Get Updates
Get notified of breaking news, exclusive insights, and must-see stories!

ಜ.21ರ ದಾಸೋಹ ದಿನದಂದು ಸಿದ್ದಗಂಗಾ ಮಠಕ್ಕೆ ಸಿಎಂ ಬೊಮ್ಮಾಯಿ ಭೇಟಿ

ತುಮಕೂರು, ಜನವರಿ 20: ಸಿದ್ದಗಂಗಾ ಮಠಾಧೀಶರಾಗಿದ್ದ ದಿವಂಗತ ಶಿವಕುಮಾರ ಸ್ವಾಮೀಜಿಯವರ 3ನೇ ವರ್ಷದ ಪುಣ್ಯ ಸ್ಮರಣೆ ಶುಕ್ರವಾರ (ಜ.21) ಮಠದ ಆವರಣದಲ್ಲಿ ನಡೆಯಲಿದೆ.

ಕೋವಿಡ್ ಮಾರ್ಗಸೂಚಿ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮಗಳನ್ನು ನಡೆಸಲು ಮಠದ ಆಡಳಿತ ಮಂಡಳಿ ನಿರ್ಧರಿಸಿದ್ದು, ಸಿದ್ದಗಂಗಾ ಮಠದ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಹಾಗೂ ಮಠದ ದೇವರಾದ ಸಿದ್ದಲಿಂಗೇಶ್ವರ ಸ್ವಾಮಿಗೆ ವಿಶೇಷ ರುದ್ರಾಭಿಷೇಕ ನಡೆಯಲಿದೆ.

ಜ.21ರಂದು ಶುಕ್ರವಾರ ಸಿದ್ದಗಂಗಾ ಮಠಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದು, ಗದ್ದುಗೆಯ ದರ್ಶನ ಪಡೆಯಲಿದ್ದಾರೆ. ನಂತರ ದಾಸೋಹ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

CM Basavaraj Bommai to Visit Siddaganga Mutt on January 21 to celebrate Dasoha Day

ಜ.21 ದಾಸೋಹ ದಿನವೆಂದು ಘೋಷಣೆ
ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಶಿವಕುಮಾರ ಮಹಾಸ್ವಾಮಿಗಳ ಪುಣ್ಯಸ್ಮರಣೆಯ ದಿನವನ್ನು‌ ದಾಸೋಹ ದಿನ ಎಂದು (ಜನವರಿ 21) ಘೋಷಣೆ ಮಾಡಿ ಕರ್ನಾಟಕ ಸರ್ಕಾರ‌ ಆದೇಶ ಹೊರಡಿಸಿತ್ತು.

ಶಿವಕುಮಾರ ಮಹಾಸ್ವಾಮಿಗಳು ಕಾಯಕವೇ ಕೈಲಾಸ ಎಂಬ ತತ್ವದಡಿ 1930ರಲ್ಲಿ ಸಿದ್ದಗಂಗಾ ಮಠದ ಜವಾಬ್ದಾರಿಯನ್ನು ಹೊತ್ತು ಅಂದಿನಿಂದಲೂ ನಿರಂತರವಾಗಿ ಮಠಕ್ಕೆ ಬರುವ ಲಕ್ಷಾಂತರ ಬಡ ಮಕ್ಕಳಿಗೆ ಜಾತಿ-ಧರ್ಮ ಭೇದವಿಲ್ಲದೆ ವಿದ್ಯೆ, ವಸತಿ ಹಾಗೂ ಅನ್ನ ದಾಸೋಹ ನೀಡಿ ತ್ರಿವಿಧ ದಾಸೋಹಿಗಳಾಗಿದ್ದರು.

1960ರ ದಶಕದಲ್ಲಿ ಭಾರತ ದೇಶವೇ ಆಹಾರದ ಕೊರತೆಯನ್ನು ಎದುರಿಸುತ್ತಿದ್ದಾಗ ಶ್ರೀಗಳು ತಾವೇ ಜೋಳಿಗೆ ಹಿಡಿದು ಜನರಿಂದ ದಾನ ಪಡೆದು ಹಸಿವು ನೀಗಿಸಿದರು.

ಶ್ರೀಗಳ ಪರಂಪರೆಯಂತೆ ಇಂದಿಗೂ ಸಾವಿರಾರು ಬಡ ಮಕ್ಕಳಿಗೆ ಹಾಗೂ ಭಕ್ತರಿಗೆ ನಿತ್ಯ ದಾಸೋಹ ಮಾಡಲಾಗುತ್ತಿದೆ. ಶಿವಕುಮಾರ ಶ್ರೀಗಳು ಒಂಬತ್ತು ದಶಕಗಳಿಗೂ ಮೀರಿ ನಿತ್ಯ ದಾಸೋಹಗೈದು ನಾಡಿನ ಇತರೆ ಎಲ್ಲರಿಗೂ ಮಾದರಿಯಾಗಿದ್ದು, ದಾಸೋಹ ಶ್ರೇಷ್ಠರಾಗಿದ್ದರು. ಶಿವಕುಮಾರ ಮಹಾಸ್ವಾಮಿಗಳ ಈ ಕೈಂಕರ್ಯ ಪರಿಗಣನೆಯಲ್ಲಿ 2007ರಲ್ಲಿ ಭಾರತ ಸರ್ಕಾರವು ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿರುತ್ತದೆ.

CM Basavaraj Bommai to Visit Siddaganga Mutt on January 21 to celebrate Dasoha Day

ಶಿವಕುಮಾರ ಮಹಾಸ್ವಾಮಿಗಳ ಸಮಾಜ ಸೇವಾ ಕಾರ್ಯ ಕ್ಷೇತ್ರಗಳಾದ ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತಮ್ಮನ್ನೆ ತಾವು ತೊಡಗಿಸಿಕೊಂಡು ಲಿಂಗೈಕ್ಯರಾಗಿದ್ದು, ಇವರು ನಿತ್ಯಪೂಜ್ಯರು ಹಾಗೂ ಕಾಲಕಾಲಕ್ಕೂ ಅನುಸರಣೀಯವಾಗಿದ್ದು, ಇವರ ಅಭೂತಪೂರ್ವ ಸೇವೆಯನ್ನು ಸ್ಮರಿಸುವ ಸಲುವಾಗಿ, ಶ್ರೀಗಳು ಲಿಂಗೈಕ್ಯರಾದ ದಿನವನ್ನು ಅಂದರೆ ಜನವರಿ 21ರಂದು ಸರ್ಕಾರದ ವತಿಯಿಂದ ದಾಸೋಗ ದಿನವೆಂದು ಆಚರಿಸುವಂತೆ ಆದೇಶ ಹೊರಡಿಸಲಾಗಿದೆ.

ಈ ಬಗ್ಗೆ ಪೂಜ್ಯ ಡಾ. ಶಿವಕುಮಾರ ಮಹಾಸ್ವಾಮಿಗಳ ಭಾವಚಿತ್ರದ ಪ್ರತಿಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಪಡೆದುಕೊಂಡು, ಸದರಿ ದಿನದಂದು ದಾಸೋಹ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಪಟ್ಟ ಇಲಾಖೆಗಳು ಈ ಬಗ್ಗೆ ರೂಪುರೇಷೆಗಳನ್ನು ತಯಾರಿಸಿ ಕಾರ್ಯಕ್ರಮವನ್ನು ಜಾರಿಗೊಳಿಸಲು ಅಗತ್ಯ ಕ್ರಮವಹಿಸುವಂತೆ ಸೂಚಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಪತ್ರದಲ್ಲಿ ತಿಳಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+