ಡೆಂಗ್ಯೂಗೆ ತುಮಕೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಬಲಿ
ತುಮಕೂರು, ಆಗಸ್ಟ್ 09 : ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಮಾರಕ ಡೆಂಗ್ಯೂ ಜ್ವರಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿನಿ ಬಲಿಯಾಗಿದ್ದಾಳೆ.
ಸುಷ್ಮಿತಾ ಆರಾಧ್ಯ ಮೃತ ವಿದ್ಯಾರ್ಥಿನಿ. ಭಾನುವಾರದಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿಕ್ಕನಾಯಕನಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜ್ವರ ತೀವ್ರ ಸ್ವರೂಪ ಪಡೆದುಕೊಂಡಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.

ಬೆಂಗಳೂರಿನ ಎಂ.ಎಸ್ ರಾಮಯ್ಯ ಕಾಲೇಜಿನಲ್ಲಿ ಎಂಜಿನಿಯರಿಂಗ್ ಓದುತಿದ್ದ ಸುಷ್ಮಿತಾ ಇಲ್ಲಿನ ರೇಣುಕಾ ಸ್ಟೋರ್ ಮಾಲೀಕ ನಾಗರಾಜು ಹಾಗೂ ಅನುಪಮಾ ದಂಪತಿಯ ಏಕೈಕ ಪುತ್ರಿಯಾಗಿದ್ದಳು.











Click it and Unblock the Notifications