ಶಿವಕುಮಾರ ಸ್ವಾಮೀಜಿ ಬಿಜಿಎಸ್ ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು, ಜನವರಿ 27 : ತುಮಕೂರು ಜಿಲ್ಲೆ, ಕ್ಯಾತಸಂದ್ರದಲ್ಲಿರುವ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಶನಿವಾರ ಬೆಂಗಳೂರಿನಲ್ಲಿರುವ ಬಿಜಿಎಸ್ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಅನಾರೋಗ್ಯದ ಕಾರಣಕ್ಕಾಗಿ ಈಚೆಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ನ್ಯುಮೋನಿಯಾ ಆಗಿತ್ತು ಎಂದು ಮೂಲಗಳು ತಿಳಿಸಿದ್ದವು.

ಇನ್ನು ಆಸ್ಪತ್ರೆಯಿಂದ ಬಿಡುಗಡೆಯಾದ ಡಾ.ಶಿವಕುಮಾರ ಸ್ವಾಮೀಜಿ, ತುಮಕೂರಿನ ಮಠಕ್ಕೆ ತೆರಳಲು ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಸಂಚಾರ ದಟ್ಟಣೆಯಿಂದ ಪೂರ್ತಿಯಾಗಿ ಮುಕ್ತ ಮಾಡಿಕೊಡಲಾಗಿದೆ. ಪೊಲೀಸ್ ಭದ್ರತೆಯಲ್ಲಿ ಸ್ವಾಮೀಜಿ ಆಸ್ಪತ್ರೆಯಿಂದ ನೇರವಾಗಿ ಸಿದ್ದಗಂಗಾ ಮಠಕ್ಕೆ ತೆರಳಿದರು.

ಇನ್ನು ಮುಂದೆ ವೈದ್ಯರ ತಂಡವು ಸಿದ್ದಗಂಗಾ ಮಠದಲ್ಲೇ ಚಿಕಿತ್ಸೆ ಮುಂದುವರಿಸಲಿವೆ. ಶಿವಕುಮಾರ ಸ್ವಾಮೀಜಿಗೆ ಸೋಂಕು ಹಿನ್ನೆಲೆಯಲ್ಲಿ ಚಿಕಿತ್ಸೆಯನ್ನು ಮುಂದುವರಿಸಲಾಗುವುದು. ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿರುವ ಸ್ವಾಮೀಜಿಗೆ ಸದ್ಯಕ್ಕೆ ವಿಶ್ರಾಂತಿ ಅಗತ್ಯವಿದ್ದು, ಹತ್ತು ದಿನಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳಲು ವೈದ್ಯರು ಸೂಚಿಸಿದ್ದಾರೆ.

Dr Shivakumara Swamiji discharged from Bengaluru BGS hospital

ಶಿವಕುಮಾರ ಸ್ವಾಮೀಜಿ ವಯಸ್ಸಿನ ಕಾರಣಕ್ಕೆ ಕೆಲ ಚಿಕಿತ್ಸೆಯನ್ನು ಅವರಿಗೆ ನೀಡುವುದಕ್ಕೆ ಸಾಧ್ಯವಿಲ್ಲ. ಆ ರೀತಿ ಬಲವಂತವಾಗಿ ಚಿಕಿತ್ಸೆಗೆ ಮುಂದಾದರೆ ಅವರಿಗೆ ಸಮಸ್ಯೆ ಆಗುತ್ತದೆ ಎಂದು ಬಿಜಿಎಸ್ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+