ರಾಜ್ಯದಲ್ಲಿ ಅಮಿತ್ ಶಾ ಮಿಂಚು: ಸಿದ್ದಗಂಗಾ ಮಠಕ್ಕೆ ಭೇಟಿ

ತುಮಕೂರು, ಏಪ್ರಿಲ್ 16: ಇಂದು ಅಮಿತ್ ಶಾ ಅವರು ರಾಜ್ಯದ ಹಲವು ಕಡೆ ಚುನಾವಣಾ ಪ್ರಚಾರ ನಡೆಸಿದ್ದಾರೆ. ಇದೇ ಸಮಯ ಅವರು ತುಮಕೂರಿನ ಸಿದ್ದಗಂಗಾ ಮಠಕ್ಕೆ ಸಹ ಭೇಟಿ ನೀಡಿದ್ದಾರೆ.

ಬಿಜೆಪಿ, ಕಾಂಗ್ರೆಸ್, ಸಿಪಿಎಂ ಪ್ರಣಾಳಿಕೆಯ ತುಲನೆ. ಯಾವ ಪಕ್ಷದ ಪ್ರಣಾಳಿಕೆ ಉತ್ತಮವಾಗಿದೆ?

ಮೊದಲು ದಾವಣಗೆರೆಯಲ್ಲಿ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅಮಿತ್ ಶಾ ಅವರು, ಮಹಾಘಟಬಂಧನ್ ಒಂದು ಕಲಬೆರೆಕೆ ಮೈತ್ರಿ ಎಂದು ಹೇಳಿದರು.

ಜಿ.ಎಂ.ಸಿದ್ದೇಶ್ವರ ಅವರ ಪರ ಮತ ಯಾಚಿಸಿದ ಅವರು, ಘಟಬಂದನ್ ಅಧಿಕಾರಕ್ಕೆ ಬಂದರೆ ಪ್ರತಿದಿನ ಒಬ್ಬೊಬ್ಬರು ಪ್ರಧಾನ ಮಂತ್ರಿ ಆಗುತ್ತಾರೆ. ಅವರಿಗೆ ಅವರ ನಾಯಕರಾರು ಎಂಬುದೇ ಗೊತ್ತಿಲ್ಲ ಎಂದು ಶಾ ಹೇಳಿದರು.

BJP president Amit Shah road show in Tumkur and Davanegere

ಸೋನಿಯಾ ಮತ್ತು ರಾಹುಲ್ ಗಾಂಧಿಯಿಂದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಕುಮಾರಸ್ವಾಮಿ ಹೇಳುತ್ತಿದ್ದಾರೆ. ಆದ್ರೆ ಜನರು ಆಯ್ಕೆ ಮಾಡಿದ್ದನ್ನು ಮರೆತು ಮತದಾರಿಗೆ ಅನ್ಯಾಯ ಮಾಡಿದ್ದಾರೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಪಕ್ಷಕ್ಕೆ ಅಭಿವೃದ್ಧಿ ಬೇಕಾಗಿಲ್ಲ. ಅಧಿಕಾರಕ್ಕೆ ಬಂದು ಎಟಿಎಂ ಮೂಲಕ ಹಣ ಗಳಿಸಲಿಕ್ಕೆ ಕೆಲಸ ಮಾಡುತ್ತಿದೆ ಎಂದು ಅಮಿತ್ ಶಾ ಆರೋಪಿಸಿದರು.

BJP president Amit Shah road show in Tumkur and Davanegere

ಆ ನಂತರ ಅವರು ಅಲ್ಲಿಂದ ತುಮಕೂರಿನಲ್ಲಿ ರೋಡ್ ಶೋ ನಡೆಸಿದರು. ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ಅವರ ಪರ ಮತ ಯಾಚಿಸಿದರು. ಆ ನಂತರ ಸಿದ್ದಗಂಗಾ ಮಠಕ್ಕೆ ಭೇಟಿ ಮಾಡಿದ ಅಮಿತ್ ಶಾ ಅವರು ಸ್ವಾಮೀಜಿಗಳ ಆಶೀರ್ವಾದ ಪಡೆದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+