ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿರಾ ಉಪ ಚುನಾವಣೆ; ಪ್ರಚಾರದ ಅಖಾಡಕ್ಕಿಳಿದ ಬಿ. ವೈ. ವಿಜಯೇಂದ್ರ

|
Google Oneindia Kannada News

ತುಮಕೂರು, ಸೆಪ್ಟೆಂಬರ್ 21 : ಕರ್ನಾಟಕದ ರಾಜಕೀಯದಲ್ಲಿ ಸದ್ಯ ಚರ್ಚೆ ನಡೆಯುತ್ತಿರುವುದು ಶಿರಾ ಕ್ಷೇತ್ರದ ಉಪ ಚುನಾವಣೆ ಬಗ್ಗೆ. ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಕ್ಷೇತ್ರದಲ್ಲಿ ಸೋಮವಾರ ಸಂಚಾರ ನಡೆಸುತ್ತಿದ್ದು, ಪಕ್ಷದ ಕಾರ್ಯಕರ್ತರ ಉತ್ಸಾಹವನ್ನು ಹೆಚ್ಚಿಸಿದೆ.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪುತ್ರ ಬಿ. ವೈ. ವಿಜಯೇಂದ್ರ ಸೋಮವಾರ ಶಿರಾ ಕ್ಷೇತ್ರದ ಪ್ರವಾಸದಲ್ಲಿದ್ದಾರೆ. ಶಿರಾ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆ ನಿಮಿತ್ತ ಬೂತ್ ಮಟ್ಟದ ಸಭೆಗಳನ್ನು ನಡೆಸುತ್ತಿದ್ದಾರೆ.

ಶಿರಾ ಉಪಚುನಾವಣೆ: ಮಾಜಿ ಸಚಿವ ಟಿ.ಬಿ. ಜಯಚಂದ್ರ ಕಾಂಗ್ರೆಸ್ ಅಭ್ಯರ್ಥಿಶಿರಾ ಉಪಚುನಾವಣೆ: ಮಾಜಿ ಸಚಿವ ಟಿ.ಬಿ. ಜಯಚಂದ್ರ ಕಾಂಗ್ರೆಸ್ ಅಭ್ಯರ್ಥಿ

ಶಿರಾಗೆ ಆಗಮಿಸಿದ ಬಿ. ವೈ. ವಿಜಯೇಂದ್ರಗೆ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು. ಕೋಟೆ, ಸಂತೆಪೇಟೆಯಲ್ಲಿ ನಡೆದ ಬೂತ್ ಮಟ್ಟದ ಸಭೆಯಲ್ಲಿ ವಿಜಯೇಂದ್ರ ಪಾಲ್ಗೊಂಡರು. ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸುವಂತೆ ಅವರು ಕರೆ ನೀಡಿದರು.

ಶಿರಾ ಉಪ ಚುನಾವಣೆ ಖಚಿತ; ಆರ್. ಆರ್. ನಗರ, ಮಸ್ಕಿಗೆ ಕಾನೂನು ಅಡ್ಡಿ! ಶಿರಾ ಉಪ ಚುನಾವಣೆ ಖಚಿತ; ಆರ್. ಆರ್. ನಗರ, ಮಸ್ಕಿಗೆ ಕಾನೂನು ಅಡ್ಡಿ!

ಶಿರಾ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಗೆದ್ದು ಬಂದಿದ್ದ ಬಿ. ಸತ್ಯನಾರಾಯಣ ಅವರ ನಿಧನದಿಂದ ಉಪ ಚುನಾವಣೆ ಎದುರಾಗಿದೆ. ಮೂರು ಪಕ್ಷಗಳು ಉಪ ಚುನಾವಣೆ ತಯಾರಿ ಆರಂಭಿಸಿವೆ. ಕಾಂಗ್ರೆಸ್ ಅಭ್ಯರ್ಥಿಯನ್ನು ಸಹ ಘೋಷಣೆ ಮಾಡಿದೆ.

 ಶಿರಾ ಎಲೆಕ್ಷನ್; ನಾನು ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದ ಶ್ರೀನಿವಾಸ್ ಶಿರಾ ಎಲೆಕ್ಷನ್; ನಾನು ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದ ಶ್ರೀನಿವಾಸ್

ಬೂತ್ ಮಟ್ಟದ ಸಭೆಯಲ್ಲಿ ಭಾಗಿ

ಬೂತ್ ಮಟ್ಟದ ಸಭೆಯಲ್ಲಿ ಭಾಗಿ

ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ, ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷರಾದ ಬಿ. ಸುರೇಶ್‌ ಗೌಡ ಮುಂತಾದವರು ಶಿರಾ ಕ್ಷೇತ್ರದಲ್ಲಿ ಬೂತ್ ಮಟ್ಟದ ಸಭೆಯಲ್ಲಿ ಪಾಲ್ಗೊಂಡರು. ದೇಶದೆಲ್ಲೆಡೆ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿ ಬೆಂಬಲಿಸುತ್ತಿರುವ ಸಮಯದಲ್ಲಿ ಶಿರಾ ಕ್ಷೇತ್ರದ ಜನತೆ ಬಿಜೆಪಿ ಗೆಲ್ಲಿಸುವ ಮೂಲಕ ಅಭಿವೃದ್ಧಿ ಶಖೆ ಆರಂಭಿಸುವಂತೆ ಕರೆ ನೀಡಿದರು.

ಕಳೆದ ಚುನಾವಣೆ ಫಲಿತಾಂಶ

ಕಳೆದ ಚುನಾವಣೆ ಫಲಿತಾಂಶ

2018ರ ಚುನಾವಣೆಯಲ್ಲಿ ಶಿರಾ ಕ್ಷೇತ್ರದಲ್ಲಿ ಎಸ್. ಆರ್. ಗೌಡ ಬಿಜೆಪಿಯ ಅಭ್ಯರ್ಥಿಯಾಗಿದ್ದರು. ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಪೈಪೋಟಿ ತೀವ್ರವಾಗಿತ್ತು. ಬಿಜೆಪಿ ಅಭ್ಯರ್ಥಿಗಳಿಸಿದ್ದು ಕೇವಲ 16,959 ಮತಗಳನ್ನು ಮಾತ್ರ. ಅಭ್ಯರ್ಥಿ ಚುನಾವಣೆಯಲ್ಲಿ 3ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು. ಈಗ ಬಿಜೆಪಿ ಉಪ ಚುನಾವಣೆ ಪ್ರಚಾರವನ್ನು ಆರಂಭಿಸಿದೆ.

ಟಿ. ಬಿ. ಜಯಚಂದ್ರ ಅಭ್ಯರ್ಥಿ

ಟಿ. ಬಿ. ಜಯಚಂದ್ರ ಅಭ್ಯರ್ಥಿ

ಶಿರಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿ ಘೋಷಣೆ ಮಾಡಿದೆ. ಕಳೆದ ಚುನಾವಣೆಯಲ್ಲಿ 63,973 ಮತಗಳನ್ನು ಪಡೆದು ಸೋತಿದ್ದ ಮಾಜಿ ಸಚಿವ ಟಿ. ಬಿ. ಜಯಚಂದ್ರ ಅವರು ಉಪ ಚುನಾವಣೆ ಅಭ್ಯರ್ಥಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಘೋಷಣೆ ಮಾಡಿದ್ದಾರೆ.

ಜೆಡಿಎಸ್ ಅಭ್ಯರ್ಥಿ ಯಾರು?

ಜೆಡಿಎಸ್ ಅಭ್ಯರ್ಥಿ ಯಾರು?

ಶಿರಾ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಯಾರು? ಎಂಬುದು ಇನ್ನೂ ಖಚಿತವಾಗಿಲ್ಲ. ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಈಗಾಗಲೇ ಕ್ಷೇತ್ರದ ಪಕ್ಷದ ನಾಯಕರ ಜೊತೆ ಸಭೆಯನ್ನು ನಡೆಸಿದ್ದಾರೆ. ಕಳೆದ ಚುನಾವಣೆಯಲ್ಲಿ ಗೆದ್ದ ಕ್ಷೇತ್ರವನ್ನು ಉಪ ಚುನಾವಣೆಯಲ್ಲಿ ಉಳಿಸಿಕೊಳ್ಳಲಾಗುತ್ತದೆಯೇ? ಕಾದು ನೋಡಬೇಕಿದೆ.

ಯಾವಾಗ ಉಪ ಚುನಾವಣೆ?

ಯಾವಾಗ ಉಪ ಚುನಾವಣೆ?

ರಾಜ್ಯ ಚುನಾವಣಾ ಆಯೋಗ ಶಿರಾ ಉಪ ಚುನಾವಣೆ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಈ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೂ ಪತ್ರ ಬರೆದಿದೆ. ಅಕ್ಟೋಬರ್‌ನಲ್ಲಿ ಬಿಹಾರ ವಿಧಾನಸಭೆ ಚುನಾವಣೆ ಘೋಷಣೆಯಾಗಲಿದ್ದು, ಅದರ ಜೊತೆಗೆ ಶಿರಾ ಕ್ಷೇತ್ರದ ಚುನಾವಣೆಯೂ ಘೋಷಣೆಯಾಗುವ ನಿರೀಕ್ಷೆ ಇದೆ.

English summary
All political party's of Karnataka getting ready for the Tumakuru district Sira seat by elections. BJP vice president B. Y. Vijayendra attended the boot level meeting on September 21, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X