ದಲಿತರ ಮೇಲಿನ ದೌರ್ಜನ್ಯ ಸಹಿಸಲ್ಲ: ಡಿಸಿಎಂ ಪರಮೇಶ್ವರ ಎಚ್ಚರಿಕೆ

ತುಮಕೂರು, ಸೆಪ್ಟೆಂಬರ್ 20: ಸಮಾಜದಲ್ಲಿ ದಲಿತರಿಗೆ ಯಾವುದೇ ರೀತಿಯ ದಕ್ಕೆ ಬಂದರೆ ನಾನು ಸುಮ್ಮನಿರುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ.

ಜಿಲ್ಲಾ ಛಲವಾದಿ ಮಹಾಸಭಾ ವತಿಯಿಂದ ತುಮಕೂರಿನ ಅಮಾನಿಕೆರೆ ಗಾಜಿನ ಮನೆ ಆವರಣದಲ್ಲಿ ಆಯೋಜಿಸಿರುವ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ದಲಿತರನ್ನು ಅವಕಾಶಕ್ಕೆ ತಕ್ಕಂತೆ ಬಳಸಿಕೊಳ್ಳಬಹುದು ಎಂದು ಊಹಿಸಿದರೆ ಅದನ್ನು ಸಹಿಸುವುದಿಲ್ಲ.‌ ನಾನು ದಲಿತ ಸಮುದಾಯವನ್ನು ಪ್ರತಿನಿಧಿಸಿ ಉಪಮುಖ್ಯಮಂತ್ರಿ ಯಾಗಿದ್ದೇನೆ.‌ ದಲಿತರಿಗೆ ಯಾವುದೇ ರೀತಿ ತೊಂದರೆಯಾದರೆ ಅವರ ಪರ ನಾನು ನಿಲ್ಲುತ್ತೇನೆ.‌ ಅದಕ್ಕಾಗಿ ರಾಜೀನಾಮೆ ನೀಡಲು ಸಿದ್ಧ ಎಂದು ಹೇಳಿದರು.

DCM says will not tolerate atrocities on Dalits in the state

ಸಮಾಜದಲ್ಲಿ ಶೋಷಿತ ಸಮುದಾಯದವರನ್ನು ಕೆಳಸ್ಥರದಿಂದ ಕಾಣಲಾಗುತ್ತಿದೆ. ಯಾರೂ ಕೆಳಜಾತಿಯಲ್ಲಿ ಹುಟ್ಟಬೇಕೆಂದು ಅರ್ಜಿ ಹಾಕಿ ಹುಟ್ಟುವುದಿಲ್ಲ. ಈ ಜಾತಿ ವ್ಯವಸ್ಥೆ ನಮ್ಮನ್ನು ಈ ಮಟ್ಟಕ್ಕೆ ತಂದಿದೆ. ದೇಶ ಅಭಿವೃದ್ಧಿಯಾಗಲು ತೊಡಕಾಗಿರುವುದೇ ಈ ಜಾತಿ ವ್ಯವಸ್ಥೆಯಿಂದ.‌ ಈ ವ್ಯವಸ್ಥೆ ಇರದಿದ್ದರೆ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿ ನಮ್ಮ ದೇಶ ಇರುತ್ತಿತ್ತು ಎಂದರು.

ಮುಂದಾದರೂ ಈ ವ್ಯವಸ್ಥೆ ತೊಲಗಿ, ಮುಂದಿನ ಪೀಳಿಗೆ ಈ ಶೋಷಣೆಯಿಂದ ಮುಕ್ತವಾಗಬೇಕು. ದಲಿತ ಜಾತಿ ಹುಡುಗ ಅಂತರ್‌ಜಾತಿ ವಿವಾಹವಾದರೆ ಮರ್ಯಾದ ಹತ್ಯೆ ಮಾಡುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಶಿಕ್ಷಣದಿಂದ ಮಾತ್ರ ಈ ವ್ಯವಸ್ಥೆ ಬುಡಮೇಲು ಮಾಡಲು ಸಾಧ್ಯ. ಈ ಜನಾಂಗದವರು ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವ ಮೂಲಕ ಮೇಲ್ಮಟ್ಟಕ್ಕೇರಿಸಬೇಕು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+