ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿರಾ ಉಪ ಚುನಾವಣೆ ಗೆಲ್ಲಲು ಬಿಜೆಪಿ ಹೊಸ ಕಾರ್ಯತಂತ್ರ!

|
Google Oneindia Kannada News

ತುಮಕೂರು, ಸೆಪ್ಟೆಂಬರ್ 22: ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದ ಚುನಾವಣೆ ಎಂದರೆ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಹೋರಾಟ. ಈ ಬಾರಿಯ ಉಪ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಗೆಲ್ಲಬೇಕು ಎಂದು ಬಿಜೆಪಿ ಪ್ರಯತ್ನ ನಡೆಸುತ್ತಿದೆ.

ರಾಜ್ಯದಲ್ಲಿ ಆಡಳಿತದಲ್ಲಿ ಇರುವ ಸರ್ಕಾರ ಉಪ ಚುನಾವಣೆಯಲ್ಲಿ ಗೆಲ್ಲುವುದು ಸುಲಭ. ಇದನ್ನು ಮುಂದಿಟ್ಟುಕೊಂಡು ಬಿಜೆಪಿ ಶಿರಾದಲ್ಲಿ ಗೆಲುವಿನ ಬಾವುಟ ಹಾರಿಸಲು ಮುಂದಾಗಿದೆ. ಇದರ ಜೊತೆಗೆ ವಿಶಿಷ್ಟ ಕಾರ್ಯತಂತ್ರವನ್ನು ರೂಪಿಸಿದೆ.

ಶಿರಾ ಉಪ ಚುನಾವಣೆ; ಪ್ರಚಾರದ ಅಖಾಡಕ್ಕಿಳಿದ ಬಿ. ವೈ. ವಿಜಯೇಂದ್ರ ಶಿರಾ ಉಪ ಚುನಾವಣೆ; ಪ್ರಚಾರದ ಅಖಾಡಕ್ಕಿಳಿದ ಬಿ. ವೈ. ವಿಜಯೇಂದ್ರ

ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿ ಕುಮಾರ್ ಈಗಾಗಲೇ ಶಿರಾದಲ್ಲಿ ಬೂತ್ ಮಟ್ಟದ ಸಭೆಗಳನ್ನುನಡೆಸುತ್ತಿದ್ದಾರೆ. ಸೋಮವಾರ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಸಹ ಶಿರಾಕ್ಕೆ ಭೇಟಿ ಕೊಟ್ಟು ಕಾರ್ಯಕರ್ತರ ಉತ್ಸಾಹ ಹೆಚ್ಚಿಸಿದ್ದಾರೆ.

ಶಿರಾ ಉಪಚುನಾವಣೆ: ಮಾಜಿ ಸಚಿವ ಟಿ.ಬಿ. ಜಯಚಂದ್ರ ಕಾಂಗ್ರೆಸ್ ಅಭ್ಯರ್ಥಿಶಿರಾ ಉಪಚುನಾವಣೆ: ಮಾಜಿ ಸಚಿವ ಟಿ.ಬಿ. ಜಯಚಂದ್ರ ಕಾಂಗ್ರೆಸ್ ಅಭ್ಯರ್ಥಿ

ಕಾಂಗ್ರೆಸ್ ಶಿರಾ ಕ್ಷೇತ್ರವನ್ನು ವಶಕ್ಕೆ ಪಡೆಯಲು ತಂತ್ರ ರೂಪಿಸುತ್ತಿದೆ. ಟಿ. ಬಿ. ಜಯಚಂದ್ರ, ಡಾ. ಜಿ. ಪರಮೇಶ್ವರ, ಕೆ. ಎನ್. ರಾಜಣ್ಣ ಎಲ್ಲರೂ ಒಂದಾಗಿ ಗೆಲುವು ಸಾಧಿಸಲು ಪ್ರಯತ್ನ ನಡೆಸಿದ್ದಾರೆ. ಜೆಡಿಎಸ್ ಕ್ಷೇತ್ರ ಉಳಿಸಿಕೊಳ್ಳಲಿದೆಯೇ? ಕಾದು ನೋಡಬೇಕು.

 ಶಿರಾ ಎಲೆಕ್ಷನ್; ನಾನು ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದ ಶ್ರೀನಿವಾಸ್ ಶಿರಾ ಎಲೆಕ್ಷನ್; ನಾನು ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದ ಶ್ರೀನಿವಾಸ್

3ನೇ ಸ್ಥಾನದಲ್ಲಿ ಬಿಜೆಪಿ

3ನೇ ಸ್ಥಾನದಲ್ಲಿ ಬಿಜೆಪಿ

2018ರ ಚುನಾವಣೆಯಲ್ಲಿ ಬಿಜೆಪಿ ಶಿರಾ ಕ್ಷೇತ್ರದಲ್ಲಿ 3ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಆದರೆ, ಈಗ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಉಪ ಚುನಾವಣೆ ಗೆಲ್ಲಲೇಬೇಕು ಎಂದು ಪಕ್ಷ ತಂತ್ರ ರೂಪಿಸಿದೆ. ಹಿಂದೆ ಹಲವು ಚುನಾವಣೆಯಲ್ಲಿ ರೂಪಿಸಿದ್ದ ಪೇಜ್ ಪ್ರಮುಖ್ ತಂತ್ರ ಶಿರಾದಲ್ಲಿಯೂ ಜಾರಿಯಾಗಲಿದೆ.

ಪೇಜ್ ಪ್ರಮುಖ್‌ಗೆ ಜವಾಬ್ದಾರಿ

ಪೇಜ್ ಪ್ರಮುಖ್‌ಗೆ ಜವಾಬ್ದಾರಿ

ಎನ್. ರವಿಕುಮಾರ್ ಶಿರಾ ಕ್ಷೇತ್ರದಲ್ಲಿ ಬೂತ್ ಮಟ್ಟದ ಸಭೆಗಳನ್ನು ನಡೆಸುತ್ತಿದ್ದಾರೆ. ಪ್ರತಿ ಬೂತ್‌ನಲ್ಲಿ ಮತದಾರರ ಪಟ್ಟಿಯ ಒಂದು ಪುಟವನ್ನು ಒಬ್ಬ ಕಾರ್ಯಕರ್ತನಿಗೆ ನೀಡಲಾಗುತ್ತದೆ. ಪೇಜ್ ಪ್ರಮುಖ್ ಆದ ಆತ ತನ್ನ ಪುಟದಲ್ಲಿರುವ ಮತದಾರರು ಮತಚಲಾವಣೆ ಮಾಡಿರುವುದುನ್ನು ಖಾತ್ರಿ ಪಡಿಸಿಕೊಳ್ಳಬೇಕು.

ಕೇವಲ 16 ಸಾವಿರ ಮತಗಳು

ಕೇವಲ 16 ಸಾವಿರ ಮತಗಳು

2018ರ ಚುನಾವಣೆಯಲ್ಲಿ ಶಿರಾದಲ್ಲಿ ಬಿಜೆಪಿಯಿಂದ ಎಸ್. ಆರ್. ಗೌಡ ಅಭ್ಯರ್ಥಿಯಾಗಿದ್ದರು. ಕೇವಲ 16,959 ಮತಗಳನ್ನು ಪಡೆದಿದ್ದರು. ಈ ಉಪ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಗೆಲ್ಲಬೇಕು ಎಂದು ಬಿಜೆಪಿ ಚುನಾವಣೆ ಘೋಷಣೆಗೂ ಮೊದಲೇ ತಯಾರಿ ಆರಂಭಿಸಿದೆ. ಅಭ್ಯರ್ಥಿ ಯಾರು? ಎಂಬುದು ಇನ್ನೂ ನಿಗೂಢವಾಗಿದೆ.

ಒಂದಾಗಿರುವ ಜಯಚಂದ್ರ, ರಾಜಣ್ಣ

ಒಂದಾಗಿರುವ ಜಯಚಂದ್ರ, ರಾಜಣ್ಣ

ಬಿಜೆಪಿಗೆ ಕಾಂಗ್ರೆಸ್ ಪ್ರಬಲ ಪೈಪೋಟಿ ನೀಡಲಿದೆ. ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ ಶಿರಾ ಉಪ ಚುನಾವಣೆ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ. ಕೆ. ಎನ್. ರಾಜಣ್ಣ, ಪಕ್ಷ ಅಭ್ಯರ್ಥಿ ಎಂದು ಘೋಷಣೆ ಮಾಡಿರುವ ಟಿ. ಬಿ. ಜಯಚಂದ್ರ ಒಂದಾಗಿದ್ದಾರೆ. ಡಿ. ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ನಡೆಯುತ್ತಿರುವ ಮೊದಲ ಉಪ ಚುನಾವಣೆ ಗೆಲ್ಲುವ ಉತ್ಸಾಹದಲ್ಲಿ ತಂತ್ರರೂಪಿಸುತ್ತಿದ್ದಾರೆ.

ಜೆಡಿಎಸ್ ಗೆಲುವು ಸಾಧಿಸಿದ್ದ ಕ್ಷೇತ್ರ

ಜೆಡಿಎಸ್ ಗೆಲುವು ಸಾಧಿಸಿದ್ದ ಕ್ಷೇತ್ರ

2018ರ ಚುನಾವಣೆಯಲ್ಲಿ ಶಿರಾ ಕ್ಷೇತ್ರದಲ್ಲಿ ಜೆಡಿಎಸ್‌ನ ಬಿ. ಸತ್ಯನಾರಾಯಣ 74,338 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. 2013ರಲ್ಲಿ ಕಾಂಗ್ರೆಸ್‌ನ ಟಿ. ಬಿ. ಜಯಚಂದ್ರ ಗೆದ್ದಿದ್ದರು. ಆದರೆ, ಬಿ. ಸತ್ಯನಾರಾಯಣ 59,408 ಮತಗಳನ್ನು ಪಡೆದಿದ್ದರು. ಉಪ ಚುನಾವಣೆಯಲ್ಲಿ ಕ್ಷೇತ್ರ ಪುನಃ ಜೆಡಿಎಸ್ ವಶವಾಗಲಿದೆಯೇ ಕಾದು ನೋಡಬೇಕು.

English summary
BJP to follow page pramukh strategy in Sira assembly seat by elections. pramukh for each page of voter list in touch with voters and ensure that they will support party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X