ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡ್ರಗ್ಸ್ ಮುಕ್ತ ತುಮಕೂರು ವಿವಿ: ಡಿಸಿಎಂ ಕಟ್ಟುನಿಟ್ಟಿನ ಸೂಚನೆ

|
Google Oneindia Kannada News

ತುಮಕೂರು, ಸೆಪ್ಟೆಂಬರ್ 20: ರಾಜ್ಯದಲ್ಲಿ ಡ್ರಗ್ಸ್ ನಿಯಂತ್ರಣಕ್ಕೆ ಕಠಿಣ ಕ್ರಮ ತೆಗೆದುಕೊಂಡಿದ್ದು, ತುಮಕೂರಿನ ವಿಶ್ವವಿದ್ಯಾಲಯ ಕೂಡ ಮಾದಕ ದ್ರವ್ಯ ಮುಕ್ತ ವಿಶ್ವವಿದ್ಯಾಲಯ ಎಂದು ಘೋಷಿಸಿಕೊಳ್ಳುವತ್ತ ಮುಂದಾಗಲಿ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದರು.

ತುಮಕೂರು ವಿಶ್ವವಿದ್ಯಾಲಯದಿಂದ ಸ್ಥಾಪಿಸಿರುವ ಸಾಂಸ್ಕೃತಿಕ ನಾಯಕ ಜುಂಗಪ್ಪ, ಜ್ಞಾನಪೀಠ ಪುರಸ್ಕೃತ ಕುವೆಂಪು, ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಹಾಗೂ ನೀರಾವರಿ ತಜ್ಞ ಜಿ. ಪರಮಶಿವಯ್ಯ ಅವರ ಪೀಠಗಳನ್ನು ಉದ್ಘಾಟಿಸಿ ಮಾತನಾಡಿದರು. ಡ್ರಗ್ಸ್ ಹಾವಳಿಯಿಂದ ವಿದ್ಯಾರ್ಥಿಗಳ ಜೀವನ ಹಾಗೂ ಇಡೀ ಕಾಲೇಜಿಗೆ ಕೆಟ್ಟ ಹೆಸರು ಬರುತ್ತಿದೆ. ಹೀಗಾಗಿ ನಿಯಂತ್ರಣಕ್ಕೆ ಕಠಿಣ ನಿಲುವು ತೆಗೆದುಕೊಂಡಿದ್ದೇವೆ ಎಂದರು.

ಸ್ಯಾರಿಡಾನ್ ಹಾಗೂ ಮತ್ತೆರಡು ಡ್ರಗ್ಸ್ ಮೇಲಿನ ನಿಷೇಧ ತೆರವು ಸ್ಯಾರಿಡಾನ್ ಹಾಗೂ ಮತ್ತೆರಡು ಡ್ರಗ್ಸ್ ಮೇಲಿನ ನಿಷೇಧ ತೆರವು

ನಾನು ಓದಿರುವ ಕಾಲೇಜು ಇಂದು ವಿಶ್ವವಿದ್ಯಾಲಯ ಆಗಿದೆ. ಇದರ ನೂತನ ಕ್ಯಾಂಪಸ್ ನಿರ್ಮಾಣವಾಗುತ್ತಿದ್ದು ಶೀಘ್ರವೇ ತೆರುವಂತೆ ಸೂಚಿಸಿದರು. ನಾನು ಉನ್ನತ ಶಿಕ್ಷಣ ಸಚಿವರಾಗಿದ್ದ ಸಂದರ್ಭದಲ್ಲಿ ತುಮಕೂರು ಜಿಲ್ಲೆಗೆ ಪ್ರತ್ಯೆಕ ವಿಶ್ವವಿದ್ಯಾಲಯ ತೆರೆದೆ. ಆದರೆ, ಈ 15ವರ್ಷಗಳಿಂದ ವಿಶ್ವವಿದ್ಯಾಲಯ ಸೊರಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

DCM insists Tumkur varsity should narcotic drugs free campus

ವಿಶ್ವವಿದ್ಯಾಲಯ ಸೈಂಟಿಫಿಕ್ ಸೆಂಟರ್ ಆಗಬೇಕು ಎಂಬ ಕಲ್ಪನೆ ಇತ್ತು. ಅಂತಾರಾಷ್ಟ್ರೀಯ ಮಟ್ಟದ ಆಧುನಿಕ ಶಿಕ್ಷಣ ಸಿಗಬೇಕು ಎಂಬ ಆಲೋಚನೆಯಾಗಿತ್ತು. ಇದೇ ಹಾದಿಯಲ್ಲಿ ತುಮಕೂರು ವಿಶ್ವವಿದ್ಯಾಲಯ ನಾಲ್ಕು ಪೀಠ ತೆರೆದು ಮತ್ತೊಂದು ಹೆಜ್ಜೆ ಇಟ್ಟಿದೆ. ಜುಂಜಪ್ಪ ಅವರು ನಮ್ಮ ಜಿಲ್ಲೆಯವರು. ಅವರ ಮಾತುಗಳ ಮೂಲಕ ಅನೇಕ ಸಂದೇಶ ನೀಡಿದ್ದಾರೆ. ಅವರ ಪೀಠ ಸ್ಥಾಪನೆ ಶ್ಲಾಘನೀಯ.

ಮಾದಕ ದ್ರವ್ಯ ಮಾರಾಟ ಮಾಡಿದರೆ ಹುಷಾರ್‌, ಗೂಂಡಾ ಕಾಯ್ದೆ ಹಾಕ್ತಾರೆ ಮಾದಕ ದ್ರವ್ಯ ಮಾರಾಟ ಮಾಡಿದರೆ ಹುಷಾರ್‌, ಗೂಂಡಾ ಕಾಯ್ದೆ ಹಾಕ್ತಾರೆ

ಈ ನಾಲ್ಕು ಜನರು ಸಮಾಜದಲ್ಲಿ ಅವರದೇ ಕ್ಷೇತ್ರದಲ್ಲಿ ಸಾಧನೆಗೈದು ಹಲವು ವಿಚಾರಗಳನ್ನು ನಮಗೆ ನೀಡಿದ್ದಾರೆ. ಅವರ ಹೆಸರಿನಲ್ಲಿ ಪೀಠ ಸ್ಥಾಪನೆ ಯುವ ಪೀಳಿಗೆಗೆ ಮಾರ್ಗದರ್ಶವಾಗಲಿದೆ. ಶಿಕ್ಷಣ ಕ್ಷೇತ್ರ ಬಹಳ ಬದಲಾಗಿದೆ. ಹಿಂದೆ ಶಿಕ್ಷಣದಲ್ಲಿ ಅವಕಾಶ ಕಡಿಮೆ ಇತ್ತು. ಆದರೆ ಇಂದು ಅವಕಾಶ ಕೊರತೆ ಇಲ್ಲ.

ಯಾವ ವಿಶ್ವವಿದ್ಯಾಲಯದಲ್ಲಾದರೂ ದಾಖಲಾತಿ ಪಡೆಯುವ ಅವಕಾಶವಿದೆ. ನಾಸಾದಲ್ಲಿ ಶೇ.30 ರಷ್ಟು ಭಾರತೀಯರೇ ಇದ್ದಾರೆ. ಎಲ್ಲೆಡೆ ಭಾರತೀಯರೇ ಅವಕಾಶ ಪಡೆದುಕೊಳ್ಳುತ್ತಿರುವುದು ಹೆಮ್ಮೆಯ ವಿಚಾರ. ಪ್ರತಿ ಸರಕಾರ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿವೆ ಎಂದರು. ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ, ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಉಪಸ್ಥಿತರಿದ್ದರು.

English summary
Deputy chief minister Dr.G.Parameshwara has insisted management of Tumkur university that that varsity should be narcotic drugs free campus as soon as possible.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X