ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸ್ವಾತಂತ್ರ್ಯಕ್ಕಾಗಿ ಆರ್‌ಎಸ್‌ಎಸ್‌ ಬೆವರು ಸುರಿಸಿಲ್ಲ: ಪರಮೇಶ್ವರ್ ಕಟು ಟೀಕೆ

By Nayana
|
Google Oneindia Kannada News

ತುಮಕೂರು, ಆಗಸ್ಟ್ 9: ಸ್ವಾತಂತ್ರ್ಯ ಹೋರಾಟ ಹಾಗೂ ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಸಣ್ಣ ಬೆವರೂ ಹರಿಸದ ಆರ್‌ಎಸ್‌ಎಸ್‌ಗೆ ಕಾಂಗ್ರೆಸ್‌ ಬಗ್ಗೆ ಮಾತನಾಡುವ ಹಕ್ಕಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ತುಮಕೂರಿನ ಕಾಂಗ್ರೆಸ್‌ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕ್ವಿಟ್‌ ಇಂಡಿಯಾ ಚಳುವಳಿಯ 76ನೇ ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು.

ಕರುಣಾನಿಧಿ ಸದಾ ಯುಪಿಎ ಸರ್ಕಾರದ ಸಂಗಾತಿ: ಪರಮೇಶ್ವರ್ ಬಣ್ಣನೆಕರುಣಾನಿಧಿ ಸದಾ ಯುಪಿಎ ಸರ್ಕಾರದ ಸಂಗಾತಿ: ಪರಮೇಶ್ವರ್ ಬಣ್ಣನೆ

ಸ್ವಾತಂತ್ರ್ಯ ಹೋರಾಟದಲ್ಲಾಗಲಿ ಅಥವಾ ಕ್ವಿಟ್‌ ಇಂಡಿಯಾ ಚಳುವಳಿಯಲ್ಲಾಗಲಿ ಆರ್‌ಎಸ್‌ಎಸ್‌ ಭಾಗವಹಿಸಿರಲಿಲ್ಲ. ಸ್ವಾತಂತ್ರ್ಯ ಪಡೆಯಲು ಕಾಂಗ್ರೆಸ್‌ ಪಕ್ಷದ ನಾಯಕರು ಹೋರಾಡಿದ್ದಾರೆ. ನಮ್ಮ ಪಕ್ಷದ ಬಗ್ಗೆ ಮಾತನಾಡುವ ಹಕ್ಕು ಆರ್‌ಎಸ್‌ಎಸ್‌ಗಾಗಲಿ ಬಿಜೆಪಿಗಾಗಲಿ ಇಲ್ಲ ಎಂದು ವಾಗ್ದಾಳಿ ನಡೆಸಿದರು.

DCM accuses RSS was anti freedom movement

1942ರಲ್ಲಿ ಅಖಿಲ ಭಾರತ ಕಾಂಗ್ರೆಸ್‌ ಅಧಿವೇಶ ನಡೆಸಿ, ಬ್ರಿಟಿಷರನ್ನು ದೇಶಬಿಟ್ಟು ತೊಲಗಿ ಎಂಬ ಸಂದೇಶದೊಂದಿಗೆ ದೊಡ್ಡ ಮಟ್ಟದ ಹೋರಾಟ ನಡೆಸಿತು. ಇದರ ತೀವ್ರತೆ ಹೆಚ್ಚಿಸಲು ಮಾಡು ಇಲ್ಲವೇ ಮಡಿ ಎಂಬ ಘೋಷಣೆಯನ್ನು ಮಹಾತ್ಮ ಗಾಂಧೀಜಿ ಅವರು ಹೊರಡಿಸಿದರು.

ತಮ್ಮ‌ ಬಿಗಿ ಸಡಿಲವಾಗುತ್ತಿರುವುದನ್ನು ಅರಿತ ಬ್ರಿಟಿಷರು ಸ್ವಾತಂತ್ರ್ಯ ಕೊಡಲು ಒಪ್ಪಿದರು. ಈ ಹೋರಾಟದಲ್ಲಿ ಕಾಂಗ್ರೆಸ್‌ನ ಹಲವು ನಾಯಕರು ಪ್ರಾಣ ತ್ಯಾಗ ಮಾಡಿದ್ದಾರೆ. ಅವರನ್ನು ಸ್ಮರಿಸಿ ನಮನ ಸಲ್ಲಿಸೋಣ ಎಂದರು.
ಪ್ರಸ್ತುತ ಸ್ಥಳೀಯ ಚುನಾವಣೆ ಘೋಷಣೆಯಾಗಿದೆ. ಈ ಚುನಾವಣೆಯಲ್ಲಿ ಯಾವ ಪಕ್ಷದೊಂದಿಗೂ ಹೊಂದಾಣಿಕೆ ಮಾಡಿಕೊಳ್ಳದೇ ಪಕ್ಷದ ಅಡಿಯಲ್ಲಿ ಚುನಾವಣೆ ಎದುರಿಸಲಿದ್ದೇವೆ‌ ಎಂದು ಹೇಳಿದರು.

ಲೋಕಸಭೆ ಚುನಾವಣೆ ಕೂಡ ಸಮೀಪಿಸುತ್ತಿದ್ದು, ಈ ಚುನಾವಣೆ ಸವಾಲಾಗಿದೆ. ಈಗಿಲಿಂದಲೇ ಎಲ್ಲ ರೀತಿ ತಯಾರಿ ನಡೆಸಿ, ಗೆಲ್ಲಲೇ ಬೇಕು. ನಮ್ಮ ವ್ಯಾಪ್ತಿಗೆ ಬರುವ ಕ್ಷೇತ್ರದಲ್ಲಿ ಮೂರು ಸಂಸದರು ಕಾಂಗ್ರೆಸ್‌ ನವರೇ ಇದ್ದಾರೆ. ಅವರನ್ನು ಮತ್ತೆ ಗೆಲ್ಲಿಸಿಕೊಳ್ಳಲೇ ಬೇಕು. ಎಲ್ಲ ಮುಖಂಡರು , ಕಾರ್ಯಕರ್ತರು ಚುರುಕಾಗಿ ತಯಾರಿ ನಡೆಸಿ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಟಿ.ಬಿ. ಜಯಚಂದ್ರ, ಸಂಸದ ಮುದ್ದ ಹನುಮೇಗೌಡ , ವೆಂಕಟ ರಮಣಪ್ಪ ಇದ್ದರು.

English summary
Deputy chief minister Dr. G. Parameshwar has slammed since Rashtriya Swayam Sevak sangh was anti freedom movement, BJP couldn't have morality to criticize Congress party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X