ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರವಾಹ ಪರಿಹಾರಕ್ಕಾಗಿ ಹೋರಾಟಕ್ಕಿಳಿದ ಎಚ್. ಡಿ. ದೇವೇಗೌಡ

|
Google Oneindia Kannada News

ತುಮಕೂರು, ಅಕ್ಟೋಬರ್ 03 : ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ಕೇಂದ್ರ ಸರ್ಕಾರದಿಂದ ಪರಿಹಾರ ನೀಡಿಲ್ಲ ಎಂದು ರಾಜ್ಯಾದ್ಯಂತ ಚರ್ಚೆ ನಡೆಯುತ್ತಿದೆ. ಪರಿಹಾರಕ್ಕೆ ಆಗ್ರಹಿಸಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಹೋರಾಟ ನಡೆಸಲಿದ್ದಾರೆ.

ಜೆಡಿಎಸ್ ವರಿಷ್ಠ ಮತ್ತು ಮಾಜಿ ಪ್ರಧಾನಿ ದೇವೇಗೌಡ ಈ ಕುರಿತು ಹೇಳಿಕೆ ನೀಡಿದ್ದಾರೆ. "ಅಕ್ಟೋಬರ್ 10ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದು ಕಾರ್ಯಕರ್ತರು ಪಾಲ್ಗೊಳ್ಳಬೇಕು" ಎಂದು ಕರೆ ನೀಡಿದರು.

Exclusive: 'ಪ್ರಧಾನಿ ನಿಧಿ'ಯೇ ಖೋತಾ ಆಗಿರುವಾಗ ಪ್ರವಾಹ ಪರಿಹಾರ ನೀಡೋಕೆ ಹೇಗೆ ಸಾಧ್ಯ?Exclusive: 'ಪ್ರಧಾನಿ ನಿಧಿ'ಯೇ ಖೋತಾ ಆಗಿರುವಾಗ ಪ್ರವಾಹ ಪರಿಹಾರ ನೀಡೋಕೆ ಹೇಗೆ ಸಾಧ್ಯ?

ತುಮಕೂರಿನಲ್ಲಿ ಗುರುವಾರ ಪಕ್ಷದ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, "ವಿಧಾನಸಭೆ ಅಧಿವೇಶನ ಆರಂಭವಾಗುವ ಮೊದಲ ದಿನ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಹಾಕೋಣ" ಎಂದರು.

ಪ್ರವಾಹ, ಪರಿಹಾರ; ಪರ-ವಿರೋಧ; ಪ್ರತಾಪ್ ಸಿಂಹ ಹೇಳಿಕೆ ಪ್ರವಾಹ, ಪರಿಹಾರ; ಪರ-ವಿರೋಧ; ಪ್ರತಾಪ್ ಸಿಂಹ ಹೇಳಿಕೆ

Flood Compensation JDS Protest In Bengaluru On October 10

ಸಮಾವೇಶದಲ್ಲಿ ಪಾಲ್ಗೊಂಡಿದ್ದ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, "ದೇವೇಗೌಡರು ಲೋಕಸಭೆಯಲ್ಲಿ ಇದ್ದಿದ್ದರೆ ಮೋದಿಗೆ ಕರ್ನಾಟಕ ನೆನಪಾಗುತ್ತಿತ್ತು. ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷ ಇದ್ದರೆ ದಿನವೂ ಯುಗಾದಿ, ದೀಪಾವಳಿ ವಾತಾವರಣ ಇರುತ್ತದೆ ಎಂದು ಭಾಷಣ ಬಿಗಿದವರು ರಾಜ್ಯಕ್ಕೆ 2 ರೂಪಾಯಿ ಬಿಡುಗಡೆ ಮಾಡಿಲ್ಲ" ಎಂದು ಟೀಕಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ದ ಜೆಡಿಎಸ್ ಭಯಂಕರ ಆರೋಪ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ದ ಜೆಡಿಎಸ್ ಭಯಂಕರ ಆರೋಪ

ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್. ಆರ್. ಶ್ರೀನಿವಾಸ್ ಮಾತನಾಡಿ, "ರಾಜ್ಯಕ್ಕೆ ಸಿಗಬೇಕಾದ ಪರಿಹಾರ ಕೇಳುವ ಗಂಡಸರು ಬಿಜೆಪಿಯಲ್ಲಿಲ್ಲ. ಷಂಡರನ್ನು ಆಯ್ಕೆ ಮಾಡಿದ್ದಕ್ಕೆ ಈ ಪರಿಸ್ಥಿತಿ ಬಂದಿದೆ. ಶಾ, ಮೋದಿ ಮುಂದೆ ನಿಂತು ಮಾತನಾಡುವ ತಾಕತ್ತು ಯಡಿಯೂರಪ್ಪಗೆ ಇಲ್ಲ" ಎಂದು ಟೀಕಿಸಿದರು.

ಕರ್ನಾಟಕದ 22 ಜಿಲ್ಲೆಗಳ, 103 ತಾಲೂಕುಗಳಲ್ಲಿ ಪ್ರವಾಹದಿಂದಾಗಿ ಅಪಾರವಾದ ಹಾನಿ ಉಂಟಾಗಿದೆ. ಆದರೆ, ಕೇಂದ್ರದಿಂದ ಇದುವರೆಗೂ ಪರಿಹಾರ ಬಿಡುಗಡೆಯಾಗಿಲ್ಲ. ಈ ಬಗ್ಗೆ ಈಗಾಗಲೇ ರಾಜ್ಯದ್ಯಂತ ಚರ್ಚೆಗಳು ನಡೆಯುತ್ತಿವೆ.

ರಾಜ್ಯದಲ್ಲಿ 25 ಬಿಜೆಪಿ ಸಂಸದರಿದ್ದಾರೆ. ಅವರು ಈ ಕುರಿತು ವಿವಿಧ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವಿದ್ದರೂ ಪರಿಹಾರ ಸಿಗುತ್ತಿಲ್ಲ ಎಂಬುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

English summary
JD(S) supreme H.D.Deve Gowda said that party will stage protest in Bengaluru on October 10, 2019 to demand union government for flood compensation to state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X