ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಬೇಕು: ಖರ್ಗೆ ಆಗ್ರಹ
ತುಮಕೂರು, ಜನವರಿ 14: ನಡೆದಾಡುವ ದೇವರೆಂದು ಖ್ಯಾತರಾದ ಶಿವಕುಮಾರಸ್ವಾಮೀಜಿ ಅವರಿಗೆ ಭಾರತ ರತ್ನ ನೀಡಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಆಗ್ರಹಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿರುವ ಅವರು, ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದು ಅವರು ಹೇಳಿದ್ದಾರೆ.
ಶ್ರೀಗಳಿಗೆ ಭಾರತ ರತ್ನ ಕೊಡಬೇಕೆಂಬ ಒತ್ತಾಯದಲ್ಲಿ ಪಕ್ಷಾತೀತವಾಗಿ ಎಲ್ಲ ಸಂಸದರೂ ಪ್ರಯತ್ನಿಸುತ್ತೇವೆ ಎಂದು ಸಹ ಹೇಳಿರುವ ಅವರು, ಶ್ರೀಗಳು ಮಾಡಿರುವ ಅನನ್ಯ ಸೇವೆ ಅವರನ್ನು ಭಾರತ ರತ್ನಕ್ಕೆ ಅರ್ಹರನ್ನಾಗಿಸಿದೆ ಎಂದು ಅವರು ಹೇಳಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ಶ್ರೀಗಳ ಆರೋಗ್ಯ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದರು. ಶ್ರೀಗಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದರು. ಶ್ರೀಗಳ ಅವಶ್ಯಕತೆ ನಮ್ಮ ರಾಜ್ಯಕ್ಕೆ, ರಾಷ್ಟ್ರಕ್ಕೆ ಬಹಳಷ್ಟಿದೆ. ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಅವರು ಹೇಳಿದರು.
ವೈದ್ಯರು ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಶ್ರೀಗಳ ಮೇಲೆ ಅವರು ಪುರ್ಣ ನಿಗಾವಹಿಸಿದ್ದಾರೆ. ವೈದ್ಯರ ಶ್ಸರಮ ಶ್ಲಾಘನೀಯ ಎಂದು ಖರ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.












Click it and Unblock the Notifications