ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿದ್ಯಾರ್ಥಿಗಳ ಸಾವು: ಮಾಜಿ ಶಾಸಕ ಕಿರಣ್ ಕುಮಾರ್ ಅರೆಸ್ಟ್

ಕಿರಣ್ ಕುಮಾರ್ ಅವರಿಗೆ ಸಂಬಂಧಿಸಿದ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ.

|
Google Oneindia Kannada News

ತುಮಕೂರು, ಮಾರ್ಚ್ 9: ಜಿಲ್ಲೆಯ ಚಿಕ್ಕನಾಯಕನ ಹಳ್ಳಿಯಲ್ಲಿನ ಹುಳಿಯಾರಿನಲ್ಲಿನ ವಿದ್ಯಾವಾರಿಧಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ ಮೂವರು ವಿದ್ಯಾರ್ಥಿಗಳು ಸಾವಿಗೀಡಾದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಕಿರಣ್ ಕುಮಾರ್ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಶಾಲೆಯ ವಸತಿ ಗೃಹದಲ್ಲಿದ್ದ 3 ವಿದ್ಯಾರ್ಥಿಗಳು ಬುಧವಾರ ರಾತ್ರಿ 9:30ರ ಸುಮಾರಿಗೆ ರಾತ್ರಿಯೂಟ ಸೇವಿಸಿದ ನಂತರ ಅಸ್ವಸ್ಥರಾಗಿ, ಆಸ್ಪತ್ರೆಗೆ ಸೇರುವ ಮಾರ್ಗ ಮಧ್ಯೆ ನಿಧನ ಹೊಂದಿದ್ದರು. ಈ ಕಾಲೇಜು ಮಾಜಿ ಶಾಸಕ ಕಿರಣ್ ಕುಮಾರ್ ಅವರಿಗೆ ಸೇರಿದ್ದಾಗಿದೆ. ಹಾಗಾಗಿ, ಅವರನ್ನು ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.[ಹುಳಿಯಾರ್ ಶಾಲೆಯಲ್ಲಿ 3 ವಿದ್ಯಾರ್ಥಿಗಳ ಅನುಮಾನಾಸ್ಪದ ಸಾವು]

Former MLA Kiran Kumar arrested in students death case

ಏತನ್ಮಧ್ಯೆ, ವಿದ್ಯಾರ್ಥಿಗಳು ಕಲುಷಿತ ಆಹಾರ ಸೇವಿಸಿರುವುದರ ಬಗ್ಗೆ ಅನುಮಾನ ಎದ್ದಿರುವ ಹಿನ್ನೆಲೆಯಲ್ಲಿ, ಹಾಸ್ಟೆಲ್ ನಲ್ಲಿ ನೀಡಲಾಗಿದ್ದ ಊಟದ ಸ್ಯಾಂಪಲ್ ಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

English summary
Former MLA of Chikkanayakana Halli Taluk of Tumkur district, Kiran Kumar, has been arrested after the death of three students in Vidhyavaridhi International School which belongs to Kiran Kumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X