ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುದ್ದಹನುಮೇಗೌಡರಿಗೆ ಸೂಕ್ತ ಸ್ಥಾನ-ಮಾನ: ದಿನೇಶ್ ಗುಂಡೂರಾವ್

|
Google Oneindia Kannada News

ತುಮಕೂರು, ಮಾರ್ಚ್ 29: ಮುದ್ದಹನುಮೇಗೌಡರಿಗೆ ಅನ್ಯಾಯವಾಗಿದೆ ಎಂಬುದರಲ್ಲಿ ಅನುಮಾನವಿಲ್ಲ, ಆದರೆ ಹೈಕಮಾಂಡ್ ನಿರ್ಧಾರ ತೆಗೆದುಕೊಂಡಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಇಂದು ದಿನೇಶ್ ಗುಂಡೂರಾವ್ ಮತ್ತು ಪರಮೇಶ್ವರ್ ಅವರು ಮುದ್ದಹನುಮೇಗೌಡ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ನಾಮಪತ್ರ ವಾಪಸ್ ಪಡೆದ ಮುದ್ದಹನುಮೇಗೌಡ, ದೇವೇಗೌಡರ ಹಾದಿ ಸುಗಮ ನಾಮಪತ್ರ ವಾಪಸ್ ಪಡೆದ ಮುದ್ದಹನುಮೇಗೌಡ, ದೇವೇಗೌಡರ ಹಾದಿ ಸುಗಮ

ಮುದ್ದಹನುಮೇಗೌಡ ಅವರು, ದೇಶದಲ್ಲಿ ಮೋದಿ ಅಲೆ ಇದ್ದಾಗ ಸಹ ಭಾರಿ ಅಂತರದಿಂದ ಗೆದ್ದು ಬಂದಿದ್ದರು, ಅವರು ಕೆಲಸ ಮಾಡಿ ಜನಮನ್ನಣೆ ಗಳಿಸಿದ ಗೌರವಾನ್ವಿತ ಸಂಸದರಾಗಿದ್ದರು, ಅವರಿಗೆ ಟಿಕೆಟ್ ಸಿಗದೇ ಇರುವುದು ನಮಗೂ ಬೇಸರವಾಗಿದೆ ಎಂದು ಗುಂಡೂರಾವ್ ಹೇಳಿದರು.

Congress will give respect to Muddahanume Gowda: Dinesh Gundu Rao

ಮುದ್ದಹನುಮೇಗೌಡ ಅವರನ್ನು ಗೌರವಯುತವಾಗಿ ಪಕ್ಷವು ನಡೆಸಿಕೊಳ್ಳುತ್ತದೆ, ಅವರಿಗೆ ಸೂಕ್ತ ಸ್ಥಾನ-ಮಾನ ನೀಡಲಾಗುತ್ತದೆ. ಈ ಬಗ್ಗೆ ರಾಹುಲ್ ಗಾಂಧಿ ಅವರು ಸಹ ಮುದ್ದಹನುಮೇಗೌಡ ಅವರ ಬಳಿ ಮಾತನಾಡಿದ್ದಾರೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಸಿದ್ದರಾಮಯ್ಯ ಸಂಧಾನ ಫಲ: ಮುದ್ದಹನುಮೇಗೌಡ ನಾಮಪತ್ರ ವಾಪಸ್‌ಗೆ ಒಪ್ಪಿಗೆ ?ಸಿದ್ದರಾಮಯ್ಯ ಸಂಧಾನ ಫಲ: ಮುದ್ದಹನುಮೇಗೌಡ ನಾಮಪತ್ರ ವಾಪಸ್‌ಗೆ ಒಪ್ಪಿಗೆ ?

ಡಿಸಿಎಂ ಪರಮೇಶ್ವರ್ ಮಾತನಾಡಿ, ತುಮಕೂರು ಬಿಟ್ಟುಕೊಟ್ಟಿದ್ದು ಅನ್ಯಾಯವಾಗಿದೆ, ಆದರೆ ಹೈಕಮಾಂಡ್ ಈಗಾಗಲೇ ನಿರ್ಧಾರ ತೆಗೆದುಕೊಂಡಾಗಿದೆ. ಮುದ್ದಹನುಮೇಗೌಡ ಅವರು ಕಾರ್ಯಕರ್ತರ ಒತ್ತಾಯಕ್ಕೆ ಮಣಿದು ನಾಮಪತ್ರ ಸಲ್ಲಿಸಿದ್ದಾರೆ ಎಂದು ಹೇಳಿದರು.

ತುಮಕೂರು ಕಾಂಗ್ರೆಸ್ ಬಂಡಾಯ ಶಮನ : ರಾಜಣ್ಣ ನಾಮಪತ್ರ ವಾಪಸ್!ತುಮಕೂರು ಕಾಂಗ್ರೆಸ್ ಬಂಡಾಯ ಶಮನ : ರಾಜಣ್ಣ ನಾಮಪತ್ರ ವಾಪಸ್!

ನಾಮಪತ್ರ ಹಿಂಪಡೆಯುವಂತೆ ನಾವು ಮನವಿ ಮಾಡಿದ್ದೇವೆ, ಅದಕ್ಕೆ ಸಕಾರಾತ್ಮಕ್ಕೆ ಅವರು ಪ್ರತಿಕ್ರಿಯಿಸುತ್ತಾರೆ, ಈ ಬಗ್ಗೆ ಮುದ್ದಹನುಮೇಗೌಡ ಅವರೇ ಪ್ರತಿಕ್ರಿಯಿಸುತ್ತಾರೆ ಎಂದು ಅವರು ಹೇಳಿದರು.

ಸಂಧಾನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುದ್ದಹನೇಗೌಡ ಅವರು, ಕಾಂಗ್ರೆಸ್‌ಗೆ ಮುಜುಗರ ತರುವುದಿಲ್ಲ, ನನ್ನ ನಿರ್ಧಾರವನ್ನು ಕಾರ್ಯಕರ್ತರೊಂದಿಗೆ ಮಾತನಾಡಿದ ಬಳಿಕ ತಿಳಿಸುತ್ತೇನೆ ಎಂದು ಹೇಳಿದರು.

English summary
Congress will give respect to Muddahanume Gowda said KPCC president Dinesh Gundu Rao, KPCC presidnet and DCM Parameshwar met Muddahanumegowda and convince him to took back nomination filled against Deve Gowda.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X