ಅಮಿತ್ ಶಾ ರೋಡ್ ಷೋ ತುಮಕೂರಿನಲ್ಲಿ ಏಪ್ರಿಲ್ 29ಕ್ಕೆ
ತುಮಕೂರು, ಏಪ್ರಿಲ್ 28: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಭಾನುವಾರ (ಏಪ್ರಿಲ್ 29) ತುಮಕೂರು ನಗರಕ್ಕೆ ಬರಲಿದ್ದು, ರೋಡ್ ಷೋನಲ್ಲಿ ಭಾಗವಹಿಸಿ, ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುವುದಾಗಿ ಬಿಜೆಪಿ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಜಿ.ಬಿ.ಜ್ಯೋತಿಗಣೇಶ್ ಅವರು ತಿಳಿಸಿದರು.
ಇಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಭಾನುವಾರ ಸಂಜೆ ನಾಲ್ಕು ಗಂಟೆ ವೇಳೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಶಾ ತುಮಕೂರು ನಗರಕ್ಕೆ ಬರಲಿದ್ದಾರೆ. ಸಿದ್ದಗಂಗಾ ಎಂಜಿನಿಯರಿಂಗ್ ಕಾಲೇಜು ಮುಖ್ಯ ದ್ವಾರದಿಂದ ರೋಡ್ ಷೋ ಆರಂಭವಾಗಲಿದೆ.
ಗಂಗೋತ್ರಿ ಮುಖ್ಯರಸ್ತೆ, ಎಸ್ ಐಟಿ ರಸ್ತೆ ಮಾರ್ಗವಾಗಿ ಸರಸ್ವತಿ ಪುರಂ ಭಾಗದಲ್ಲಿ ರೋಡ್ ಷೋ ನಡೆಸುತ್ತಾರೆ. ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಬಿಜೆಪಿ ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಇದೇ ವೇಳೆ ಅವರು ಮನವಿ ಮಾಡಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ನೇತೃತ್ವದಲ್ಲಿ ದೇಶದ ಇಪ್ಪತ್ತೆರಡು ರಾಜ್ಯಗಳಲ್ಲಿ ಅಧಿಕಾರದಲ್ಲಿ ಪಾಲ್ಗೊಳ್ಳಲು ಬಿಜೆಪಿ ಸಫಲವಾಗಿದೆ, ಅದೇ ರೀತಿ ಕರ್ನಾಟಕದಲ್ಲಿಯೂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಬಹುಮತ ಸಾಧಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಮುಖಂಡರಾದ ರವಿಶಂಕರ್, ನಾಗಣ್ಣ ಇತರರು ಸುದ್ದಿಗೋಷ್ಟಿಯಲ್ಲಿ ಹಾಜರಿದ್ದರು.












Click it and Unblock the Notifications