ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಿಎಂ ಅನುಪಸ್ಥಿತಿ, ಪಂಚಮುಖಿ ಆಂಜನೇಯ ಮೂರ್ತಿ ಉದ್ಘಾಟಿಸಿದ ಸಿಎಂ

|
Google Oneindia Kannada News

ತುಮಕೂರು, ಏಪ್ರಿಲ್ 10: ''161 ಅಡಿ ಎತ್ತರದ ಆಂಜನೇಯ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆಯಾಗಿರುವುದು ಮುಂದಿನ ದಿನಗಳಲ್ಲಿ ಕನ್ನಡನಾಡಿಗೆ ಒಳ್ಳೆಯ ಕಾಲವಿದೆ ಎನ್ನುವುದರ ಸೂಚನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು. ಇಂದು ಕುಣಿಗಲ್ ತಾಲ್ಲೂಕಿನ ಬಿದನಗೆರೆ ಶ್ರೀಬಸವೇಶ್ವರ ಮಠದ ವತಿಯಿಂದ ನಿರ್ಮಿಸಿರುವ 161 ಅಡಿ ಎತ್ತರದ ಪಂಚಮುಖಿ ಆಂಜನೇಯ ಸ್ವಾಮಿ ಮೂರ್ತಿಯನ್ನು ಉದ್ಘಾಟಿಸಿದ ಸಿಎಂ ಮಾತನಾಡಿದರು.

ಶ್ರೀರಾಮ ನವಮಿಯ ದಿನದಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವರ್ಚುವಲ್ ವೇದಿಕೆ ಮೂಲಕ ಆಂಜನೇಯ ಪ್ರತಿಮೆ ಲೋಕಾರ್ಪಣೆ ಮಾಡುವ ಕಾರ್ಯಕ್ರಮ ನಿಗದಿಯಾಗಿತ್ತು. ಕಾರಣಾಂತರದಿಂದ ಪಿಎಂ ಅನುಪಸ್ಥಿತಿಯಲ್ಲಿ ಸಿಎಂ ಮೂರ್ತಿಯನ್ನು ಲೋಕಾರ್ಪಣೆ ಮಾಡಿದ್ದಾರೆ.

ಹನುಮ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ನೀಡಲು ಸಂಸತ್ ಭವನದಲ್ಲಿ ಪ್ರಧಾನಿ ಮೋದಿಯವರನ್ನು ಶ್ರೀಬಸವೇಶ್ವರ ಮಠದ ಸಮಿತಿಯರು ಭೇಟಿ ಮಾಡಿದ್ದರು. ಆಂಜನೇಯ ಮೂರ್ತಿಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ ಕ್ಷೇತ್ರಕ್ಕೆ ಭೇಟಿ ನೀಡುವುದಾಗಿ ಮೋದಿ ಭರವಸೆ ನೀಡಿದ್ದರು.

CM Bommai Inaugurates 161 Feet Panchamukhi Anjaneya statue At Bidanagere

ರಾಮನವಮಿಯ ಶುಭಸಂದರ್ಭದಲ್ಲಿ ಗುಜರಾತ್‌ನ ಜುನಾಗಢ್‌ ನ ಗಥಿಲಾದಲ್ಲಿರುವ ಉಮಿಯಾ ಮಾತಾ ದೇವಸ್ಥಾನದಲ್ಲಿ, ದೇಗುಲದ 14 ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಡಿಯೋ ಸಮಾವೇಶ ಮೂಲಕ ಭಾಷಣ ಮಾಡಿದ್ದಾರೆ.

"ಉಮಿಯಾ ಮಾ" ದೇವಿಯು 'ಕಡವ ಪಾಟಿದಾರ' ಸಮುದಾಯದವರಿಗೆ ಕುಲದೇವತೆಗಾಗಿ ದೇಗುಲ ನಿರ್ಮಾಣಕ್ಕಾಗಿ ಬೇಡಿಕೆ ಬಂದಾಗ, ಮೋದಿ ಸ್ಪಂದಿಸಿದ್ದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2008 ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಈ ದೇವಾಲಯವನ್ನು ಉದ್ಘಾಟನೆ ಮಾಡಿದ್ದರು.

ಪಂಚಮುಖಿ ಆಂಜನೇಯ ಬಹಳ ವಿಶಿಷ್ಟ

ಶ್ರೀರಾಮನವಮಿಯ ದಿನದಂದು ಪವಿತ್ರ ಕೆಲಸ ಕಾರ್ಯಗಳು ಶ್ರೀಕ್ಷೇತ್ರದಲ್ಲಿ ನಡೆಯುತ್ತಿದೆ. ಇಲ್ಲಿಯ ಅಭಿವೃದ್ಧಿ ಕಾರ್ಯಗಳು ಕೆಲವೇ ವರ್ಷಗಳಲ್ಲಿ ಎಷ್ಟು ದೊಡ್ಡ ಶಕ್ತಿಯಾಗಿ ಕ್ಷೇತ್ರಕ್ಕೆ ಬೆಳೆದಿದೆ ಎಂದು ತಿಳಿಯುತ್ತದೆ. ಇಲ್ಲಿನ ಭಕ್ತರ ಮನಸ್ಸು ಬಹಳ ದೊಡ್ಡದಿದೆ ಎಂದು ತಿಳಿಯುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಪಂಚಮುಖಿ ಆಂಜನೇಯ ಬಹಳ ವಿಶಿಷ್ಟ. ರಾಮಾಯಣದಲ್ಲಿ ವಿಶೇಷವಾದ ಸಂದರ್ಭದಲ್ಲಿ ಹನುಮನ ಅವತಾರವಿದು. ಸಂಪೂರ್ಣವಾಗಿ ಲೋಕಕಲ್ಯಾಣ ಕ್ಕಾಗಿ ಹನುಮ ಈ ಅವತಾರವನ್ನು ಎತ್ತಿದ ಎನ್ನುವುದು ತಿಳಿದ ಸಂಗತಿ. ಕನ್ನಡನಾಡಿನಲ್ಲಿ 161 ಅಡಿ ಎತ್ತರದ ಮೂರ್ತಿ ಸ್ಥಾಪನೆಯಾಗಿರುವುದು ಹನುಮನ ಇಚ್ಛೆ. ಶಿಲ್ಪಿಗಳು ಅದ್ಭುತವಾದ ಕಲಾಕೃತಿ ನಿರ್ಮಿಸಿದ್ದಾರೆ. ಸ್ವಾಮೀಜಿಗಳು ಅದಕ್ಕೆ ಪ್ರಾಣಪ್ರತಿಷ್ಠಾಪನೆ ಮಾಡಿದ್ದಾರೆ ಎಂದರು

Recommended Video

R Ashwin ಔಟ್ ಆಗದಿದ್ದರೂ ವಾಪಸ್ ಕರೆದಿದ್ದೇಕೆ | Oneindia Kannnada

ಈ ಸಂದರ್ಭದಲ್ಲಿ ನಂಜಾವಧೂತ ಸ್ವಾಮೀಜಿ, ಹರಿಹರ ವೀರಶೈವ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ, ಶ್ರೀ ಬಸವೇಶ್ವರ ಮಠದ ಧರ್ಮಾಧಿಕಾರಿ ಡಾ.ಧನಂಜಯ್ಯ ಗುರೂಜಿ , ಸಚಿವ ಅಶ್ವತ್ಥ್ ನಾರಾಯಣ್, ಶಾಸಕರಾದ ಡಾ: ರಂಗನಾಥ್, ರಾಜೂಗೌಡ, ಮಾಜಿ ಶಾಸಕ ಸುರೇಶ್ ಗೌಡ, ಕೃಷ್ಣ ಕುಮಾರ್, ಸಂಸದ ಮುನಿಸ್ವಾಮಿ, ಮೊದಲಾದವರು ಉಪಸ್ಥಿತರಿದ್ದರು. ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ, ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಡಿವೈಎಸ್ಪಿ ಜಿ.ಆರ್. ರಮೇಶ ನೇತೃತ್ವದಲ್ಲಿ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿತ್ತು.

English summary
CM Bommai Inaugurates 161 Feet Panchamukhi Anjaneya statue At Bidanagere, Tumakaru District today (April 10). PM Modi was scheduled to innaugate the staute virtually but couldn't not attend the event.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X