ಡಾ.ಜಿ. ಪರಮೇಶ್ವರ್ ಆರೋಗ್ಯದ ಬಗ್ಗೆ ವೈದ್ಯರ ಮಾಹಿತಿ, ಇಲ್ಲಿದೆ ವಿವರ
ತುಮಕೂರು, ಏಪ್ರಿಲ್ 29: ಶುಕ್ರವಾರ ಕೊರಟಗೆರೆ ತಾಲೂಕಿನ ಭೈರನಹಳ್ಳಿಯಲ್ಲಿ ರೋಡ್ ಶೋ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ ತಲೆಗೆ ಗಾಯ ಮಾಡಿಕೊಂಡಿದ್ದ ಕರ್ನಾಟಕದ ಮಾಜಿ ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಶನಿವಾರ ತಿಳಿಸಿದ್ದಾರೆ.
ಮೇ 10ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಜಿ ಪರಮೇಶ್ವರ್ ಅವರು ಕೊರಟಗೆರೆಯಿಂದ ಸ್ಪರ್ಧಿಸುತ್ತಿದ್ದಾರೆ. ಕೊರಟಗೆರೆ ತಾಲೂಕಿನ ಭೈರೇನಹಳ್ಳಿಯಲ್ಲಿ ಶುಕ್ರವಾರ ದುಷ್ಕರ್ಮಿಯೊಬ್ಬ ಕಲ್ಲು ತೂರಾಟ ನಡೆಸಿದ್ದರಿಂದ ರಾಜ್ಯ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷರ ತಲೆಗೆ ಆಳವಾದ ಗಾಯವಾಗಿತ್ತು. ಗಾಯದ ನಂತರ, ತೀವ್ರ ರಕ್ತಸ್ರಾವದಿಂದ ಪರಮೇಶ್ವರ ಅವರನ್ನು ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಸಿದ್ಧಾರ್ಥ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸದ್ಯ ವೈದ್ಯರ ತಂಡ ಈಗ ಅವರ ನಿವಾಸದಲ್ಲಿ ಅವರ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ.

ಅವರ ನಿಕಟವರ್ತಿಗಳ ಪ್ರಕಾರ, ಇದು ಚುನಾವಣಾ ಸಮಯದಲ್ಲಿ ಕಲ್ಲು ತೂರಾಟ ನಡೆದ ಮೂರನೇ ಪ್ರಕರಣವಾಗಿದೆ. ಮೊದಲ ಬಾರಿಗೆ ಕಾಂಗ್ರೆಸ್ ಅಧ್ಯಕ್ಷ ಎಂ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದಾಗ ಮೊದಲನೆಯದು, ಎರಡನೇ ಘಟನೆ ಅವರು ನಾಮಪತ್ರ ಸಲ್ಲಿಸಲು ಹೊರಟಿದ್ದಾಗ ನಡೆದಿತ್ತು. ಕಾಂಗ್ರೆಸ್ ನಾಯಕರು ಶನಿವಾರ ತಮ್ಮ ಬೆಂಬಲಿಗರು ಮತ್ತು ಹಿತೈಷಿಗಳನ್ನು ಭೇಟಿ ಮಾಡುವ ನಿರೀಕ್ಷೆಯಿದೆ.
ಇನ್ನು ಡಾ. ಪರಮೇಶ್ವರ್ ಅವರ ಮೇಲೆ ನಡೆದಿರುವ ಕಲ್ಲು ತೂರಾಟ ಪ್ರಕರಣ ಖಂಡಿಸಿ ಚಾಮರಾಜನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ ಕೆಪಿಸಿಸಿ ಅಧ್ಯಕ್ಷ ತುಮಕೂರಿನ ಬೈರನಹಳ್ಳಿಯಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಜಿ ಉಪ ಮುಖ್ಯಮಂತ್ರಿ ಶ್ರೀ ಜಿ. ಪರಮೇಶ್ವರ ಅವರ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ ತೀವ್ರ ಕಳವಳಕಾರಿ. ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಹಿಂಸೆಗೆ ಅವಕಾಶವಿಲ್ಲ. ಘಟನೆಗೆ ಕಾರಣನಾದ ವ್ಯಕ್ತಿಯನ್ನು ಈ ಕೂಡಲೇ ಬಂಧಿಸಬೇಕು. ಪರಮೇಶ್ವರ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾಜಿ ಸಚಿವ ಡಾ.ಜಿ. ಪರಮೇಶ್ವರ್ ಅವರ ಮೇಲೆ ನಡೆದಿರುವ ಹಲ್ಲೆ ಅತ್ಯಂತ ಖಂಡನೀಯ. ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ದುಷ್ಕರ್ಮಿಗಳನ್ನು ಬಂಧಿಸಿ, ವಿಚಾರಣೆಗೊಳಪಡಿಸಬೇಕಾಗಿದೆ ಎಂದು ಆಗ್ರಹಿಸಿದ್ದಾರೆ.
ಪರಮೇಶ್ವರ್ ಅವರ ಮೇಲೆ ಆಗಿರುವ ಘಟನೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ತೆರಳಿರುವ ಹೊಸಕೋಟೆ ಕಾಂಗ್ರೆಸ್ ಅಭ್ಯರ್ಥಿಯಾದ ಶರತ್ ಬಚ್ಚೇಗೌಡ ಅವರ ಪತ್ನಿಯ ಮೇಲೆ ಹಲ್ಲೆಯಾಗಿದೆ. ಮಾಜಿ ಡಿಸಿಎಂ ಪರಮೇಶ್ವರ್ ಅವರ ಮೇಲೆ ಹಲ್ಲೆಯಾಗಿದೆ. ಕರ್ನಾಟಕದ ಜನತೆ ಬಿಜೆಪಿ ಗೆಲ್ಲಿಸದಿದ್ದರೆ, ಗಲಭೆ ಉಂಟಾಗುತ್ತದೆ ಎಂದು ಅಮಿತ್ ಶಾ ಅವರು ಹೇಳಿದ್ದಾರೆ. ಹಾಗಾದರೆ, ಈಗ ಈ ಗಲಭೆಗಳೆಲ್ಲಾ ನಿಮ್ಮ ಕುಮ್ಮಕ್ಕಿನಿಂದಲೇ ನಡೆಯುತ್ತಿರುವುದಾ? ಎಂದು ಟ್ವೀಟ್ ಮಾಡಿದೆ.












Click it and Unblock the Notifications