ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೆಣದ ರಾಶಿಯ ಮೇಲೆ ಪಿಪಿಇ ಕಿಟ್ ದುಡ್ಡು ಹೊಡೆದಿದ್ದಾರೆ!

|
Google Oneindia Kannada News

ಬೆಂಗಳೂರು, ಅ. 31: ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದವರು, ಶಿರಾ ಉಪಚುನಾವಣೆಯಲ್ಲೂ ಅಡ್ಡದಾರಿ ಹಿಡಿದಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ. ಶಿರಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ಅವರ ಪರವಾಗಿ ಪ್ರಚಾರ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆ ಶಿರಾ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಬಿಜೆಪಿಯವರು ಉಪ ಚುನಾವಣೆಯಲ್ಲಿ ಹಣಬಲ, ತೋಳ್ಬಲ ಉಪಯೋಗ ಮಾಡುತ್ತಿದ್ದಾರೆ. ಚುನಾವಣಾ ಆಯೋಗವನ್ನೂ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ವಾಮಮಾರ್ಗದ ಮೂಲಕ ಚುನಾವಣೆಯಲ್ಲಿ ಗೆಲ್ಲಲು ಹೊರಟಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 15 ತಿಂಗಳುಗಳಾಗಿವೆ. ಉತ್ತರ ಕರ್ನಾಟಕದಲ್ಲಿ ಪ್ರವಾಹದಿಂದ ಜನ ಬೀದಿಗೆ ಬಂದಿದ್ದಾರೆ. ಅವರಿಗೆ ಏನಾದರೂ ಪರಿಹಾರ ಕೊಟ್ಟಿದ್ದಾರಾ? ಎಂದು ಈಶ್ವರ್ ಖಂಡ್ರೆ ಪ್ರಶ್ನೆ ಮಾಡಿದ್ದಾರೆ.

ಕೊರೊನಾ ನಿರ್ವಹಣೆ ಮಾಡುವುದರಲ್ಲಿ ಹಾಗೂ ಸೋಂಕು ತಡೆಗಟ್ಟುವಲ್ಲಿ ಯಡಿಯೂರಪ್ಪ ಅವರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಲಕ್ಷಾಂತರ ಜನರು ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ. ಹೆಣದ ರಾಶಿಯ ಮೇಲೆ ಪಿಪಿಇ ಕಿಟ್ ದುಡ್ಡು ಹೊಡೆದಿದ್ದಾರೆ. ಇವರು ಭ್ರಷ್ಟಾಚಾರದಲ್ಲಿ ನಂಬರ್ ಒನ್ ಆಗಿದ್ದಾರೆ. ಈಗ ಮತ್ತೆ ಪ್ರವಾಹ ಬಂದಿದ್ದು ಜನರನ್ನು ಬೀದಿಗೆ ತಂದಿದೆ. ಆದರೂ ನಯಾ ಪೈಸೆ ಪರಿಹಾರವನ್ನು ಇಲ್ಲಿವರೆಗೆ ನೀಡಿಲ್ಲ. ಕೇಂದ್ರವು ರಾಜ್ಯಕ್ಕೆ ಐದು ಪೈಸೆ ನೆರವು ಕೊಟ್ಟಿಲ್ಲ. ಕೇಂದ್ರ, ರಾಜ್ಯದಲ್ಲಿ ನಮ್ಮದೇ ಸರ್ಕಾರ ಅಂತಾರೆ, ಕೇಂದ್ರ ಯಾಕೆ ಇನ್ನೂ ನೆರವು ನೀಡಿಲ್ಲ ಹೇಳ್ರಪ್ಪಾ? ಎಂದು ಬಿಜೆಪಿ ನಾಯಕರ ವಿರುದ್ಧ ಈಶ್ವರ್ ಖಂಡ್ರೆ ವಾಗ್ದಾಳಿ ನಡೆಸಿದರು.

Eshwar Khandre Alleges Bjp Came To Power By Operation Kamala Also Doing Wrong In By-election

15ನೇ ಹಣಕಾಸು ಆಯೋಗದ ಹಣವೂ ಬಂದಿಲ್ಲ. ಪ್ರವಾಹದ ನೆರವು ಇನ್ನೂ ಸಿಕ್ಕಿಲ್ಲ. ರಾಜ್ಯದ ಬಿಜೆಪಿ ಸಂಸದರು ಅಂಜುಬುರಕರು. ಕೇಂದ್ರದ ಮೇಲೆ ಯಾಕೆ ಒತ್ತಡ ತರಲಿಲ್ಲ? ಬರಬೇಕಾದ ನೆರವು ಕೊಡಿಸೋಕೆ ಆಗಲಿಲ್ಲ? ಶಿರಾ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ. ಮುಂದೆ ಬರುವ ಎಲ್ಲಾ ಚುನಾವಣೆಗಳಲ್ಲಿಯೂ ಕಾಂಗ್ರೆಸ್ ಜಯಸಾಧಿಸಲಿದೆ. ನಮ್ಮ ಅಭ್ಯರ್ಥಿ ಟಿಬಿ ಜಯಚಂದ್ರ ಅವರು ಉತ್ತಮ ಸೇವೆ ಸಲ್ಲಿಸಿದ್ದಾರೆ. ಅಂತಹವರನ್ನು ನೀವೆಲ್ಲರೂ ಆರಿಸಿ ಕಳಿಸಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

English summary
KPCC vice-president Eshwar Khandre alleges that those who came to power through Operation Lotus were also doing wrong in the by-election of Shira. Eshwar Khandre Speaking at a news conference in Shira town in Tumkur district in the wake of the campaign on behalf of Congress candidate T.B. Jayachandra. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X