ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿರಾ ಉಪ ಚುನಾವಣೆ; ಗೆದ್ದು ಇತಿಹಾಸ ಬರೆದ ಬಿಜೆಪಿ

|
Google Oneindia Kannada News

ತುಮಕೂರು, ನವೆಂಬರ್ 10: ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ರಾಜೇಶ್ ಗೌಡ ಜಯಭೇರಿ ಬಾರಿಸಿದ್ದಾರೆ. ಇದೇ ಮೊದಲ ಬಾರಿಗೆ ಶಿರಾ ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಬಿಜೆಪಿ ಇತಿಹಾಸ ನಿರ್ಮಾಣ ಮಾಡಿದೆ.

ಶಿರಾ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಮಂಗಳವಾರ ತುಮಕೂರು ನಗರದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಿತು. ಬಿಜೆಪಿಯ ಡಾ. ರಾಜೇಶ್ ಗೌಡ ಅವರು 74,522 ಮತಗಳನ್ನು ಪಡೆದು ಗೆಲುವು ಸಾಧಿಸಿದರು. ಕಾಂಗ್ರೆಸ್‌ನ ಟಿ. ಬಿ. ಜಯಚಂದ್ರ ಪ್ರಬಲ ಪೈಪೋಟಿ ನೀಡಿದರು.

ಶಿರಾ ಉಪ ಚುನಾವಣೆ ಫಲಿತಾಂಶ; ಪಕ್ಷೇತರ ಅಭ್ಯರ್ಥಿ ಪ್ರತಿಭಟನೆ ಶಿರಾ ಉಪ ಚುನಾವಣೆ ಫಲಿತಾಂಶ; ಪಕ್ಷೇತರ ಅಭ್ಯರ್ಥಿ ಪ್ರತಿಭಟನೆ

 First Victory For BJP At Sira Assembly seat

ಉಪ ಚುನಾವಣೆ ಮತ ಎಣಿಕೆ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಪೈಪೋಟಿ ನಡೆಯಿತು. 2018ರ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಸಾಧಿಸಿತ್ತು. ಉಪ ಚುನಾವಣೆ ಸೋಲುವ ಮೂಲಕ ಜೆಡಿಎಸ್ ಕ್ಷೇತ್ರವನ್ನು ಕಳೆದುಕೊಂಡಿದೆ.

ಶಿರಾ ಉಪ ಚುನಾವಣೆ ಫಲಿತಾಂಶ; ಕಾಂಗ್ರೆಸ್, ಬಿಜೆಪಿ ನೇರ ಪೈಪೋಟಿ ಶಿರಾ ಉಪ ಚುನಾವಣೆ ಫಲಿತಾಂಶ; ಕಾಂಗ್ರೆಸ್, ಬಿಜೆಪಿ ನೇರ ಪೈಪೋಟಿ

ಶಿರಾ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಪೂರ್ಣಗೊಂಡಿದೆ. ಬಿಜೆಪಿಯ ಅಭ್ಯರ್ಥಿ ಡಾ. ರಾಜೇಶ್ ಗೌಡ 74,522 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್‌ನ ಟಿ. ಬಿ. ಜಯಚಂದ್ರ 61,573 ಮತ, ಜೆಡಿಎಸ್‌ನ ಅಮ್ಮಾಜಮ್ಮಗೆ 35,982 ಮತಗಳನ್ನು ಪಡೆದಿದ್ದಾರೆ.

RR Nagar, Sira By Election Results 2020 Live Updates; ಆರ್. ಆರ್. ನಗರ, ಶಿರಾ ಉಪ ಚುನಾವಣೆ ಫಲಿತಾಂಶRR Nagar, Sira By Election Results 2020 Live Updates; ಆರ್. ಆರ್. ನಗರ, ಶಿರಾ ಉಪ ಚುನಾವಣೆ ಫಲಿತಾಂಶ

ಇದೇ ಮೊದಲ ಬಾರಿಗೆ ಚುನಾವಣೆ ಎದುರಿಸಿದ್ದ ಡಾ. ರಾಜೇಶ್ ಗೌಡ ಗೆಲುವು ಸಾಧಿಸುವ ಮೂಲಕ ವಿಧಾನಸಭೆ ಪ್ರವೇಶ ಮಾಡಿದರು. ಬಿ. ಸತ್ಯನಾರಾಯಣ ಅವರ ನಿಧನಿಂದಾಗಿ ಉಪ ಚುನಾವಣೆ ಎದುರಾಗಿತ್ತು. ಸತ್ಯನಾರಾಯಣ ಪತ್ನಿಗೆ ಅಮ್ಮಾಜಮ್ಮಗೆ ಜೆಡಿಎಸ್ ಟಿಕೆಟ್ ನೀಡಿದರೂ ಅನುಕಂಪ ಮತಗಳಾಗಿ ಬದಲಾಗಲಿಲ್ಲ.

2008, 2013ರ ಚುನಾವಣೆಯಲ್ಲಿ ಶಿರಾದಲ್ಲಿ ಟಿ. ಬಿ. ಜಯಚಂದ್ರ ಗೆಲುವು ಸಾಧಿಸಿದ್ದರು. 2018ರಲ್ಲಿ ಜೆಡಿಎಸ್‌ನ ಬಿ. ಸತ್ಯನಾರಾಯಣ ವಿರುದ್ಧ ಸೋಲು ಕಂಡಿದ್ದರು. ಉಪ ಚುನಾವಣೆಯಲ್ಲಿ ಮತ್ತೆ ಟಿಕೆಟ್ ಪಡೆದು ಕಣಕ್ಕಿಳಿದರೂ ಸೋಲು ಕಂಡಿದ್ದಾರೆ.

ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಗೆಲ್ಲುವ ಮೂಲಕ ಬಿಜೆಪಿ ಇತಿಹಾಸ ನಿರ್ಮಾಣ ಮಾಡಿದೆ. ಕಳೆದ ಮೂರು ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು 25 ಸಾವಿರ ಮತಗಳನ್ನು ಪಡೆಯಲು ಸಹ ವಿಫಲರಾಗಿದ್ದರು. ಈ ಬಾರಿ ಗೆಲ್ಲಬೇಕು ಎಂದು ಪಣತೊಟ್ಟು ಬಿಜೆಪಿ ಅಖಾಡಕ್ಕೆ ಇಳಿದಿತ್ತು.

English summary
Bharatiya Janata Party created history by winning Sira by election. First victory for party in Tumakuru district Sira.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X