ಬಿಜೆಪಿ ಶಾಸಕ ಸಿಟಿ ರವಿ ಅವರಿದ್ದ ಕಾರು ಡಿಕ್ಕಿ ಹೊಡೆದು ಇಬ್ಬರ ದುರ್ಮರಣ

ತುಮಕೂರು, ಫೆಬ್ರವರಿ 19: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸಿಟಿ ರವಿ ಅವರಿದ್ದ ಕಾರು ರಸ್ತೆಯಲ್ಲಿ ನಿಂತಿದ್ದ ಎರಡು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತರಾದ ದುರ್ಘಟನೆ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ.

ತುಮಕೂರು ಜಿಲ್ಲೆಯ ಕುಣಿಗಲ್ ಸಮೀಪದ ಊರ್ಕೇನಹಳ್ಳಿ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಘಟನೆ ನಡೆದಿದೆ. ಪ್ರವಾಸಕ್ಕೆಂದು ತೆರಳಿದ್ದ ಸುಮಾರು 12 ಯುವಕರು, ಊರ್ಕೇನಹಳ್ಳಿ ಬಳಿ ಮೂತ್ರ ವಿಸರ್ಜನೆಗಾಗಿ ಕಾರು ನಿಲ್ಲಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ವೇಗವಾಗಿ ಬಂದ ಸಿಟಿ ರವಿ ಅವರಿದ್ದ ಕಾರು ಮೂವರು ಯುವಕರಿಗೆ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಇಬ್ಬರು ಮೃತರಾದರೆ, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಶಶಿಕುಮಾರ್ ಮತ್ತು ಸುನಿಲ್ ಎಂಬುವವರು ಮೃತರಾಗಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಘಟನೆಯ ನಂತರ ಸ್ಥಳ ಮಹಜರು ಮಾಡದೆ ವಾಹನವನ್ನು ಸ್ಥಳಾಂತರಿಸಲಾಗಿದೆ ಎಂದು ಆರೋಪಿಸಲಾಗಿದೆ.

 BJP MLA CT Ravis Car collides with 2 cars, 2 men killed

ಎರಡು ಕಾರಿನಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಕೆಲ ಸ್ನೇಹಿತರು ತುಮಕೂರಿನ ಕುಣಿಗಲ್ ಬಳಿ ಕಾರು ನಿಲ್ಲಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ವೇಗವಾಗಿ ಬಂದ ಸಿಟಿ ರವಿ ಅವರಿದ್ದ ಕಾರು ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಸಿಟಿ ರವಿ ಅವರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಘಟನೆ ಕುರಿತು ಅವರೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ನಂತರ ಸಿಟಿ ರವಿ ಅವರು ಬೇರೆ ಕಾರಿನಲ್ಲಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಅವರ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+