New Cricket Stadium: ರಾಜ್ಯದಲ್ಲಿ ಹೊಸ ಕ್ರಿಕೇಟ್ ಸ್ಟೇಡಿಯಂ ನಿರ್ಮಾಣಕ್ಕೆ ಸರ್ಕಾರ ಗ್ರೀನ್ ಸಿಗ್ನಲ್
ತುಮಕೂರು, ಡಿಸೆಂಬರ್ 02: ಕರ್ನಾಟಕ ರಾಜ್ಯ ಸರ್ಕಾರ ಉದ್ದೇಶದಂತೆ ತುಮಕೂರ ಜಿಲ್ಲೆಯಲ್ಲಿ ಇಂದು ಸೋಮವಾರ (ಡಿಸೆಂಬರ್ 2ರಂದು) ಬಹುಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಹಾಗೂ ಹೆದ್ದಾರಿ ಸಮೀಪವೇ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆ ನೆರವೇರಿಸಿದರು. ಸ್ವತಃ ಸಿಎಂ ಸಿದ್ದರಾಮಯ್ಯ ಅವರು ಬ್ಯಾಟ್ ಹಿಡಿದು ಸಾಂಕೇತಿಕವಾಗಿ ಕ್ರಿಕೆಟ್ ಆಡಿ ಚಾಲನೆ ನೀಡಿದರು.
ಈ ಕುರಿತು ಗೃಹ ಸಚಿವರ ಜಿ.ಪರಮೇಶ್ವರ ಅವರು ಸೋಮವಾರ ಅಧಿಕೃತ ಮಾಹಿತಿ ನೀಡಿದ್ದಾರೆ. ಗೃಹ ಸಚಿವರ ತವರು ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಶುರುವಾಗಿದೆ. ಈ ಸಂಬಂಧ ಸರ್ಕಾರವು ಬರೋಬ್ಬರಿ 1259 ಕೋಟಿ ರೂ. ಮೊತ್ತದ ಕಾಮಗಾರಿಗಳ ಉದ್ಘಾಟನೆಗೆ ಬೃಹತ್ ಕಾರ್ಯಕ್ರಮ ನಡೆಯಿತು.

ಹೊಸ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ ಬಳಿಕ ಮುಖ್ಯಮಂತ್ರಿಗಳು ಹಾಗೂ ಸಚಿವ ಡಾ. ಜಿ.ಪರಮೇಶ್ವರ ಅವರು ಕ್ರಿಕೆಟ್ ಸ್ಡೇಟಿಯಂ ಭೂಮಿಯು ಮಂಜೂರಾಗಿರುವ ಆದೇಶ ಪತ್ರವನ್ನು ಕೆಎಸ್‌ಸಿಎ ಅಧ್ಯಕ್ಷ ರಘುರಾಮ್ ಭಟ್ ಅವರಿಗೆ ಹಸ್ತಾಂತರಿಸಿದರು.
ಈ ವೇಳೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಮಾತನಾಡಿ, ಭಾರತೀಯ ಕ್ರಿಕೆಟ್ ಮಂಡಳಿಯವರಿಗೆ ಅಭಿನಂದನೆಗಳನ್ನು ತಿಳಿಸಿದರು.
ಸುಮಾರು ವರ್ಷಗಳಿಂದ ಕನಸಾಗಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ ಜೊತೆಗೆ ಅಂತಾರಾಷ್ಟ್ರೀಯ ಕ್ರಿಕೆಟ್ ತರಬೇತಿಗೆ ಅಡಿಗಲ್ಲು ಹಾಕಲಾಗಿದೆ. KSCA ಎರಡು ವರ್ಷದಲ್ಲಿ ಸ್ಟೇಡಿಯಂ ನಿರ್ಮಾಣದ ಕಾಮಗಾರಿಯನ್ನು ಪೂರ್ಣಗೊಳ್ಳಲಿದೆ ಎಂದು ಅವರು ಭರವಸೆ ನೀಡಿದರು.
ಜಿಲ್ಲೆಯ ವಸಂತನರಸಾಪುರದಲ್ಲಿ 20 ಸಾವಿರ ಎಕರೆ ಭೂಮಿಯನ್ನು ಕೈಗಾರಿಕಾ ಪ್ರದೇಶಕ್ಕೆ ಕೊಡಲಾಗಿದೆ. ಏಷ್ಯ ಖಂಡದಲ್ಲಿಯೇ ಅತ್ಯಧಿಕ ಬೃಹತ್ ಕೈಗಾರಿಕಾ ಪ್ರದೇಶ ನಿರ್ಮಾಣ ಮಾಡಲು ಸರ್ಕಾರ ಗುರಿ ಇಟ್ಟುಕೊಂಡಿದೆ. ಇದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಎಲ್ಲ ರೀತಿಯ ಸಹಕಾರ ಕೊಟ್ಟಿದ್ದಾರೆ. ಫುಡ್ ಪಾರ್ಕಿಂಗ್ ಆರಂಭವಾಗಿದ್ದು, ಜಪಾನೀಸ್ ಟೌಪ್‌ಶಿಪ್ ನಿರ್ಮಾಣಕ್ಕೆ 500 ಎಕರೆ ಹಸ್ತಾಂತರಿಸಲಿದೆ ಅವರು ವಿವರಿಸಿದರು.
ತುಮಕೂರು ಸುತ್ತಮುತ್ತಲಿನ ಜನರು ಕೈಗಾರಿಕಾ ಪ್ರದೇಶಕ್ಕಾಗಿ ಭೂಮಿಯನ್ನು ಕಳೆದುಕೊಂಡಿದ್ದಾರೆ. ಅವರಿಗೆ ಉದ್ಯೋಗ ಸಿಗುವಂತಾಗಬೇಕು. ಸ್ಥಳೀಯರಿಗೆ ಹೆಚ್ಚಿನ ಒತ್ತು ನೀಡಬೇಕು. ತುಮಕೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಎಲ್ಲ ವಿಧಾನಸಭಾ ಕ್ಷೇತ್ರಗಳಿಗು ಅನುದಾನ ದೊರೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿಕೊಂಡಿದರು.
ಈ ಬೃಹತ್ ಕಾರ್ಯಕ್ರಮದಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕೆ.ಎನ್.ರಾಜಣ್ಣ, ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಾ. ಕೆ.ಗೋವಿಂದರಾಜು, ಶಾಸಕರಾದ ಬಿ.ಸುರೇಶ್‌ಗೌಡ, ಜ್ಯೋತಿಗಣೇಶ್, ಸುರೇಶ್, ಶ್ರೀನಿವಾಸ್, ವೆಂಕಟೇಶ್, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಆರ್.ರಾಜೇಂದ್ರ ಮತ್ತಿತರರು ಅಭಿವೃದ್ಧಿ ಕಾರ್ಯಕಗಳ ಅಡಿಗಲ್ಲು ಸ್ಥಾಪನೆಗೆ ಸಾಕ್ಷಿಯಾದರು.












Click it and Unblock the Notifications