ಸಿಎಂ ಯಡಿಯೂರಪ್ಪ ಅವರ ಆಪ್ತ ಉಚ್ಛಾಟನೆ

ಮತ್ತದೇ ವಿಧಾನ ಪರಿಷತ್ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಮತ್ತೊಬ್ಬ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಾಲನೂರು ಎಸ್. ಲೇಪಾಕ್ಷ ಅವರನ್ನೂ ಪಕ್ಷದಿಂಸ ಉಚ್ಛಾಟಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಆದೇಶ ಮಾಡಿದ್ದಾರೆ. ಲೇಪಾಕ್ಷ ಅವರು ನೇರವಾಗಿ ಶಿರಾ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿಲ್ಲವಾದರೂ ಸಿಎಂ ಯಡಿಯೂರಪ್ಪ ಅವರಿಗೆ ಅತ್ಯಾಪ್ತರಾಗಿದ್ದವರು. ಇದೀಗ ಅವರನ್ನೂ ಬಿಜೆಪಿಯಿಂದ ಉಚ್ಛಾಟನೆ ಮಾಡಿರುವುದು ಪರೋಕ್ಷವಾಗಿ ಶಿರಾ ಕ್ಷೇತ್ರದಲ್ಲಿ ಬಿಜೆಪಿ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ.

ಸರ್ಕಾರದ ಮೇಲೆ ಉಪ ಚುನಾವಣೆ ಪರಿಣಾಮ

ಸರ್ಕಾರದ ಮೇಲೆ ಉಪ ಚುನಾವಣೆ ಪರಿಣಾಮ

ಆರ್ ಆರ್ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆ ಮೂರು ರಾಜಕೀಯ ಪಕ್ಷಗಳಿಗೆ ನಿರ್ಣಾಯಕ. ಅದರಲ್ಲೂ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳಿಗೆ ಪ್ರತಿಷ್ಠೆಯ ವಿಚಾರವಾಗಿದೆ. ಉಪ ಚುನಾವಣೆಯ ಸೋಲು ಅಥವಾ ಗೆಲವು ನೇರವಾಗಿ ರಾಜ್ಯ ಬಿಜೆಪಿ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲವಾದರೂ ರಾಜಕೀಯದ ಹಲವು ವಿಪ್ಲವಗಳಿಗೆ ಮುನ್ನುಡಿಯಾಗಲಿದೆ. ಹೀಗಾಗಿಯೇ ಬಿವೈ ವಿಜಯೇಂದ್ರ ಅವರು ಶಿರಾ ಕ್ಷೇತ್ರದಲ್ಲಿ ಬೀಡು ಬಿಟ್ಟಿದ್ದಾರೆ ಎನ್ನಲಾಗಿದೆ.

ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ನಾಯಕತ್ವ ಬದಲಾವಣೆ ಕೂಗು ಹಾಗೂ ಕಾಂಗ್ರೆಸ್ ಪಕ್ಷದಲ್ಲಿನ ಮುಂದಿನ ಮುಖ್ಯಮಂತ್ರಿ ವಿಚಾರಗಳಿಗೆ ಈ ಚುನಾವಣೆ ಫಲಿತಾಂಶ ನಿರ್ಣಾಯಕವಾಗಲಿದೆ. ಉಪ ಚುನಾವಣೆಯ ಫಲಿತಾಂಶದಿಂದ ರಾಜ್ಯ ಬಿಜೆಪಿ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲವಾದರೂ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಮಸ್ಯೆ ಆಗುವುದಿಲ್ಲ ಅಂತಿಲ್ಲ. ಹೀಗಾಗಿ ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಗೆಲ್ಲಬೇಕಾದ ಅನಿವಾರ್ಯತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗಿದೆ.

English summary
The BJP has expelled two of its leaders, who are contesting as rebel candidates in the Legislative Council Southeast Graduate Constituency election. It is said to have a direct impact on the outcome of the Sira by-election. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X