ಕೊರಟಗೆರೆ ಬಳಿ ಕಾರು ಮರಕ್ಕೆ ಡಿಕ್ಕಿ: ಇಬ್ಬರ ಸಾವು

ಶುಕ್ರವಾರ ಬೆಳಗಿನ ಜಾವ ಸುಮಾರು 3 ಗಂಟೆಗೆ ನಡೆದಿರುವ ಅಪಘಾತ; ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರ ಸಾವು.

ಕೊರಟಗೆರೆ (ತುಮಕೂರು), ಮಾರ್ಚ್ 25: ಕೊರಟಗೆರೆ ತಾಲೂಕಿನ ಹೊರವಲಯದಲ್ಲಿರುವ ಹೊಸಹಳ್ಳಿಯ ಬಳಿ ಮರಕ್ಕೆ ಕಾರು ಡಿಕ್ಕಿ ಹೊಡೆದು ಅದರಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರನ್ನು ಮಂಜುನಾಥ್ (34), ರವಿಕುಮಾರ್ (22) ಎಂದು ಗುರುತಿಸಿದ್ದಾರೆ. ಶುಕ್ರವಾರ ಬೆಳಗಿನ ಜಾವ ಈ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Car Accident near Koratagere kills two

ಮಂಜುನಾಥ್ ಅವರು, ಕಳೆದ ಐದು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರೆಂದು ಹೇಳಲಾಗಿದೆ. ಈ ಕಾರು ಮಧುಗಿರಿಯಿಂದ ಕೊರಟಗೆರೆ ಕಡೆಗೆ ಹೊರಟಿತ್ತು ಎಂದು ಹೇಳಲಾಗಿದೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+