ಆದಿಚುಂಚನಗಿರಿ ಮತ್ತು ಸಿದ್ದಗಂಗಾ ಮಠದ ನಡುವೆ ಉತ್ತಮ ಬಾಂಧವ್ಯ

ತುಮಕೂರು, ಜನವರಿ 21 : ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮತ್ತು ತುಮಕೂರಿನ ಸಿದ್ದಗಂಗಾ ಮಠದ ನಡುವೆ ಉತ್ತಮ ಬಾಂಧವ್ಯವಿದೆ. ಎರಡು ಮಠಗಳು ರಾಜ್ಯದ ಎರಡು ಪ್ರಭಾವಿ ಸಮುದಾಯಕ್ಕೆ ಸೇರಿವೆ ಎಂಬುದು ವಿಶೇಷ.

In Pics: ಕೈಲಾಸಕ್ಕೆ ಹೊರಟರು ಶಿವ ಶರಣ ಶಿವಕುಮಾರ ಸ್ವಾಮಿ

ಲಿಂಗೈಕ್ಯರಾಗಿರುವ ಶತಾಯುಷಿ ಡಾ.ಶಿವಕುಮಾರ ಶ್ರೀಗಳು ಮಂಡ್ಯದ ನಾಗಮಂಗಲದಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಹಲವು ಬಾರಿ ಭೇಟಿ ನೀಡಿದ್ದರು. ಭೈರವೈಕ್ಯ ಬಾಲಗಂಗಾಧರನಾಥ ಶ್ರೀಗಳ ಜೊತೆ ಅವಿನಾಭಾವ ಸಂಬಂಧವನ್ನು ಅವರು ಹೊಂದಿದ್ದರು.

Siddaganaga mutt

ಆದಿಚುಂಚನಗಿರಿ ಕ್ಷೇತ್ರದಲ್ಲಿ ನಡೆಯುತ್ತಿದ್ದ ಸರ್ವಧರ್ಮ ಸಮ್ಮೇಳನ, ರಾಜ್ಯ ಮಟ್ಟದ ಜಾನಪದ ಮೇಳ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಶಿವಕುಮಾರ ಶ್ರೀಗಳು ಪಾಲ್ಗೊಳ್ಳುತ್ತಿದ್ದರು. ಮಠ ವೈದ್ಯಕೀಯ ಕ್ಷೇತ್ರದಲ್ಲಿ ಮಾಡುತ್ತಿದ್ದ ಸೇವೆಯನ್ನು ಶ್ರೀಗಳು ಮೆಚ್ಚಿಕೊಂಡಿದ್ದರು.

ಶ್ರೀ ಮಠದಲ್ಲಿ ನಡೆಯುತ್ತಿದ್ದ ಧಾರ್ಮಿಕ ಕಾರ್ಯಕ್ರಮಗಳು ಮಾತ್ರವಲ್ಲ ಪ್ರತಿ ವರ್ಷ ನಡೆಯುತ್ತಿದ್ದ ಕಾಲಭೈರವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿಯೂ ಶ್ರೀಗಳು ಪಾಲ್ಗೊಂಡಿದ್ದರು. ಕಲಾಮೇಳದ ಬಗ್ಗೆ ಶ್ರೀಗಳು ಮೆಚ್ಚುಗೆ ಸೂಚಿಸಿದ್ದರು.

ಅನಾರೋಗ್ಯದ ಕಾರಣ ಶಿವಕುಮಾರ ಶ್ರೀಗಳು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಲು ಸಾಧ್ಯವಾಗದಿದ್ದಲ್ಲಿ ಮಠದ ಕಿರಿಯ ಶ್ರೀಗಳಾದ ಸಿದ್ಧಲಿಂಗ ಶ್ರೀಗಳನ್ನು ತಮ್ಮ ಪ್ರತಿನಿಧಿಯಾಗಿ ಕಳುಹಿಸಿ ಕೊಡುತ್ತಿದ್ದರು.

Adichunchanagiri

ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಹಲವು ಬಾರಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟಿದ್ದಾರೆ. ಅದರಲ್ಲೂ ಶ್ರೀಗಳು ಆಸ್ಪತ್ರೆಗೆ ದಾಖಲಾದಾಗ ಹಲವು ಬಾರಿ ಭೇಟಿ ಕೊಟ್ಟು, ವೈದ್ಯರಿಂದ ಚಿಕಿತ್ಸೆ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದರು.

ಅದರಲ್ಲೂ ಶಿವಕುಮಾರ ಶ್ರೀಗಳನ್ನು ಅನಾರೋಗ್ಯದ ಸಂದರ್ಭದಲ್ಲಿ ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗುತ್ತಿತ್ತು. ಶ್ರೀಗಳಿಗೆ ಹಲವು ಬಾರಿ ಸ್ಟಂಟ್‌ಗಳನ್ನು ಬಿಜಿಎಸ್‌ನಲ್ಲಿಯೇ ಆಳವಡಿಸಲಾಗಿತ್ತು.

ಡಾ.ಶಿವಕುಮಾರ ಶ್ರೀಗಳ ಅಂತ್ಯಕ್ರಿಯೆ ಮಂಗಳವಾರ ಸಂಜೆ 4.30ಕ್ಕೆ ಡಾ.ನಿರ್ಮಲಾನಂದನಾಥ ಮತ್ತು ಸುತ್ತೂರು ಶ್ರೀಗಳ ನೇತೃತ್ವದಲ್ಲಿ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+