'ಬಿಜೆಪಿ, ಕಾಂಗ್ರೆಸ್ಸಿಗರಿಗೆ ರಾಜ್ಯದ ಜನರನ್ನು ಯಾಮಾರಿಸುತ್ತೇವೆ ಎನ್ನವ ಭ್ರಮೆ'

ತುಮಕೂರು, ಏಪ್ರಿಲ್ 27: "ರಾಜ್ಯದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ಧರ್ಮಗಳ ನಡುವೆ ಬೆಂಕಿ ಹಚ್ಚಿ ಚುನಾವಣೆಯಲ್ಲಿ ಮತ ಪಡೆಯುತ್ತೇವೆ, ರಾಜ್ಯದ ಜನರನ್ನು ಯಾಮಾರಿಸುತ್ತೇವೆ ಎಂಬ ಭ್ರಮೆಯಲ್ಲಿದ್ದರೆ ಇದು ಸುಳ್ಳಾಗುವ ಸಮಯ ದೂರ ಇಲ್ಲ" ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

"ಜಾತಿ ಧರ್ಮದ ಲೆಕ್ಕಾಚಾರದ ಮೇಲೆ ರಾಜಕೀಯ ಮಾಡುವ ಕಾಂಗ್ರೆಸ್ ಹಿಜಾಬ್ ವಿಚಾರದಲ್ಲಿ ಯಾವ ಹೇಳಿಕೆಗಳನ್ನು ನೀಡಲಿಲ್ಲ. ಇನ್ನೂ ರಾಜ್ಯ ಸರ್ಕಾರ ಜನರನ್ನು ಎತ್ತಿಕಟ್ಟಿ ಮೌನವಾಗಿ ಕುಳಿತಿದೆ" ಎಂದು ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಜೆಡಿಎಸ್ ಪಕ್ಷದ ಜನತಾ ಜಲಧಾರೆ ರಥಯಾತ್ರೆ ಇಂದು ತುಮಕೂರು ತಾಲೂಕಿನ ಗುಬ್ಬಿಯಲ್ಲಿ ಸಂಚರಿಸಿತು. ರಥಯಾತ್ರೆಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಭಾಗಿಯಾಗಿದ್ದರು. ಶ್ರೀ ಚನ್ನಬಸವೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, "ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಹಲವು ವರ್ಷಗಳಿಂದ ಅವಕಾಶ ನೀಡುತ್ತಿದ್ದೀರಾ. ಆದರೆ, ಇವರು ಕೊಟ್ಟ ಯಾವ ಆಶ್ವಾಸನೆಗಳನ್ನು ಈಡೇರಿಸಲಿಲ್ಲ. ಕೇವಲ ಸುಳ್ಳಿನ ಆಶ್ವಾಸನೆ ನೀಡುತ್ತಿದ್ದಾರೆ. ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರವಾಗಿದೆ. ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣ ಮಾಡಿದ್ದಾರೆ" ಎಂದು ನಿಖಿಲ್ ಹೇಳಿದ್ದಾರೆ.

 ಎರಡೂ ರಾಷ್ಟ್ರೀಯ ಪಕ್ಷಗಳು ನಡೆದುಕೊಳ್ಳುತ್ತಿವೆ

ಎರಡೂ ರಾಷ್ಟ್ರೀಯ ಪಕ್ಷಗಳು ನಡೆದುಕೊಳ್ಳುತ್ತಿವೆ

"ಕಾಂಗ್ರೆಸ್ ನವರು ಕಡಿಮೆಯೇನಲ್ಲ ಸಾವಿನ ಮೆನೆಯಲ್ಲಿ ರಾಜಕೀಯ ಮಾಡಲು ಹೊರಟಿದ್ದಾರೆ. ಸಂತೋಷ್ ಅವರ ಮನೆಗೆ ಸಾಲು ಸಾಲು ಕಾಂಗ್ರೆಸ್ ನಾಯಕರು ಹೋಗಿ ಮಾಧ್ಯಮಗಳ ಮುಂದೆ ಫೋಸ್ ನೀಡಿದರು. ಇವರು ಪರ್ಸಂಟೇಜ್ ಪಡೆದಿಲ್ಲವೇ, ರಾಜ್ಯದ ಸಂಪತ್ತನ್ನು ಲೂಟಿ ಮಾಡಿಲ್ಲವೇ? ಕಾಂಗ್ರೆಸ್ ಪಕ್ಷದವರು ಕುಳಿತು ಆತ್ಮವಾಲೋಕನ ಮಾಡಿಕೊಳ್ಳಬೇಕು. ಈ ರೀತಿ ಎರಡೂ ರಾಷ್ಟ್ರೀಯ ಪಕ್ಷಗಳು ನಡೆದುಕೊಳ್ಳುತ್ತಿವೆ" ಎಂದು ನಿಖಿಲ್ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

 ವಿಶ್ವ ಹಿಂದೂ ಪರಿಷತ್ತು, ಭಜರಂಗದಳವನ್ನು ಬಳಸಿಕೊಂಡು ಜನರ ಮದ್ಯೆ ಬೆಂಕಿ

ವಿಶ್ವ ಹಿಂದೂ ಪರಿಷತ್ತು, ಭಜರಂಗದಳವನ್ನು ಬಳಸಿಕೊಂಡು ಜನರ ಮದ್ಯೆ ಬೆಂಕಿ

"ರಾಜ್ಯದಲ್ಲಿ ಕಳೆದ ಒಂದು ತಿಂಗಳಿನಿಂದಲೂ ಧರ್ಮಧರ್ಮಗಳ ನಡುವೆ ಬೆಂಕಿ ಹಚ್ಚಿಕೊಂಡು ಸರ್ಕಾರ ಆಡಳಿತ ನಡೆಸುತ್ತಿದೆ. ಜನರನ್ನು ಎತ್ತಿಕಟ್ಟಿ ರಾಜ್ಯ ಬಿಜೆಪಿ ಸರ್ಕಾರ ಸದ್ಯ ಮೌನವಾಗಿ ಕುಳಿತಿದೆ, ಸರ್ಕಾರದ ಯಾವುದೇ ಆಕ್ಷೇಪಣೆ ಇಲ್ಲ. ವಿಶ್ವ ಹಿಂದೂ ಪರಿಷತ್ತು, ಭಜರಂಗದಳವನ್ನು ಬಳಸಿಕೊಂಡು ಜನರ ಮದ್ಯೆ ಬೆಂಕಿ ಹಚ್ಚಿ ಕೂತು ತಮಾಷೆ ನೋಡುತ್ತಿದ್ದಾರೆ. ಸರ್ವ ಜನಾಂಗದ ಶಾಂತಿಯ ತೋಟವನ್ನು ಉಳಿಸುವ ಕೆಲಸ ಆಗಬೇಕಿದೆ" ಎಂದು ಈ ಸಂದರ್ಭದಲ್ಲಿ ಅಭಿಪ್ರಾಯ ಪಟ್ಟರು.

 ನಾವೆಲ್ಲರು ಮೊದಲು ಭಾರತೀಯರು ನಾವೆಲ್ಲ ಅಣ್ಣ-ತಮ್ಮಂದಿರಂತೆ

ನಾವೆಲ್ಲರು ಮೊದಲು ಭಾರತೀಯರು ನಾವೆಲ್ಲ ಅಣ್ಣ-ತಮ್ಮಂದಿರಂತೆ

"ನಾವೆಲ್ಲರು ಮೊದಲು ಭಾರತೀಯರು ನಾವೆಲ್ಲ ಅಣ್ಣ-ತಮ್ಮಂದಿರಂತೆ ಕೇವಲ ರಾಜಕೀಯ ಲಾಭಕ್ಕಾಗಿ ನಮ್ಮ ನಡುವಿನ ಸಾಮರಸ್ಯ ಹಾಳು ಮಾಡುತ್ತಿದ್ದಾರೆ. ನಾವು ಸರಿಯಾದ ತೀರ್ಮಾನ ಮಾಡಬೇಕು. ಪ್ರಾದೇಶಿಕ ಪಕ್ಷವನ್ನು ಉಳಿಸುವುದು ಅತ್ಯವಶ್ಯಕ. ರೈತರಿಗಾಗಿ, ಶೋಷಿತರಿಗಾಗಿ, ಬಡವರಿಗಾಗಿ, ಯುವಕರಿಗಾಗಿ ಈ ಪಕ್ಷ ಉಳಿಯಬೇಕಿದೆ. ಗುಬ್ಬಿ ವಿಧಾನಸಭಾ ಕ್ಷೇತ್ರದ ಮುಂದಿನ ಅಭ್ಯರ್ಥಿ ನಾಗರಾಜ್ ಅವರು ಎಂದು ಈಗಾಗಲೇ ನಿರ್ಧಾರ ಆಗಿದೆ" ಎಂದು ನಿಖಿಲ್ ಹೇಳಿದ್ದಾರೆ.

 ನಾವು ಇಲ್ಲಿನ ಶಾಸಕರಿಗೆ ಏನು ಅನ್ಯಾಯ ಮಾಡಿಲ್ಲ

ನಾವು ಇಲ್ಲಿನ ಶಾಸಕರಿಗೆ ಏನು ಅನ್ಯಾಯ ಮಾಡಿಲ್ಲ

"ನಾವು ಇಲ್ಲಿನ ಶಾಸಕರಿಗೆ ಏನು ಅನ್ಯಾಯ ಮಾಡಿಲ್ಲ. ನಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ಈ ಕ್ಷೇತ್ರದ ಶಾಸಕರನ್ನು ಮಂತ್ರಿ ಮಾಡಿದ್ದೆವು. ಸ್ವಲ್ಪನಾದರೂ ತಾಯಿ ಹೃದಯ ಇದ್ದರೆ ನಿಮ್ಮನ್ನು ಬೆಳೆಸಿದ ಪಕ್ಷಕ್ಕೆ ಬೆನ್ನಿಗೆ ಚೂರಿ ಚುಚ್ಚುವ ಕೆಲಸ ಮಾಡಿದ್ದೀರಿ. ನಾವೆಲ್ಲಾ ಅವರನ್ನು ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡಿದ್ದೆವು. ಯಾವ ಪಕ್ಷದಲ್ಲಿದ್ದೇನೆ ಎಂದು ಈ ಕ್ಷೇತ್ರದ ಶಾಸಕರಿಗೆ ಗೊತ್ತಿಲ್ಲ. ಇದು ಒಂದು ರೀತಿ ಬ್ಲಾಕ್‌ಮೇಲೆ ರಾಜಕಾರಣ ಆಗಿದೆ" ಎಂದು ನಿಖಿಲ್ ಕುಮಾರಸ್ವಾಮಿ ಬೇಸರ ವ್ಯಕ್ತ ಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+