ತುಮಕೂರು ಅಭ್ಯರ್ಥಿಯ ಗೆಲುವಿಗಾಗಿ ಡಿಸಿಎಂ ಪರಮೇಶ್ವರ ಅವರಿಂದ ವಿಶೇಷ ಪೂಜೆ

ತುಮಕೂರು, ಮಾರ್ಚ್ 30: ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಜೆಡಿಎಸ್ ವರಿಷ್ಠ ದೇವೇಗೌಡರೇ ಅಭ್ಯರ್ಥಿ ಎಂದು ಘೋಷಣೆಯಾಗಿದೆ. ಕಾಂಗ್ರೆಸ್ ಎಂಪಿ ಮುದ್ದಹನುಮೇಗೌಡ ಕಣದಿಂದ ಹಿಂದೆ ಸರಿದಿದ್ದಾರೆ. ಮೇಲ್ನೋಟಕ್ಕೆ ಎಲ್ಲಾ ತೊಂದರೆ, ಸವಾಲುಗಳು ದೂರವಾದಂತಾಗಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಇದೀಗ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ತುಮಕೂರು ಅಭ್ಯರ್ಥಿಯ ಗೆಲುವಿಗಾಗಿ ವಿಶೇಷ ಪೂಜೆ ಸಲ್ಲಿದ್ದಾರೆ. ಕಾಡಸಿದ್ದೇಶ್ವರ ಮಠದಲ್ಲಿ ಪೂಜೆ ಸಲ್ಲಿಸಿದ್ದಾರೆ. ನೊಣವಿನಕೆರೆಯಲ್ಲಿರುವ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿದ ಡಿಸಿಎಂ ಪರಮೇಶ್ವರ್​, ಕರಿವೃಷಭ ದೇಶೀಕೇಂದ್ರ ಶಿವಯೋಗೀಶ್ವರ ಸ್ವಾಮೀಜಿಯನ್ನು ಭೇಟಿಯಾಗಿದ್ದಾರೆ.

ಅಲ್ಲದೆ ಶ್ರೀಗಳ ಮಾರ್ಗದರ್ಶನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪ್ರಸಕ್ತ ರಾಜಕೀಯ ನಡೆಸಲು ಮೈತ್ರಿ ಸರ್ಕಾರಕ್ಕೆ ಗುರುಬಲ ತುಂಬುವಂತೆ ಪ್ರಾರ್ಥಿಸಿದ್ದಾರೆ ಎನ್ನಲಾಗಿದೆ.

Dcm paid special Pooja at kadasiddeshwar mutt in Tumkuru

ಸ್ವಾಮೀಜಿಯವರೊಂದಿಗೆ ರಾಜಕೀಯದ ಕುರಿತು ಚರ್ಚೆಯನ್ನೂ ನಡೆಸಿದ್ದಾರೆ. ಈ ಮಠಕ್ಕೆ ಸಚಿವ ಡಿ.ಕೆ. ಶಿವಕುಮಾರ್​ ಕೂಡ ಆಗಾಗ ಭೇಟಿ ಮಾಡುತ್ತಾರೆ. ಅಂತೂ ತುಮಕೂರು ಲೋಕಸಭಾ ಚುನಾವಣೆಗಿದ್ದ ತೊಡಕುಗಳೆಲ್ಲವೂ ದೂರವಾದಂತಾಗಿದೆ. ಎಚ್‌ಡಿ ದೇವೇಗೌಡ ಅವರು ತುಮಕೂರು ಲೋಕಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+