ಸಿಎಂ ಕುಮಾರಸ್ವಾಮಿ ಸುಳ್ಳು ಹೇಳ್ಕೊಂಡು ತಿರುಗಾಡ್ತಿದ್ದಾರೆ ಎಂದ ಬಿಎಸ್ ವೈ

ತುಮಕೂರು, ಸೆಪ್ಟೆಂಬರ್ 16: "ಕಾಂಗ್ರೆಸ್ ನಲ್ಲಿನ ಒಳಜಗಳಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಅದು ಕಾಂಗ್ರೆಸ್ ಮುಖಂಡರು ಮತ್ತು ಜೆಡಿಎಸ್ ಮುಖಂಡರಿಗೆ ಸಂಬಂಧಿಸಿದ್ದು" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಹೇಳಿದ್ದಾರೆ.

ತುಮಕೂರಿನ ಕ್ಯಾತ್ಸಂದ್ರದಲ್ಲಿರುವ ಸಿದ್ದಗಂಗಾಮಠಕ್ಕೆ ಭೇಟಿ ನೀಡಿ, ಶಿವಕುಮಾರ ಸ್ವಾಮೀಜಿ ಆಶೀರ್ವಾದ ಪಡೆದ ಬಳಿಕ ಮಾಧ್ಯಮದವರ ಜತೆಗೆ ಅವರು ಮಾತನಾಡಿದರು. ನಾವು 104 ಕ್ಷೇತ್ರಗಳಲ್ಲಿ ಗೆದ್ದಿದ್ದೇವೆ. ಪ್ರತಿಪಕ್ಷವಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ. ಇಂದು ಯಡಿಯೂರಿನ ಸಿದ್ದಲಿಂಗೇಶ್ವರ ದರ್ಶನ ಪಡೆಯಲಿದ್ದೇನೆ ಎಂದಿದ್ದಾರೆ.

ರಾಜ್ಯದಲ್ಲಿನ ರಿಯಲ್ ಎಸ್ಟೇಟ್, ಬಡ್ಡಿದಂಧೆ ಕೋರರ ವಿಚಾರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಬೇಜವಾಬ್ದಾರಿತನದ ಆರೋಪ ಮಾಡುತ್ತಿದ್ದಾರೆ. ಅದರ ಬಗ್ಗೆ ಮಾಹಿತಿ ಇದ್ದರೆ ಅವರನ್ನು ಬಂಧಿಸಿ, ದಂಧೆ ತಡೆಯಬೇಕು. ಇಸ್ಪೀಟ್, ಜೂಜುಕೋರರನ್ನು ತಡೆಯಲು ಇವರು ಏನು ಮಾಡುತ್ತಿದ್ದಾರೆ? ಅವರನ್ನು ಬಂಧಿಸುವುದು ಬಿಟ್ಟು ಬಿಜೆಪಿ ಮೇಲೆ ಆರೋಪ ಮಾಡಲಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ.

ಗಮನ ಬೇರೆಡೆ ಸೆಳೆಯುವ ಷಡ್ಯಂತ್ರ

ಗಮನ ಬೇರೆಡೆ ಸೆಳೆಯುವ ಷಡ್ಯಂತ್ರ

ನಾವು ಯಾರನ್ನಾದರೂ ರಕ್ಷಣೆ ಮಾಡಬೇಕು ಎಂದು ಹೇಳಿದ್ದೇವೆಯೇ? ಕುಮಾರಸ್ವಾಮಿಯವರ ವಿನಾಕಾರಣ ಆರೋಪಗಳು ರಾಜ್ಯದ ಜನರ ಗಮನವನ್ನು ಬೇರೆಡೆ ಸೆಳೆಯುವ ವ್ಯವಸ್ಥಿತ ಷಡ್ಯಂತ್ರವಾಗಿದೆ. ಈಗಿರುವ ಮೈತ್ರಿ ಸರಕಾರ ಕೇವಲ ವರ್ಗಾವಣೆ ದಂಧೆಗೆ ಮೀಸಲಾಗಿದೆ ಎಂದು ಬಿ.ಎಸ್.ಯಡಿಯೂರಪ್ಪ ಆರೋಪ ಮಾಡಿದ್ದಾರೆ.

ಸ್ಮಾರ್ಟ್ ಸಿಟಿ ಯೋಜನೆಗೆ ಕೇಂದ್ರ ಸರಕಾರದಿಂದ 1500 ಕೋಟಿ ಬಿಡುಗಡೆ

ಸ್ಮಾರ್ಟ್ ಸಿಟಿ ಯೋಜನೆಗೆ ಕೇಂದ್ರ ಸರಕಾರದಿಂದ 1500 ಕೋಟಿ ಬಿಡುಗಡೆ

ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಸಂಪೂರ್ಣ ಸ್ಥಗಿತಗೊಂಡಿದೆ. ಸರಕಾರ ಉಳಿಸಿಕೊಳ್ಳುವ ಮತ್ತು ಕಾಂಗ್ರೆಸ್ ಪಕ್ಷದಲ್ಲಿನ ಭಿನ್ನಾಭಿಪ್ರಾಯ ಸರಿಪಡಿಸಿಕೊಳ್ಳುವ ಬಗ್ಗೆಯೇ ತಲ್ಲೀನರಾಗಿದ್ದಾರೆ. ಇದು ಅಕ್ಷಮ್ಯ ಅಪರಾಧ. ಈಗಲಾದರೂ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಗಮನಹರಿಸಲಿ. ಸ್ಮಾರ್ಟ್ ಸಿಟಿ ಯೋಜನೆಗೆ ಕೇಂದ್ರ ಸರಕಾರ 1500 ಕೋಟಿ ಬಿಡುಗಡೆ ಮಾಡಿದೆ. ಅದರಲ್ಲಿ ಕೇವಲ 40 ಕೋಟಿ ಖರ್ಚು ಮಾಡಿದೆ. ನೀರಾವರಿ ಯೋಜನೆ ಸ್ಥಗಿತಗೊಂಡಿದೆ. ಯಾವುದೇ ಕಾಮಗಾರಿ ನಡೆಯುತ್ತಿಲ್ಲ. ಜನಹಿತ ಮತ್ತು ರೈತರ ಹಿತವನ್ನು ಸರಕಾರ ಸಂಪೂರ್ಣ ಮರೆತಿದೆ ಎಂದು ಟೀಕಿಸಿದ್ದಾರೆ.

ರಾಷ್ಟ್ರೀಕೃತ ಬ್ಯಾಂಕ್ ಗಳಿಂದ ರೈತರಿಗೆ ನೋಟಿಸ್

ರಾಷ್ಟ್ರೀಕೃತ ಬ್ಯಾಂಕ್ ಗಳಿಂದ ರೈತರಿಗೆ ನೋಟಿಸ್

ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಸಾಲ ಮನ್ನಾ ಮಾಡುತ್ತೇವೆ ಎಂದು ರಾಜ್ಯ ಸರಕಾರ ಬೊಬ್ಬೆ ಹೊಡೆದಿದೆ. ಆದರೆ ರಾಷ್ಟ್ರೀಕೃತ ಬ್ಯಾಂಕ್ ಗಳಿಂದ ರೈತರಿಗೆ ನೋಟಿಸ್ ಕೊಡಲಾಗುತ್ತಿದೆ. 4 ವರ್ಷದಲ್ಲಿ 4 ಕಂತಿನಲ್ಲಿ ಸಾಲ ತೀರಿಸುತ್ತೇವೆ ಎಂದರೆ ಯಾರು ಕಾಯುತ್ತಾರೆ? ಸಹಕಾರಿ ಕ್ಷೇತ್ರದಲ್ಲಿ ಹಣ ತುಂಬದೆ ದಿವಾಳಿ ಸ್ಥಿತಿಗೆ ಬಂದಿವೆ. ಇಂತಹ ಪರಿಸ್ಥಿತಿ ಇದ್ದರೂ ರಾಜಕೀಯ ದೊಂಬರಾಟ್ ಮಾಡಿಕೊಂಡು, ಸುಳ್ಳು ಭರವಸೆ ಕೊಟ್ಟುಕೊಂಡು ಮುಖ್ಯಮಂತ್ರಿ ಓಡಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಕುಟುಂಬ ಸಮೇತರಾಗಿ ಭೇಟಿ ನೀಡಿದ ಬಿಎಸ್ ವೈ

ಕುಟುಂಬ ಸಮೇತರಾಗಿ ಭೇಟಿ ನೀಡಿದ ಬಿಎಸ್ ವೈ

ತುಮಕೂರಿನ ಸಿದ್ದಗಂಗಾ ಮಠದಲ್ಲಿ ಬಿ.ಎಸ್. ಯಡಿಯೂರಪ್ಪ ಕುಟುಂಬ ಸಮೇತರಾಗಿ ಶಿವಕುಮಾರ ಸ್ವಾಮೀಜಿ ಆಶೀರ್ವಾದ ಪಡೆದರು. ತಮ್ಮ ಪುತ್ರಿಯರಾದ ಪದ್ಮಾವತಿ ಮತ್ತು ಉಮಾದೇವಿ ಅವರೊಂದಿಗೆ ಬಂದ ಬಿ.ಎಸ್.ಯಡಿಯೂರಪ್ಪ ಸ್ವಾಮೀಜಿ ಜತೆಗೆ ಕೆಲ ಕಾಲ ಮಾತುಕತೆ ನಡೆಸಿದರು. ಮಾಜಿ ಸಂಸದ ಜಿ.ಎಸ್. ಬಸವರಾಜ್, ಸಿದ್ದಲಿಂಗಸ್ವಾಮಿ ಮತ್ತಿತರರು ಇದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+