ಮುದ್ದಹನುಮೇಗೌಡ ನಾಮಪತ್ರ ವಾಪಸ್, ಪರಮೇಶ್ವರ ಸ್ವಾಗತ

ತುಮಕೂರು, ಮಾರ್ಚ್ 29 : ತುಮಕೂರು ಕಾಂಗ್ರೆಸ್‌ನಲ್ಲಿ ಉಂಟಾಗಿದ್ದ ಭಿನ್ನಮತ ಶಮನವಾಗಿದೆ. ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಎಚ್.ಡಿ.ದೇವೇಗೌಡ ಅವರು ಕಣದಲ್ಲಿದ್ದಾರೆ. ಏಪ್ರಿಲ್ 18ರಂದು ಮತದಾನ ನಡೆಯಲಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಮುದ್ದಹನುಮೇಗೌಡ ಅವರು ನಾಮಪತ್ರ ಸಲ್ಲಿಸಿದ್ದರು. ಕಾಂಗ್ರೆಸ್ ನಾಯಕರ ಸಂಧಾನದ ಬಳಿಕ ಅವರು ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ. ಕೆ.ಎನ್.ರಾಜಣ್ಣ ಅವರು ಸಹ ಬಂಡಾಯ ಅಭ್ಯರ್ಥಿಯಾಗಿ ಸಲ್ಲಿಸಿದ್ದ ನಾಮಪತ್ರವನ್ನು ವಾಪಸ್ ಪಡೆಯಲಾಗಿದೆ.

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ನಾಮಪತ್ರವನ್ನು ವಾಪಸ್ ಪಡೆದ ಮುದ್ದಹನುಮೇಗೌಡ ಅವರಿಗೆ ಟ್ವಿಟರ್ ಮೂಲಕ ಧನ್ಯವಾದವನ್ನು ಅರ್ಪಿಸಿದ್ದಾರೆ. ಎಚ್.ಡಿ.ದೇವೇಗೌಡರನ್ನು ಗೆಲ್ಲಿಸಲು ಕಾಂಗ್ರೆಸ್-ಜೆಡಿಎಸ್ ಒಟ್ಟಾಗಿ ಕೆಲಸ ಮಾಡೋಣ ಎಂದು ಹೇಳಿದ್ದಾರೆ.

ತುಮಕೂರು ಕ್ಷೇತ್ರದ ಪರಿಚಯ ಓದಿ

ತುಮಕೂರು ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ಎಚ್.ಡಿ.ದೇವೇಗೌಡ, ಬಿಜೆಪಿ ಅಭ್ಯರ್ಥಿಯಾಗಿ ಜಿ.ಎಸ್.ಬಸವರಾಜ್ ಅವರು ಕಣದಲ್ಲಿದ್ದಾರೆ. ಏಪ್ರಿಲ್ 18ರಂದು ಮತದಾನ ನಡೆಯಲಿದ್ದು, ಮೇ 23ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.....

ಡಾ.ಜಿ.ಪರಮೇಶ್ವರ ಟ್ವೀಟ್

ನನ್ನ ಮಾತಿಗೆ ಗೌರವ ಕೊಟ್ಟು ತುಮಕೂರು ಕ್ಷೇತ್ರದಿಂದ ಮಾನ್ಯ ಮುದ್ದ ಹನುಮೇಗೌಡರು ಹಾಗೂ ಕೆ.ಎನ್. ರಾಜಣ್ಣರವರು ನಾಮಪತ್ರ ಹಿಂಪಡೆದಿರುವ ನಡೆಯನ್ನು ನಾನು ಸ್ವಾಗತಿಸುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಟ್ವೀಟ್ ಮಾಡಿದ್ದಾರೆ.

ಟಿಕೆಟ್ ಕೈ ತಪ್ಪಿತ್ತು

ಟಿಕೆಟ್ ಕೈ ತಪ್ಪಿತ್ತು

ತುಮಕೂರು ಕ್ಷೇತ್ರದ ಹಾಲಿ ಸಂಸದರು ಎಸ್.ಪಿ.ಮುದ್ದಹನುಮೇಗೌಡ. ಆದರೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ತುಮಕೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟ ಕಾರಣ ಹಾಲಿ ಸಂಸದರಿಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿತ್ತು.

ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ

ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ

ಎಸ್.ಪಿ.ಮುದ್ದಹನುಮೇಗೌಡ ಅವರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ, ಪಕ್ಷೇತರ ಅಭ್ಯರ್ಥಿಯಾಗಿ ಎರಡು ನಾಮಪತ್ರಗಳನ್ನು ಸಲ್ಲಿಸಿದ್ದರು. ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸಲ್ಲಿಸಿದ್ದ ನಾಮಪತ್ರ ತಿರಸ್ಕಾರವಾಗಿತ್ತು. ಆದರೆ, ಪಕ್ಷೇತರ ಅಭ್ಯರ್ಥಿಯಾಗಿ ಸಲ್ಲಿಸಿದ್ದ ನಾಮಪತ್ರ ಸ್ವೀಕೃತವಾಗಿತ್ತು.

ಕಾಂಗ್ರೆಸ್‌ ನಾಯಕರಿಂದ ಮನವೊಲಿಕೆ

ಕಾಂಗ್ರೆಸ್‌ ನಾಯಕರಿಂದ ಮನವೊಲಿಕೆ

ಎಸ್.ಪಿ.ಮುದ್ದಹನುಮೇಗೌಡ ಅವರ ಜೊತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಸಂಧಾನ ಸಭೆ ನಡೆಸಿದ್ದರು. ನಾಮಪತ್ರ ವಾಪಸ್ ಪಡೆಯುವಂತೆ ಮನವಿ ಮಾಡಿದ್ದರು. ಈಗ ಎಸ್.ಪಿ.ಮುದ್ದಹನುಮೇಗೌಡ ಅವರು ನಾಮಪತ್ರ ವಾಪಸ್ ಪಡೆದಿದ್ದಾರೆ.

ಕೆ.ಎನ್.ರಾಜಣ್ಣ ನಾಮಪತ್ರವೂ ವಾಪಸ್

ಕೆ.ಎನ್.ರಾಜಣ್ಣ ನಾಮಪತ್ರವೂ ವಾಪಸ್

ಮತ್ತೊಂದು ಕಡೆ ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಕೆ.ಎಸ್.ರಾಜಣ್ಣ ಅವರು ಸಹ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದ್ದರು. ಅದನ್ನು ಸಹ ವಾಪಸ್ ಪಡೆಯಲಾಗಿದ್ದು, ಕಾಂಗ್ರೆಸ್-ಜೆಡಿಎಸ್ ಒಮ್ಮತದ ಅಭ್ಯರ್ಥಿಯಾಗಿ ಎಚ್.ಡಿ.ದೇವೇಗೌಡ ಅವರು ಕಣದಲ್ಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+